ಲವ್ ಜಿಹಾದ್: ಭಜರಂಗದಳ ಕಾರ್ಯಕರ್ತನ ಬಂಧನ

ಮಂಗಳೂರು, ಜನವರಿ 19: ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿ ರೇಷ್ಮಾ ಶಂಕಿತ ಲವ್ ಜಿಹಾದ್ ಪ್ರಕರಣಕ್ಕೆ ಟ್ವೀಸ್ಟ್ ಸಿಕ್ಕಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿ ಪೊಲೀಸರು ಮಂಗಳೂರಿನ ಬಜರಂಗದಳದ ಕಾರ್ಯಕರ್ತನೊಬ್ಬನನ್ನು ಬಂಧಿಸಿದ್ದಾರೆ.

ಕಾಸರಗೋಡು ಮೂಲದ ಶ್ರೀಮಂತ ಉದ್ಯಮಿಯೊಬ್ಬರ ಪುತ್ರಿ ರೇಷ್ಮಾ ಮುಂಬೈ ನ ಇಕ್ಬಾಲ್ ಚೌಧರಿ ಎಂಬವರೊಂದಿಗೆ ಕಾಣೆಯಾಗಿದ್ದರು. ಇದು ಲವ್ ಜಿಹಾದ್ ಪ್ರಕರಣ ಎಂದು ರೇಷ್ಮಾ ಹೆತ್ತವರು ಹಾಗು ಹಿಂದೂ ಸಂಘಟನೆಗಳ ಮುಖಂಡರು ಆರೋಪಿಸಿದ್ದು ಇತ್ತಿಚೆಗೆ ಭಾರಿ ಸುದ್ದಿಯಾಗಿತ್ತು.

ಆದರೆ ಒಂದೆಡೆ ರೇಷ್ಮಾ ಹೆತ್ತವರು ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿದರೆ ಇನ್ನೊಂದೆಡೆ ರೇಷ್ಮಾ ಪತಿ ಎಂದು ಹೇಳಲಾಗುವ ಇಕ್ಬಾಲ್ ಚೌಧರಿ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದ ತನ್ನ ಪತ್ನಿ ರೇಷ್ಮಾಳನ್ನ ಬಲವಂತವಾಗಿ ಆಕೆಯ ಕುಟುಂಬದ ಸದಸ್ಯರು ಅಪಹರಿಸಿದ್ದಾರೆ ಎಂದು ಆರೋಪಿಸಿದ್ದ. ಹೀಗಾಗಿ ಪತ್ನಿ ರೇಷ್ಮಾಳನ್ನ ಪತ್ತೆ ಮಾಡಿ ಕೊಡಿ ಎಂದು ಪತಿ ಇಕ್ಬಾಲ್ ಚೌಧರಿ ಮುಂಬೈ ಹೈ ಕೋರ್ಟ್ನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ. ಇದು ಮುಂಬಯಿ ಪೊಲೀಸರ ನಿದ್ದೆಗೆಡಿಸಿತ್ತು.

Mumbai police arrest Bajrang Dal activist in Reshma Love jihad incident

ಆದರೆ ರೇಷ್ಮಾ ಮಾತ್ರ ತನ್ನನ್ನ ಯಾರೂ ಅಪಹರಿಸಿಲ್ಲ, ನನ್ನ ಇಚ್ಚೆಯನುಸಾರವೇ ತಂದೆ-ತಾಯಿಯ ಜೊತೆಗೆ ಬಂದಿದ್ದೇನೆ ಎಂದು ಅಫಿಡವಿಟ್ ಸಲ್ಲಿಸಿದ್ದಾಳೆ ಎಂದು ಹೇಳಲಾಗಿತ್ತು. ಅದರ ಪ್ರತಿಯನ್ನ ಮುಂಬೈ ಪೊಲೀಸರಿಗೆ ರೇಷ್ಮಾ ಪೋಷಕರು ನೀಡಿದ್ದಾರೆ ಎನ್ನಲಾಗಿದೆ.

ಮುಂಬೈ ಹೈಕೋರ್ಟ್ ಒಂದು ವಾರದೊಳಗೆ ರೇಷ್ಮಾಳನ್ನ ಪತ್ತೆ ಮಾಡಿ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ಮುಂಬೈ ಪೊಲೀಸರಿಗೆ ಆದೇಶ ನೀಡಿತ್ತು. ಹೀಗಾಗಿ ಮುಂಬೈ ಪೊಲೀಸರು ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದ್ದರು. ಮಂಗಳೂರಿನಲ್ಲಿರುವ ರೇಷ್ಮಾಳ ಮನೆ ಸೇರಿದಂತೆ ಸಂಬಂಧಿಕರಲ್ಲಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ್ದರು.

Mumbai police arrest Bajrang Dal activist in Reshma Love jihad incident

ಮಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದ ಮುಂಬೈ ಪೊಲೀಸರು ಈಗ ಬಜರಂಗದಳದ ಕಾರ್ಯಕರ್ತ ಸುನೀಲ್ ಪಂಪ್ ವೆಲ್ ಎಂಬವರನ್ನು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಆದರೆ ಸುನಿಲ್ ಪಂಪ್ ವೆಲ್ ಬಂಧನದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಇಲ್ಲ. ಆದರೆ ಈ ನಡುವೆ ರೇಷ್ಮಾಳನ್ನು ಪತ್ತೆ ಮಾಡುವಲ್ಲಿ ಮುಂಬಯಿ ಪೊಲೀಸರಿಗೆ ಸಾದ್ಯವಾಗಿಲ್ಲ ಎಂದು ಹೇಳಲಾಗಿದೆ.

ರೇಷ್ಮಾ ಮತ್ತು ಇಕ್ಬಾಲ್ ಪ್ರೇಮಪ್ರಕರಣವನ್ನು ಹಿಂದೂ ಸಂಘಟನೆಗಳ ಮುಖಂಡರು ಲವ್ ಜಿಹಾದ್ ಎಂದು ಆರೋಪಿಸಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ರೇಷ್ಮಾ ಲವ್ ಜಿಹಾದ್ ಪ್ರಕರಣದ ತನಿಖೆಯನ್ನು ಎನ್ ಐ ಎ ಗೆ ವಹಿಸಲು ಮನವಿಯನ್ನು ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+