ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನವಯುಗ ಸಂಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಸದ ನಳಿನ್ ಕುಮಾರ್ ಕಟೀಲ್

|
Google Oneindia Kannada News

ಮಂಗಳೂರು, ಜನವರಿ 24: ಮಂಗಳೂರಿನ ಪಂಪ್ ವೆಲ್ ಮತ್ತು ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಈವರೆಗೂ ಪೂರ್ಣಗೊಂಡಿಲ್ಲ. ಕಾಮಗಾರಿ ಪೂರ್ಣಗೊಳಿಸಲು ನವಯುಗ ಗುತ್ತಿಗೆ ಸಂಸ್ಥೆಗೆ ಗಡುವು ನೀಡಿದ್ದರೂ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ ತೋರಿದ್ದರಿಂದ ನವಯುಗ ಸಂಸ್ಥೆಯ ವಿರುದ್ಧ ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದೆ ಸಮಸ್ಯೆ ಸೃಷ್ಟಿಸಿರುವ ನವಯುಗ ಗುತ್ತಿಗೆ ಸಂಸ್ಥೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಳಿನ್ ಕುಮಾರ್ ಕಟೀಲ್ ಮೊಯ್ಲಿಯವರ ಬಳಿ ಕ್ಷಮೆ ಕೇಳಲಿ: ರಮಾನಾಥ್ ರೈನಳಿನ್ ಕುಮಾರ್ ಕಟೀಲ್ ಮೊಯ್ಲಿಯವರ ಬಳಿ ಕ್ಷಮೆ ಕೇಳಲಿ: ರಮಾನಾಥ್ ರೈ

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಗುಂಡ್ಯದಿಂದ ಬಿ.ಸಿ.ರೋಡ್ ವರೆಗೆ ಸ್ಥಗಿತಗೊಳಿಸಿದ ನಾಲ್ಕು ಪಥದ ಕಾಂಕ್ರೀಟ್ ಕಾಮಗಾರಿಯನ್ನು ಒಂದು ವಾರದೊಳಗೆ ಪುನರಾರಂಭಿಸದಿದ್ದರೆ ಎಲ್‌ ಆಂಡ್‌ ಟಿ ಸಂಸ್ಥೆ ವಿರುದ್ಧವೂ ಕೇಸು ದಾಖಲಿಸಲಾಗುವುದೆಂದು ಸಂಸದ ನಳಿನ್ ಎಚ್ಚರಿಕೆ ನೀಡಿದ್ದಾರೆ.

MP Nalin Kumar Kateel warned Navayug company

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಜತೆ ನಿನ್ನೆ ಸಂಜೆ ಸಭೆ ನಡೆಸಿದ ಸಂಸದ ನಳಿನ್ ಕುಮಾರ್ ಕಟೀಲ್, ಕಾಮಗಾರಿಯ ಗುತ್ತಿಗೆ ಪಡೆದಿರುವ ಸಂಸ್ಥೆಯ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ ಯುಪಿಎ ಸರ್ಕಾರದ ಕೂಸು: ನಳಿನ್ ಕುಮಾರ್ ಕಟೀಲ್ ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ ಯುಪಿಎ ಸರ್ಕಾರದ ಕೂಸು: ನಳಿನ್ ಕುಮಾರ್ ಕಟೀಲ್

ಜನವರಿ 28ರೊಳಗೆ ನವಯುಗ ಸಂಸ್ಥೆ ವ್ಯವಸ್ಥಾಪಕರು ಮಂಗಳೂರಿಗೆ ಬಂದು ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಲಿಖಿತ ಭರವಸೆ ನೀಡದಿದ್ದಲ್ಲಿ, ಮಂಗಳೂರು ಹೊರವಲಯದ ತಲಪಾಡಿಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸಿ ನವಯುಗ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಎದುರಿಸಬೇಕು ಎಂದು ಎಚ್ಚರಿಸಿದ್ದಾರೆ.

 ಮತ್ತೆ ಚಿಗುರಿಕೊಂಡ ಮಂಗಳೂರಿಗರ ಪ್ರತ್ಯೇಕ ರೈಲ್ವೆ ವಿಭಾಗದ ಕನಸು ಮತ್ತೆ ಚಿಗುರಿಕೊಂಡ ಮಂಗಳೂರಿಗರ ಪ್ರತ್ಯೇಕ ರೈಲ್ವೆ ವಿಭಾಗದ ಕನಸು

ಫೆಬ್ರವರಿ 20ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳೂರಿಗೆ ಆಗಮಿಸಲಿದ್ದು, ರಾಷ್ಟ್ರೀಯ ಹೆದ್ದಾರಿ 169ರ ಮೂಡುಬಿದಿರೆ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಂದು ಹೆದ್ದಾರಿ ಯೋಜನೆಗಳ ಉದ್ಘಾಟನೆಗೂ ತೀರ್ಮಾನಿಸಲಾಗಿದೆ. ಅಷ್ಟರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದುನಳಿನ್ ಕುಮಾರ್ ಕಟೀಲ್ ನವಯುಗ ಹಾಗು ಎಲ್ ಆಂಡ್ ಟಿ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

English summary
Mangaluru MP Nalin Kaumar Kateel warned Navayug and L&T officials to Complete flyover work of Pumpwel and Thokkotu or face criminal case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X