• search
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಜಯ ಬ್ಯಾಂಕ್ ವಿಲೀನಕ್ಕೆ ವಿರೋಧ: ಎಚ್ಚೆತ್ತುಕೊಂಡ ಬಿಜೆಪಿ

|

ಮಂಗಳೂರು, ಜನವರಿ 09: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುಟ್ಟಿ ರಾಷ್ಟ್ರದ ಉದ್ದಗಲಕ್ಕೂ ಬೆಳೆದ ಪ್ರತಿಷ್ಠಿತ ವಿಜಯಾ ಬ್ಯಾಂಕ್ ವಿಲೀನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಸರಕಾರದ ಈ ಬ್ಯಾಂಕ್ ವಿಲೀನ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ರಸ್ತೆಗಿಳಿದು ಹೋರಾಟ ಆರಂಭಿಸಿದೆ.

ವಿಜಯಾ ಬ್ಯಾಂಕ್ ವಿಲೀನ: ದಕ್ಷಿಣ ಕನ್ನಡ ಜಿಲ್ಲಾ ಬಂದ್ ನೀರಸ

ಮಾಜಿ ಸಚಿವ ಬಿ ರಮಾನಾಥ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯಾ ಬ್ಯಾಂಕ್ ವಿಲೀನ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ತೀವ್ರ ತರಾಟೆಗೆ ತೆಗೆದು ಕೊಳ್ಳಲಾಗಿತ್ತು. ಸಾಮಾಜಿಕ ಜಾಲತಾಣ ಗಳಲ್ಲೂ ಸಂಸದರು,ರಾಜ್ಯದ ಕೇಂದ್ರ ಸಚಿವರ ಆಕ್ಷೇಪಗಳು ಕೇಳಿ ಬಂದಿದ್ದವು.

ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಜ.9 ರಂದು ಮಂಗಳೂರು ಬಂದ್‌ಗೆ ಯೂತ್ ಕಾಂಗ್ರೆಸ್ ಕರೆ

ಇತರ ಬ್ಯಾಂಕ್ ಗಳೊಂದಿಗೆ ವಿಜಯಾ ಬ್ಯಾಂಕ್ ವಿಲೀನಕ್ಕೆ ವಿರೋಧ ಹೆಚ್ಚುತ್ತಿದಂತೆ ಬಿಜೆಪಿ ಎಚ್ಚೆತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮುಂಬೈ ಸಂಸದ ಗೋಪಾಲ ಶೆಟ್ಟಿ ಇವರನ್ನೊಳಗೊಂಡ ನಿಯೋಗವು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದೆ.

MP delegation meet Arun Jaitly over Vijaya Bank merger issue

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ವಿಜಯಾ ಬ್ಯಾಂಕ್ ನ್ನು ಬ್ಯಾಂಕ್ ಆಫ್ ಬರೋಡಾ ಮತ್ತು ದೇನಾ ಬ್ಯಾಂಕುಗಳೊಂದಿಗೆ ವಿಲೀನ ಮಾಡಿರುವುದನ್ನು ಮರುಪರಿಶೀಲಿಸುವಂತೆ ನಿಯೋಗ ಆಗ್ರಹಿಸಿದೆ. ಹಾಗೂ ವಿಲೀನಗೊಂಡ ಈ ಬ್ಯಾಂಕ್ ಗೆ "ವಿಜಯಾ ಬ್ಯಾಂಕ್" ಎಂದು ನಾಮಕರಣ ಮಾಡಿ ವಿಜಯಾಬ್ಯಾಂಕಿನ ಹೆಸರನ್ನು ಉಳಿಸಿಕೊಡುವಂತೆ ಸಂಸದರ ನಿಯೋಗ ಅರುಣ್ ಜೇಟ್ಲಿ ಅವರಿಗೆ ಮನವಿ ಮಾಡಿದೆ. ಸಂಸದರ ಮನವಿಗೆ ಹಣಕಾಸು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ದಕ್ಷಿಣ ಕನ್ನಡ ರಣಕಣ
ಡೆಮೊಗ್ರಫಿಕ್ಸ್
ಜನಸಂಖ್ಯೆ
20,89,649
ಜನಸಂಖ್ಯೆ
 • ಗ್ರಾಮೀಣ
  52.33%
  ಗ್ರಾಮೀಣ
 • ನಗರ
  47.67%
  ನಗರ
 • ಎಸ್ ಸಿ
  7.09%
  ಎಸ್ ಸಿ
 • ಎಸ್ ಟಿ
  3.94%
  ಎಸ್ ಟಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
MP Nalin Kumar Kateel, Shoba Karndlaje , Mumbai MP Gopal Shetty delegation meet central finance minister Arun Jaitly over Vijaya Bank merger issue.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more