ತಿಂಗಳೊಳಗೆ ಕುಡ್ಲ ಎಕ್ಸ್ ಪ್ರೆಸ್ ರೈಲು ಸಂಚಾರ: ಸುರೇಶ್ ಪ್ರಭು
ಮಂಗಳೂರು, ಮಾರ್ಚ್. 29 : ಮಂಗಳೂರು-ಹಾಸನ-ಶ್ರವಣಬೆಳಗೋಳ ಮಾರ್ಗವಾಗಿ ಬೆಂಗಳೂರು ಸಂಪರ್ಕಿಸುವ ಕುಡ್ಲ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಒಂದು ತಿಂಗಳೊಳಗೆ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ದಕ್ಷಿಣ ಕನ್ನಡ ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರಿಗೆ ಭರವಸೆ ನೀಡಿದ್ದಾರೆ.
ಈ ಬಗ್ಗೆ ಮಂಗಳವಾರ ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿಯಾದ ನಳಿನ್ ಕುಡ್ಲ ಎಕ್ಸ್ ಪ್ರೆಸ್ ರೈಲಿಗೆ ಶೀಘ್ರ ಚಾಲನೆ ನೀಡುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಸಚಿವರು, ಒಂದು ತಿಂಗಳೊಳಗಾಗಿ ಪ್ರಾರಂಭಿಸುವ ಭರವಸೆ ನೀಡಿದ್ದಾರೆ.

ಇದಲ್ಲದೆ ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದ ಹೆಚ್ಚುವರಿ ಪ್ಲಾಟ್ ಫಾರಂ ಮತ್ತು ನೇತ್ರಾವತಿ ಕ್ಯಾಬಿನ್ ನಿಂದ ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದ ಡಬ್ಲಿಂಗ್ ಕಾಮಗಾರಿಯನ್ನು ಶೀಘ್ರ ಪೂರೈಸುವಂತೆಯೂ ಕಟೀಲ್ ಮನವಿ ಸಲ್ಲಿಸಿದ್ದಾರೆ.
ಮಂಗಳೂರು - ಬೆಂಗಳೂರು ರೈಲು ಮಾರ್ಚ್ 26 ರಂದು ಸಂಚಾರ ಆರಂಭಿಸಬೇಕಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿದೆ. ಕುಡ್ಲ ಎಕ್ಸ್ ಪ್ರೆಸ್ ರೈಲಿಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರಂ ಹಾಗೂ ನಿಲುಗಡೆಗೆ ಸ್ಥಳಾವಕಾಶವಿಲ್ಲ ಎಂದು ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗವು ಹೇಳಿತ್ತು.












Click it and Unblock the Notifications