'ಸೌಹಾರ್ದತೆಯ' ಶೋಭಾಯಾತ್ರೆಗೆ ಮುಸ್ಲಿಮರಿಂದ ಸ್ವಾಗತ
ಮಂಗಳೂರು, ಜನವರಿ 7: ಶ್ರೀ ಉಳ್ಳಾಲ್ತಿ ಅಮ್ಮನವರ ನೂತನ ಸ್ವರ್ಣ ಬಿಂಬ ಹಾಗೂ ಕಂಚಿನ ಬಿಂಬಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಶ್ರೀ ಉಳ್ಳಾಲ್ತಿ ಧರ್ಮ ಅರಸರ ಧರ್ಮ ನಡಾವಳಿ ಮಹೋತ್ಸವ ಜನವರಿ 6 ರಿಂದ 12ರ ಸೌಹಾರ್ದಯುತವಾಗಿ ನಡೆಯಲಿದ್ದು ಇದರ ಅಂಗವಾಗಿ ನಡೆದ ಶೋಭಾಯಾತ್ರೆಯನ್ನು ಮುಸಲ್ಮಾನರು ಸ್ವಾಗತಿಸಿದರು.
ಈ ಪ್ರಯುಕ್ತ ಶುಕ್ರವಾರ ಸಂಜೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಇರುವ ಜೈ ವೀರಮಾರುತಿ ವ್ಯಾಯಾಮ ಶಾಲೆಯಲ್ಲಿ ಆರಂಭಗೊಂಡ ಹೊರೆಕಾಣಿಕೆ ಮೆರವಣಿಗೆಗೆ ಉಮಾಪುರಿಯ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ.ಶೇಖರ್ ಚಾಲನೆ ನೀಡಿದರು. ಸುಮಾರು ಸಾವಿರಕ್ಕೂ ಅಧಿಕ ಹಿಂದೂ ಧರ್ಮಿಯರು ಹೊರೆಕಾಣಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಮಾಸ್ತಿಕಟ್ಟೆ ಜಂಕ್ಷನ್ ನಲ್ಲಿ 50ಕ್ಕೂ ಅಧಿಕ ಮುಸ್ಲಿಂ ಬಾಂಧವರು ಮೆರವಣಿಗೆಯನ್ನು ಸ್ವಾಗತಿಸಿದರು. ಎಲ್ಲರಿಗೂ ತಂಪು ಪಾನೀಯ ಮತ್ತು ಕುಡಿಯುವ ನೀರು ವಿತರಿಸಿದರು.[ದಸರಾ : ಮಡಿಕೇರಿಯಲ್ಲಿ ದಶ ಮಂಟಪಗಳ ಶೋಭಾಯಾತ್ರೆ]

ಪಾನೀಯ ವಿತರಣೆಯ ನೇತೃತ್ವ ವಹಿಸಿದ್ದ ಉಳ್ಳಾಲ ನಗರಸಭೆ ಮಾಜಿ ಸದಸ್ಯ ಉಸ್ಮಾನ್ ಕಲ್ಲಾಪು ಮಾತನಾಡಿ, ಉಳ್ಳಾಲದಲ್ಲಿ ಎಲ್ಲರೂ ಜತೆಯಾಗಿ ಬಾಳುತ್ತಿದ್ದೇವೆ. ಹೊರೆಕಾಣಿಕೆ ಮೆರವಣಿಗೆಯಲ್ಲಿ ಎಲ್ಲರೂ ಪಾಲ್ಗೊಳ್ಳುವ ಹಾಗೂ ಮೆರವಣಿಗೆಯಲ್ಲಿ ಭಕ್ತರಿಗೆ ತಂಪು ಪಾನೀಯ ವಿತರಿಸಿರುವುದು ಇದಕ್ಕೆ ಸಾಕ್ಷಿ. ಉಳ್ಳಾಲದಲ್ಲಿ ಕೆಡುಕು ಉಂಟು ಮಾಡುವ ಕೆಲವರಿಗೆ ಇದು ಪಾಠವಾಗಲಿದೆ ಎಂದರು.

ನಗರಸಭೆ ಸದಸ್ಯ ಮುಸ್ತಾಫ, ಸ್ಥಳೀಯರಾದ ಫೈರೋಝ್, ಅದ್ರಾಮ, ಮೋನು, ಅಹಮ್ಮದ್ ಬಾವಾ ಕೊಟ್ಟಾರ ತಂಪು ಪಾನೀಯಗಳನ್ನು ವಿತರಿಸಿದರು. ಇದು ಎಲ್ಲರ ಮೆಚ್ಚುಗೆಗೆ ಕಾರಣವಾಯಿತು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications