ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೋಭಾ ಕರಂದ್ಲಾಜೆ ಹುಟ್ಟೂರಿನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇಕೆ?

|
Google Oneindia Kannada News

Recommended Video

Lok Sabha Elections 2019 : ಶೋಭಾ ಕರಂದ್ಲಾಜೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಕೈ ತಪ್ಪಲಿದ್ಯಾ?

ಮಂಗಳೂರು, ಮಾರ್ಚ್ 20: ಭಾರೀ ವಿರೋಧದ ನಡುವೆಯೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಬಹುತೇಕ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ದೊರಕಲಿದೆ ಎಂದು ಹೇಳಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಶೋಭಾ ಕರಂದ್ಲಾಜೆ ಇಂದು ತಮ್ಮ ಹುಟ್ಟೂರಿನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರತಿ ಬಾರಿಯೂ ಚುನಾವಣೆಗೆ ಧುಮುಕುವ ಮೊದಲು ಹಾಗೂ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ತಮ್ಮ ಹುಟ್ಟೂರಾದ ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ.

ಮೋದಿ ವಿಶ್ವವಿದ್ಯಾಲಯದಲ್ಲಿ ಶೋಭಾ ಕರಂದ್ಲಾಜೆ ಫೇಲ್!ಮೋದಿ ವಿಶ್ವವಿದ್ಯಾಲಯದಲ್ಲಿ ಶೋಭಾ ಕರಂದ್ಲಾಜೆ ಫೇಲ್!

ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕವೇ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಸುವುದು ಹಿಂದಿನಿಂದಲೂ ಪಾಲಿಸಿಕೊಂಡು ಬಂದ ವಾಡಿಕೆ.

MP Shobha Karandlaje offered special pooja in temple

ಈ ಹಿನ್ನೆಲೆಯಲ್ಲಿ ಇಂದು ಶ್ರೀ ಕಪಿಲೇಶ್ವರ ದೇವಸ್ಥಾನಕ್ಕೆ ಶೋಭಾ ಕರಂದ್ಲಾಜೆ ತನ್ನ ತಾಯಿ ಪೂವಕ್ಕ, ಸಹೋದರ ಲಕ್ಷ್ಮಣ ಕರಂದ್ಲಾಜೆ ಸಹಿತ ಹಲವು ಬಿಜೆಪಿ ಕಾರ್ಯಕರ್ತರೊಂದಿಗೆ ಆಗಮಿಸಿ ದೇವರೆದುರು ಪ್ರಾರ್ಥನೆ ಸಲ್ಲಿಸಿದರು. ನಂತರ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಪ್ರಾರ್ಥನೆ ಸಲ್ಲಿಸಿದ್ದಾರೆ.

ಉತ್ತರಕ್ಕೆ ಪ್ರತ್ಯುತ್ತರ ಕೊಡುವ ಸಿಂಹದ ಮರಿ‌ ಮೋದಿ:ಶೋಭಾ ಕರಂದ್ಲಾಜೆಉತ್ತರಕ್ಕೆ ಪ್ರತ್ಯುತ್ತರ ಕೊಡುವ ಸಿಂಹದ ಮರಿ‌ ಮೋದಿ:ಶೋಭಾ ಕರಂದ್ಲಾಜೆ

ಮಾರ್ಚ್ 26 ರಂದು ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.

English summary
MP Shobha Karandlaje along with her family members and BJP activists visited Sri Kapileshwara temple in Charvaka near Puttur. Sources said that Shobha's ticket confirmed to contest from Udupi- Chikkamagaluru Loksabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X