ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು; ಪಿಂಕಿ ನವಾಝ್ ಹತ್ಯೆ ಯತ್ನ, 9 ಆರೋಪಿಗಳ ಬಂಧನ

|
Google Oneindia Kannada News

ಮಂಗಳೂರು, ಫೆಬ್ರವರಿ 19; ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನವಾಝ್ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಬಂಧಿಸಲಾಗಿದೆ.

ಸುರತ್ಕಲ್ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫೆಬ್ರವರಿ 10ರಂದು ನವಾಝ್‌ ಅಲಿಯಾಸ್ ಪಿಂಕಿ ನವಾಝ್‌ ಹತ್ಯೆ ಮಾಡಲು ಪ್ರಯತ್ನ ನಡೆದಿತ್ತು.

ದೀಪಕ್ ರಾವ್ ಹತ್ಯೆ; ಪ್ರಮುಖ ಆರೋಪಿ ಕೊಲೆಗೆ ಯತ್ನದೀಪಕ್ ರಾವ್ ಹತ್ಯೆ; ಪ್ರಮುಖ ಆರೋಪಿ ಕೊಲೆಗೆ ಯತ್ನ

ಬಂಧಿತ ಆರೋಪಿಗಳನ್ನು ಪ್ರಕಾಶ್ ಭಂಡಾರಿ (29), ಶಾಕೀಬ್ (29), ಶೈಲೇಶ್ ಪೂಜಾರಿ (19), ಹನೀಫ್ (20), ಸುವಿನ್ ಕಾಂಚನ್ (23), ಲಕ್ಷ್ಮೀಶ್ (26), ಅಹ್ಮದ್ ಸಾದಿಕ್ (23), ನಿಸಾರ್ ಹುಸೈನ್ (29), ರಂಜನ್ ಶೆಟ್ಟಿ (24) ಎಂದು ಗುರುತಿಸಲಾಗಿದೆ.

ಮಂಗಳೂರು; ನ್ಯಾಪ್ ಕಿನ್‌ನಲ್ಲಿ ಚಿನ್ನ, ಇಬ್ಬರು ಮಹಿಳೆಯರ ಬಂಧನ

Murder Attempt On Pinki Navaz 9 Accused Arrested

ಪಿಂಕಿ ನವಾಝ್‌ ಹತ್ಯೆಯತ್ನ ಪ್ರಕರಣದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಹತ್ಯೆ ಯತ್ನ ನಡೆಸಿದ ನಾಲ್ವರು, ಸಹಕಾರ ನೀಡಿದ ಐದು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರು; ತಿಥಿ ಮಾಡುವಾಗ ಜೀವಂತವಾಗಿ ಪ್ರತ್ಯಕ್ಷವಾದ ವ್ಯಕ್ತಿ!ಮಂಗಳೂರು; ತಿಥಿ ಮಾಡುವಾಗ ಜೀವಂತವಾಗಿ ಪ್ರತ್ಯಕ್ಷವಾದ ವ್ಯಕ್ತಿ!

ಬಂಧಿತ ಆರೋಪಿಗಳ ಪೈಕಿ ಎಂಟು ಜನರ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪಕ್ ರಾವ್ ಹತ್ಯೆ; 2018ರ ಜನವರಿ 3ರಂದು ಮೊಬೈಲ್ ಕಂಪನಿಯೊಂದರ ಎಕ್ಸಿಕ್ಯೂಟಿವ್, ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಮಾಡಲಾಗಿತ್ತು. ಪಿಂಕಿ ನವಾಝ್‌ ಈ ಹತ್ಯೆ ಪ್ರಕರಣದ ಪ್ರಮುಖ ಆರೋಪಿ.

English summary
Surathkal and Mangaluru CCB police arrested 9 accused uin connection with the murder attempt on Pinki Navaz who is main accused in Deepak Rao murder case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X