• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಈ ಬಾರಿ ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾರರು ಸೇರ್ಪಡೆ:ಜಿಲ್ಲಾಧಿಕಾರಿ

|

ಮಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಸುಸೂತ್ರವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತಗಳು ಸಿದ್ಧತೆ ನಡೆಸಿವೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಕೂಡ ಚುನಾವಣೆ ತಯಾರಿ ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 16ರವರೆಗೆ 16,97417 ಮತದಾರರಿದ್ದಾರೆ. 2014ರ ಲೋಕಸಭಾ ಚುನಾವಣೆಗೆ ಈ ಮತದಾರರ ಸಂಖ್ಯೆ 15,64,114 ಇತ್ತು. 2104 ರ ಚುನಾವಣೆಗೆ ಹೋಲಿಸಿದರೆ ಈ ಲೋಕಸಭಾ ಚುನಾವಣೆಯಲ್ಲಿ 1,33,303 ಹೆಚ್ಚು ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದು ಅವರು ಹೇಳಿದರು.

ಎಸ್ಪಿ-ಬಿಎಸ್ಪಿ ಅಭ್ಯರ್ಥಿ ಅಮೇಥಿ, ರಾಯ್ಬರೇಲಿಯಲ್ಲಿ ಸ್ಪರ್ಧಿಸೋಲ್ಲ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥೀಲ್, ಸದ್ಯದ ಮತದಾರರ ಪಟ್ಟಿಯಲ್ಲಿರುವವರಲ್ಲಿ 21,292 ಮತದಾರರು 18ರಿಂದ 19 ವರ್ಷ ವಯಸ್ಸಿನ ಯುವ ಮತದಾರರು ಎಂದು ಹೇಳಿದರು. ಅದಲ್ಲದೇ ಈ ಬಾರಿ ಮತದಾರರ ಪಟ್ಟಿಯಲ್ಲಿ 99 ತೃತೀಯ ಲಿಂಗಿಗಳಿದ್ದಾರೆ ಎಂದು ತಿಳಿಸಿದರು.

ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನೀತಿ ಸಂಹಿತೆ ಅಡ್ಡಿ

ಈ ಬಾರಿ ಚುನಾವಣೆಯಲ್ಲಿ ಫೋಟೋ ವೋಟರ್ ಸ್ಲಿಪ್ ಗುರುತಿನ ಚೀಟಿಯಾಗಿ ಪರಿಗಣಿಸಲ್ಪಡುವುದಿಲ್ಲ. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಕಡ್ಡಾಯವಾಗಿರುವ ಜತೆಗೆ, ಮತದಾರರು ಮತದಾನದ ವೇಳೆ ಮತದಾರರ ಗುರುತಿನ ಚೀಟಿ ಅಥವಾ ಚುನಾವಣಾ ಆಯೋಗ ನಿಗದಿಪಡಿಸಿರುವ ಇತರ 11 ಗುರುತಿನ ದಾಖಲೆಗಳನ್ನು ಹೊಂದಿರಲೇ ಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿರು.

 1,861 ಮತಗಟ್ಟೆಗಳು ಸ್ಥಾಪನೆಯಾಗಲಿವೆ

1,861 ಮತಗಟ್ಟೆಗಳು ಸ್ಥಾಪನೆಯಾಗಲಿವೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಲೋಕಸಭಾ ಚುನಾವಣೆಗೆ 1,861 ಮತಗಟ್ಟೆಗಳು ಸ್ಥಾಪಿಸಲಾಗುವುದೆಂದು ಹೇಳಿದ ಜಿಲ್ಲಾಧಿಕಾರಿಗಳು, ಕಳೆದ ಚುನಾವಣೆಯಲ್ಲಿ ಮತಗಟ್ಟೆಗಳ ಸಂಖ್ಯೆ 1,790 ಆಗಿತ್ತು. ಆದರೆ ಈ ಬಾರಿ ಹೆಚ್ಚುವರಿ ಮತಗಟ್ಟೆಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.

