ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಮಂಗಳೂರು, ಆಗಸ್ಟ್ 3: ಕರ್ನಾಟಕದ ಕರಾವಳಿಯಲ್ಲಿ ನೈತಿಕ ಪೊಲೀಸ್‌ಗಿರಿಯ ಮತ್ತೊಂದು ಪ್ರಕರಣ ವರದಿಯಾಗಿದ್ದು, ಬುಧವಾರ ರಾತ್ರಿ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಆಟೋ ರಿಕ್ಷಾ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ.
ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿಗೆ ಬಸ್ ಹತ್ತಲು ಉಜಿರೆಯಲ್ಲಿ ಕಾಯುತ್ತಿದ್ದಳು. ಆಗ ಆಟೋರಿಕ್ಷಾ ಚಾಲಕ ಮೊಹಮ್ಮದ್ ಆಸಿಕ್ ಆಕೆಯನ್ನು ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಕರೆದೊಯ್ಯಲು ಮುಂದಾದ. ಮೊಹಮ್ಮದ್ ವಿದ್ಯಾರ್ಥಿಯ ಸಾಮಾನು ಸರಂಜಾಮು ಎತ್ತಿಕೊಳ್ಳಲು ಸಹಾಯ ಮಾಡುತ್ತಿದ್ದಾಗ ಯುವಕರ ಗುಂಪೊಂದು ಸ್ಥಳದಿಂದ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವರದಿಯ ಪ್ರಕಾರ, ಬಹುಶಃ ಪ್ರಯಾಣಿಕರು ಹಿಂದೂ ಎಂಬ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ ನಂತರ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂಬಂದ ಬೆಳ್ತಂಗಡಿ ಪೊಲೀಸರು ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ), 341 (ತಪ್ಪು ತಡೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 504 (ಪ್ರಚೋದನೆ), 506 (ಅಪರಾಧದ ಶಿಕ್ಷೆ), 506 (ಅಪರಾಧಿ ಶಿಕ್ಷೆಗೆ ಶಿಕ್ಷೆ) ಐಪಿಎಸ್‌ಯ 149ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆಗಸ್ಟ್ 1 ರಂದು ಮಂಗಳೂರಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾನೂನು ಪಾಲಕರಿಗೆ ಸೂಚನೆ ನೀಡಿದ್ದರು. ಜೂನ್ 6ರಂದು ಕರಾವಳಿ ಭಾಗದಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದರು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆಂಟಿ ಕಮ್ಯೂನಲ್ ವಿಂಗ್‌ನ ಹೊಸ ಘಟಕ ಆರಂಭಿಸುತ್ತೇವೆ. ಈ ವಿಂಗ್ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಾವೆಲ್ಲಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನರು ಮಾತಾನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.
ಸಮಸ್ಯೆಗಳು ಹಾಗೂ ಸವಾಲುಗಳ ಬಗ್ಗೆ ವಿಚಾರಿಸಿದ್ದೇನೆ. ನನಗೆ ಇದು ಹೊಸದಲ್ಲ. ನಾನು ಮೂರನೇ ಭಾರೀ ಗೃಹ ಸಚಿವನಾಗಿದ್ದೇನೆ. ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹಾಗಾಗಿ ನೈತಿಕ ಪೊಲೀಸ್‌ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಸೂಚನೆ ನೀಡಿದ್ದರು.












Click it and Unblock the Notifications