ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಹದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 300 ಕೋಟಿಗೂ ಅಧಿಕ ನಷ್ಟ

|
Google Oneindia Kannada News

ಮಂಗಳೂರು, ಆಗಸ್ಟ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಹಾಗು ಪ್ರವಾಹದಿಂದ ಜಿಲ್ಲೆಯಲ್ಲಿ ಸರಿ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಬೆಳ್ತಂಗಡಿ-ಬಂಟ್ವಾಳದಲ್ಲಿ ನಷ್ಟದ ಪ್ರಮಾಣ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಸದ್ಯ ಜಿಲ್ಲಾಡಳಿತವು ವಿವಿಧ ಇಲಾಖೆಗಳಿಂದ ನಷ್ಟದ ವರದಿ ಸಿದ್ಧಪಡಿಸುತ್ತಿದೆ.

ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ 238 ಕೋಟಿ ರೂಪಾಯಿಗಳಷ್ಟು ನಷ್ಟ ಸಂಭವಿಸಿತ್ತು. ಆದರೆ ಒಂದು ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಈ ಬಾರಿ ಕೃಷಿ ಕ್ಷೇತ್ರದಲ್ಲಾದ ನಷ್ಟವನ್ನು ಹೊರತುಪಡಿಸಿ ಸರಿ ಸುಮಾರು 275 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಅಂತಿಮ ನಷ್ಟದ ಅಂದಾಜು ಇನ್ನಷ್ಟೇ ಸಿಗಬೇಕಿದೆ.

ಸುರಿವ ಮಳೆ ನಡುವೆಯೇ ಮಂಗಳೂರಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಆಚರಣೆಸುರಿವ ಮಳೆ ನಡುವೆಯೇ ಮಂಗಳೂರಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸದ್ಯದ ಮಾಹಿತಿ ಪ್ರಕಾರ, ಮಂಗಳೂರು ತಾಲೂಕಿನಲ್ಲಿ 96.02 ಕೋಟಿ ರೂಪಾಯಿ, ಬಂಟ್ವಾಳದಲ್ಲಿ 31.68 ಕೋಟಿ ರೂಪಾಯಿ, ಬೆಳ್ತಂಗಡಿಯಲ್ಲಿ 74.47 ಕೋಟಿ ರೂಪಾಯಿ, ಪುತ್ತೂರು 44.67 ಕೋಟಿ ರೂಪಾಯಿ ಹಾಗೂ ಸುಳ್ಯ 27.79 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

More Then 300 Crore Loss In Dakshina Kannada District

ಈ ಬಾರಿ ಸುರಿದ ಭಾರೀ ಮಳೆಗೆ ಬೆಳ್ತಂಗಡಿಯಲ್ಲಿ ನಿರೀಕ್ಷೆಗೂ ಮೀರಿ ಕಷ್ಟನಷ್ಟಗಳು ಸಂಭವಿಸಿವೆ. ಅಧಿಕ ನಷ್ಟ ಆಗಿರುವುದು ಮಂಗಳೂರು ತಾಲೂಕಿನಲ್ಲಿ. ಮಂಗಳೂರು ತಾ.ಪಂ, ಮಹಾನಗರ ಪಾಲಿಕೆ, ಉಳ್ಳಾಲ ನಗರಸಭೆ, ಮೂಲ್ಕಿ ಪುರಸಭೆ, ಕೋಟೆಕಾರು ಪ.ಪಂ. ಸೇರಿದಂತೆ ಸ್ಥಳೀಯ ಸಂಸ್ಥೆಗಳು ಅಧಿಕವಿರುವ ಕಾರಣ ಇಲ್ಲಿ ನಷ್ಟದ ಪ್ರಮಾಣ ಅಧಿಕ ಎಂದು ಹೇಳಲಾಗಿದೆ. ಮಂಗಳೂರು ತಾಲೂಕಿನಲ್ಲಿ 96.02 ಕೋಟಿ ರೂಪಾಯಿ ನಷ್ಟ ಸಂಭವಿಸಿದ್ದರೆ, ಬೆಳ್ತಂಗಡಿಯಲ್ಲಿ 74.47 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ.

ಆಗಸ್ಟ್ 15ರಿಂದ ಸೆಪ್ಟೆಂಬರ್ 14ರವರೆಗೆ ಚಾರ್ಮಾಡಿ ಘಾಟ್ ರಸ್ತೆ ಬಂದ್ಆಗಸ್ಟ್ 15ರಿಂದ ಸೆಪ್ಟೆಂಬರ್ 14ರವರೆಗೆ ಚಾರ್ಮಾಡಿ ಘಾಟ್ ರಸ್ತೆ ಬಂದ್

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭತ್ತ, ಅಡಿಕೆ, ತೆಂಗು, ಬಾಳೆ, ಕಾಳು ಮೆಣಸು ಬೆಳೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಕೃಷಿ ಇಲಾಖೆಯ ಮಾಹಿತಿ ಪ್ರಕಾರ 793 ಹೆಕ್ಟೇರ್‌ ಭತ್ತ ಬೆಳೆ ನಾಶವಾಗಿದೆ. ತೋಟಗಾರಿಕೆ ಇಲಾಖೆಯ ಮಾಹಿತಿ ಪ್ರಕಾರ ಸುಮಾರು 4,200 ಹೆಕ್ಟೇರ್‌ ಅಡಿಕೆ-ತೆಂಗು, ಬಾಳೆ ಕೃಷಿಗೆ ಹಾನಿಯಾಗಿದ್ದು, 19 ಕೋಟಿ ರೂಪಾಯಿ ನಷ್ಟವಿರುವುದಾಗಿ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ 325 ಪಕ್ಕಾ ಮನೆ ಮತ್ತು 220 ಕಚ್ಚಾ ಮನೆಗಳಿಗೆ ಹಾನಿಯಾಗಿದೆ. ಬೆಳ್ತಂಗಡಿ-ಚಾರ್ಮಾಡಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಭವಿಸಿರುವ ನಷ್ಟದ ಬಗ್ಗೆ ಸಂಪೂರ್ಣ ವರದಿ ಸಿದ್ಧಪಡಿಸಲು ಕೇಂದ್ರ ಸರಕಾರದ ಉನ್ನತ ಅಧಿಕಾರಿಗಳ ತಂಡ ಕೆಲವೇ ದಿನಗಳಲ್ಲಿ ಕರಾವಳಿಗೆ ಆಗಮಿಸಲಿದೆ.

English summary
Due to heavy rain and flood, it is estimated that more then 300 crore loss in Dakshina Kannada district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X