 ಹೆಚ್ಚುವರಿ ಯಂತ್ರಗಳು ಲಭ್ಯ

ಹೆಚ್ಚುವರಿ ಯಂತ್ರಗಳು ಲಭ್ಯ

ಇವಿಎಂ ಯಂತ್ರಗಳ ಜತೆ ಈ ಬಾರಿಯೂ ವಿವಿ ಪ್ಯಾಟ್ ಗಳನ್ನು ಉಪಯೋಗಿಸಲಾಗುತ್ತಿದ್ದು, ನಿಗದಿಗಿಂತಲೂ ಹೆಚ್ಚುವರಿ ಯಂತ್ರಗಳು ಲಭ್ಯವಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಯಂತ್ರಗಳ ಪ್ರಥಮ ಹಂತದ ಪರಿಶೀಲನೆ ನಡೆಸಲಾಗಿದೆ. ಜಿಪಿಎಸ್ ವ್ಯವಸ್ಥೆಯ ಮೂಲಕ ಇವಿಎಂ ಹಾಗೂ ವಿವಿ ಪ್ಯಾಟ್ ಗಳ ಚಲನವಲನದ ಕುರಿತಂತೆ ಮಾಹಿತಿಯು ಲಭ್ಯವಾಗಲಿದೆ.

ಬಿಎಸ್ಪಿ-ಎಸ್ಪಿ ಮೈತ್ರಿ : ಪ್ರಧಾನಿ ಮೋದಿ ವಿರುದ್ಧ ಪ್ರಬಲ ಸ್ಪರ್ಧಿ ಬಹುತೇಕ ಫೈನಲ್?

 ಪೋಸ್ಟರ್, ಬ್ಯಾನರ್ ಅಳವಡಿಸುವಂತಿಲ್ಲ

ಪೋಸ್ಟರ್, ಬ್ಯಾನರ್ ಅಳವಡಿಸುವಂತಿಲ್ಲ

ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಈಗಾಗಲೇ ಜಿಲ್ಲಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗಿರುವ ಬ್ಯಾನರ್, ಪೋಸ್ಟರ್, ಫ್ಲೆಕ್ಸ್ ಗಳನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ. ಸಾರ್ವಜನಿಕ ಸ್ಥಳ, ಪ್ರದೇಶಗಳಲ್ಲಿ ಕಾನೂನುಬಾಹಿರ ಪೋಸ್ಟರ್, ಬ್ಯಾನರ್ ಅಳವಡಿಸುವಂತಿಲ್ಲ. ಖಾಸಗಿ ಸ್ಥಳಗಳಲ್ಲಿ ಹಾಕಲಾಗಿರುವ ಬ್ಯಾನರ್ ಪೋಸ್ಟರ್ ಗಳನ್ನೂ ಸಂಬಂಧಪಟ್ಟವರು ತೆರವುಗೊಳಿಸಬೇಕು. ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆಯೂ ಸ್ಥಳೀಯ ಸಂಸ್ಥೆಗಳ ಅನುಮತಿಯನ್ನು ಪಡೆಯಬೇಕಾಗುತ್ತದೆ. ಸಂಬಂಧಪಟ್ಟವರು ತೆರವುಗೊಳಿಸದಿದ್ದರೆ 24 ಗಂಟೆಯೊಳಗೆ ಜಿಲ್ಲಾಡಳಿತವೇ ತೆರವುಗೊಳಿಸಲಿದೆ ಎಂದು ಅವರು ಎಚ್ಚರಿಸಿದರು.

 ಧ್ವನಿವರ್ಧಕಗಳ ಬಳಕೆ ನಿರ್ಬಂಧ

ಧ್ವನಿವರ್ಧಕಗಳ ಬಳಕೆ ನಿರ್ಬಂಧ

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಗೂ ನಿರ್ಬಂಧವಿರುತ್ತದೆ ಎಂದು ಹೇಳಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥೀಲ್, ಅಭ್ಯರ್ಥಿಯ ಚುನಾವಣಾ ಖರ್ಚುವೆಚ್ಚಗಳನ್ನು ಪರಿಶೀಲಿಸಲು ಜಿಲ್ಲೆಲ್ಲಿ 73 ಫ್ಲೈಯಿಂಗ್ ಸ್ಕ್ವಾಡ್ ತಂಡಗಳು, 62 ಮೇಲ್ವಿಚಾರಣಾ ತಂಡಗಳು, 25 ವೀಡಿಯೊ ಮೇಲ್ವಿಚಾರಣಾ ತಂಡಗಳು ಕಾರ್ಯನಿರ್ವಹಿಸುತ್ತವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ; ಯಾವ ಕ್ಷೇತ್ರದಲ್ಲಿ ಯಾವಾಗ?

English summary
Deputy Commissioner S. Sasikanth Senthil said Dakshina Kannada district administration all set for upcoming Loksabha Election 2019. More than 1,33,303 voters have joined in this election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X