ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು, ಜನವರಿ 09: ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಸುದ್ದಿ ಮಾಸುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಆಳ್ವಾಸ್ ಕ್ಯಾಂಪಸ್ ನ ನಂದಿನಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ತೇಜಸ್(16) ತನ್ನ ಜನ್ಮ ದಿನದಂದೇ (ಜನವರಿ 8) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಳ್ವಾಸ್ ನಲ್ಲಿ ಪ್ರಥಮ ಪಿಯುಸಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾಸನ ಮೂಲದ ತೇಜಸ್, ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ.
ಡೆತ್ ನೋಟ್ ನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ದ ನೋವನ್ನು ವಿವರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮೂಡಬಿದಿರೆ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಹಿಂದೆ ಇದೇ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯ ಪೂಜಾರಿ ಆತ್ಮಹತ್ಯೆ ಪ್ರಕರಣ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಕಾವ್ಯ ಸಾವಿನ ತನಿಖೆಯನ್ನು ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಕೈಗೆತ್ತಿಕೊಂಡಿತ್ತು.












Click it and Unblock the Notifications