ಕಾಂಗ್ರೆಸ್ ಗೆ ಬಿಸಿ ತುಪ್ಪವಾದ ದಕ್ಷಿಣಕನ್ನಡ ಮುಸ್ಲಿಂ ಸೆಂಟ್ರಲ್ ಕಮಿಟಿಯ ತೀರ್ಮಾನ

ಮಂಗಳೂರು, ಅಕ್ಟೋಬರ್. 25:ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹುಡುಕಾಟ ಆರಂಭಿಸಿದೆ.

ದಕ್ಷಿಣ ಕನ್ನಡ ಕಾಂಗ್ರೆಸ್ ಪಾಳಯದಲ್ಲಿ ಮಾಜಿ ಸಚಿವ ರಮಾನಾಥ್ ರೈ , ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅದಲ್ಲದೇ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡ ತೆರೆಮರೆಯಲ್ಲಿ ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಗೆ ಇನ್ನೊಂದು ಮಂಡೆ ಬಿಸಿ ಆರಂಭವಾಗಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಬೇಡಿಕೆ ಇಟ್ಟಿದೆ. ಈ ಕುರಿತು ನಿನ್ನೆ ಸಂಜೆ ಮಂಗಳೂರಿನಲ್ಲಿ ನಡೆದಿದೆ.

Muslim Central Committee has demanded Congress give ticket to the Muslim candidate

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಹಾಗೂ ಮಂಗಳೂರು ಲೋಕಸಭೆ ಕ್ಷೇತ್ರ ಕ್ರಿಯಾ ಸಮಿತಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ ಎಸ್ ಮಹಮ್ಮದ್ ಮಸೂದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕಾಂಗ್ರೆಸ್ ಪಕ್ಷ ಈವರೆಗೆ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಈವರೆಗೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ. ಈ ಮೊದಲೇ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕಿತ್ತು. ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದ ಬಳಿಕವೂ ನಾವು ಟಿಕೆಟ್ ಗಾಗಿ ಹಕ್ಕೊತ್ತಾಯ ಮಂಡಿಸುತ್ತಿದ್ದೇವೆ. ನಮ್ಮ ನ್ಯಾಯಯುತ ಬೇಡಿಕೆಗೆ ಮನ್ನಣೆ ಕೊಡುವುದು ಪಕ್ಷದ ಹೊಣೆಗಾರಿಕೆ ಎಂದು ಕೆ ಎಸ್ ಮಹಮ್ಮದ್ ಮಸೂದ್ ಸಭೆಯಲ್ಲಿ ಅಭಿಪ್ರಾಯಟ್ಟಿದ್ದಾರೆ.

Muslim Central Committee has demanded Congress give ticket to the Muslim candidate

ಮುಸ್ಲಿಂ ಅಭ್ಯರ್ಥಿ ಯಾರು ಎಂಬುದನ್ನು ಉಪ ಸಮಿತಿ ಮೂಲಕ ತೀರ್ಮಾನಿಸಿ ಘೋಷಿಸುತ್ತೇವೆ . ನವೆಂಬರ್ 30 ರ ಒಳಗೆ ಕಾಂಗ್ರೆಸ್ ನಾಯಕರು ತಮ್ಮ ತೀರ್ಮಾನ ತಿಳಿಸಬೇಕು. ಡಿಸೆಂಬರ್ 15 ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಮುಸ್ಲಿಂ ಸಂಘಟನೆಗಳ ಸಮಾವೇಶದಲ್ಲಿ ನಮ್ಮ ತೀರ್ಮಾನವನ್ನು ಹೇಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಮುಸ್ಲಿಂ ಸೆಂಟ್ರಲ್ ಕಮಿಟಿಯ ಈ ತೀರ್ಮಾನ ಕಾಂಗ್ರೆಸ್ ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯ ಆಯ್ಕೆ ಕಾಂಗ್ರೆಸ್ ಗೆ ಕಗ್ಗಂಟಾಗಿ ಪರಿಣಮಿಸಲಿದೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+