ದಕ್ಷಿಣ ಕನ್ನಡದಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ-ಆ್ಯಂಟಿ ಕಮ್ಯುನಲ್ ವಿಂಗ್ ವಿರುದ್ಧ ಆಕ್ರೋಶ

ಮಂಗಳೂರು, ಫೆಬ್ರವರಿ 07: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಿರಂತರವಾಗಿ ನಡೆಯುತ್ತಿದ್ದು, ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್ ವಿಂಗ್ ರಚಿಸಿದರೂ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ. ಕಳೆದೆರಡು ಮೂರು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆಯುತ್ತಿದೆ.

ಮಂಗಳೂರಿನಲ್ಲಿ ಆಗಸ್ಟ್‌ನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ಬಂದಿದ್ದು, ಆ್ಯಂಟಿ ಕಮ್ಯುನಲ್ ವಿಂಗ್ ಆದ ಬಳಿಕ ಪ್ರತಿ ತಿಂಗಳಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆಯುತ್ತಿದೆ. ಈ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಗರಂ ಆಗಿದ್ದಾರೆ.

 Moral Policing Increasing in Dakshina Kannada district

ಅಕ್ಟೋಬರ್ 12ರಂದು ಬಂಟ್ವಾಳದಲ್ಲಿ ನೈತಿಕ ಪೊಲೀಸ್ ಗಿರಿ, ನವೆಂಬರ್ 27ರಂದು ನಗರದ ಮೋರ್ಗನ್ ಗೇಟ್ಸ್‌ನಲ್ಲಿ ನೈತಿಕ ಪೊಲೀಸ್ ಗಿರಿ, ಡಿಸೆಂಬರ್ 10 ರಂದು ಪುತ್ತೂರು ಠಾಣಾ ಉಪ್ಪಿನಂಗಡಿ ಮತ್ತೆ ನೈತಿಕ ಪೊಲೀಸ್ ಗಿರಿ, ಡಿಸೆಂಬರ್ 22 ರಂದು ಹಂಪನಕಟ್ಟೆಯಲ್ಲಿ ಕೇರಳದ ಯುವಕ ಮತ್ತು ಯುವತಿ ಮೇಲೆ ನೈತಿಕ ಪೊಲೀಸ್ ಗಿರಿ, ಡಿಸೆಂಬರ್ 25ರಂದು ಉಳ್ಳಾಲದ ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣ, ಜನವರಿ16 ರಂದು ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ, ಜನವರಿ 19ರಂದು ಕದ್ರಿ ಪಾರ್ಕ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ, ಫೆಬ್ರವರಿ 5ರಂದು ಪಣಂಬೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ.

ನೈತಿಕ ಪೊಲೀಸ್ ಗಿರಿ ತಡೆಯಲು ಪೊಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಆ್ಯಂಟಿ ಕಮ್ಯುನಲ್ ವಿಂಗ್ ಸಂಪೂರ್ಣವಾಗಿ ವೈಫಲ್ಯವಾಗಿದೆ. ಈ ವಿಂಗ್‌ನ ಬಗ್ಗೆ ಮಾಹಿತಿಯೇ ಇಲ್ಲ. ನಾಮಾಕಾವಸ್ತೆಗೆ ಆ್ಯಂಟಿ ಕಮ್ಯುನಲ್ ವಿಂಗ್ ರಚನೆಯಾಗಿದೆ. ನೈತಿಕ ಪೊಲೀಸ್ ಗಿರಿಯಿಂದಾಗಿ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ.

ಕಂಪೆನಿಗಳು ಮಂಗಳೂರಿನಲ್ಲಿ ಹೂಡಿಕೆ ಮಾಡಲು ಹಿಂದೇಟು ಹಾಕುತ್ತಿದೆ. ಪ್ರವಾಸಿಗರು ಮಂಗಳೂರನ್ನು ಪ್ರವಾಸಕ್ಕೆ ಆಯ್ಕೆ ಮಾಡುತ್ತಿಲ್ಲ ಎಂದು ಪೊಲೀಸ್ ಇಲಾಖೆಯ ಬಗ್ಗೆ ಸಾಮಾಜಿಕ ಹೋರಾಟಗಾರರ ಆಕ್ರೋಶ ಹೊರಹಾಕಿದ್ದಾರೆ.

ವಾಸ್ತಾವಾಂಶದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್‌ಗೆ ಅಧಿಕಾರಿಗಳೇ ಇಲ್ಲ. ಸಿಸಿಬಿ ಅಧಿಕಾರಿಗಳಿಂದಲೇ ಆ್ಯಂಟಿ ಕಮ್ಯುನಲ್ ವಿಂಗ್‌ನ ಕಾರ್ಯಾಚರಣೆ ಮಾಡುತ್ತಿದ್ದಾರೆ. ಹೆಚ್ಚುವರಿ ಅಧಿಕಾರಿಗಳನ್ನು ವಿಂಗ್‌ನ ನೇಮಕ ಮಾಡುವಂತೆ ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಿರಂತರ ನೈತಿಕ ಪೊಲೀಸ್ ಗಿರಿ ಪ್ರಕರಣ ಹಿನ್ನಲೆಯಲ್ಲಿ ಜನ ಜಾಸ್ತಿ ಇರುವ ಸಂದರ್ಭ ಬೀಚ್‌ಗಳಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+