ಯೋಗ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಗೆ ಸಮಗ್ರ ಪ್ರಶಸ್ತಿ
ಮಂಗಳೂರು, ಅಕ್ಟೋಬರ್ 14 : ಮೈಸೂರು ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಬಾಚಿಕೊಂಡರು.
ಉಪ್ಪಿನಂಗಡಿಯ ಸರ್ಕಾರಿ ಮಾದರಿ ಪ್ರೌಢಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ಹಾಗೂ 17 ವರ್ಷದೊಳಗಿನ ಬಾಲಕರು ಹಾಗೂ ಬಾಲಕಿಯರ ಯೋಗ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

14 ವರ್ಷದೊಳಗಿನ ಬಾಲಕಿಯರ ವಿಬಾಗದಲ್ಲಿ ಅನನ್ಯಾ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ಮಲ್ಲಿಕಾರ್ಜುನ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.
17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪವನ್(ಪ್ರಥಮ) ಅಮೋಘ ಸ್ವಾಮೀ(ದ್ವಿತೀಯ),
17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ನಿರ್ಮಲಾ(ಪ್ರಥಮ), ಪ್ರಿಯಾಂಕ( ದ್ವಿತೀಯ), ಸವಿತಾ(ನಾಲ್ಕನೇ ಸ್ಥಾನ), ಪೂಜಾ ( 5ನೇ ಸ್ಥಾನ) ರಿದಮಿಕ್ ಯೋಗದಲ್ಲಿ ಭಾರತಿ ಪ್ರಥಮ ಹಾಗೂ ಅರ್ಟಿಸ್ಟಿಕ್ ಯೋಗದಲ್ಲಿ ರೂಪಾ ಪ್ರಥಮ ಸ್ಥಾನ ಪಡೆದುಕೊಂಡು.












Click it and Unblock the Notifications