ಮೂಡಬಿದರೆ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಮೂಡಬಿದರೆ ಸೆಪ್ಟೆಂಬರ್. 07: ಮೂಡಬಿದರೆಯ ಆಳ್ವಾಸ್ ಕಾಲೇಜಿನ ಪ್ರಥಮ ಬಿಕಾಂ ಓದುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಕ್ಷಿತಾ (18) ಸಾವಿಗೆ ಶರಣಾದ ವಿದ್ಯಾರ್ಥಿನಿ. ಹಾಸ್ಟೆಲ್ ನ ಬಾತ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಭಾನುವಾರ ಬೆಳಗ್ಗೆ ತಿಳಿದು ಬಂದಿದೆ. ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಪ್ರತಿಕ್ರಿಯಿಸಿದ್ದು, ಯಾವ ಕಾರಣಕ್ಕೆ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವುದು ಗೊತ್ತಿಲ್ಲ. ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಆಕೆಯ ಸ್ನೇಹಿತೆಯರನ್ನು ವಿಚಾರಿಸಿದ್ದಾರೆ. ಪೊಲೀಸ್ ತನಿಖೆಯಿಂದ ಎರಡು ದಿನದ ಒಳಗಡೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವುದು ಪತ್ತೆಯಾಗಲಿದೆ ಎಂದು ತಿಳಿಸಿದ್ದಾರೆ.
ಪ್ರಥಮ ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಾಸ್ಟೇಲ್ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಆತ್ಮಹತ್ಯೆ ಮಾಡಿಕೊಂಡಿರುವ ರಕ್ಷಿತಾ ತನ್ನ ಕೈ ಮೇಲೆ ಇಬ್ಬರು ಮಹಿಳೆಯರ ಹೆಸರನ್ನು ಬರೆದುಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.












Click it and Unblock the Notifications