ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಕ್ಕೆ ಸುಬ್ರಹ್ಮಣ್ಯಕ್ಕೆ 2.5 ಕೋಟಿಯ ಬ್ರಹ್ಮರಥ ನೀಡಲಿರುವ ಮುತ್ತಪ್ಪ ರೈ

|
Google Oneindia Kannada News

Recommended Video

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮರಥಕ್ಕೆ 2.5 ಕೋಟಿ ಕೊಟ್ಟ ಮುತ್ತಪ್ಪ ರೈ | Oneindia Kannada

ಮಂಗಳೂರು, ಮಾರ್ಚ್ 14: ಪರಶುರಾಮ ಸೃಷ್ಟಿಯ ಸಪ್ತ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬ್ರಹ್ಮ ರಥ ನೀಡಲು ಉದ್ಯಮಿ ಮುತ್ತಪ್ಪ ರೈ ಹಾಗೂ ಬಿಡದಿ ರಿಯಾಲಿಟಿ ವೆಂಚರ್ ಪಾಲುದಾರ ಅಜಿತ್ ಶೆಟ್ಟಿ ನಿರ್ಧರಿಸಿದ್ದಾರೆ.

ಜಂಟಿಯಾಗಿ ಎರಡೂವರೆ ಕೋಟಿ ಮೌಲ್ಯದ ಬ್ರಹ್ಮರಥವನ್ನು ದೇವಸ್ಥಾನಕ್ಕೆ ನೀಡಲು ನಿರ್ಧರಿಸಿದ್ದಾರೆ. ಗುರುವಾರ ಇಬ್ಬರೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಬ್ರಹ್ಮರಥ ನೀಡುವುದಕ್ಕೆ ಎಲೆ ವೀಳ್ಯ ಸ್ವೀಕರಿಸಲಿದ್ದಾರೆ.

ಬಳಿಕ ಬ್ರಹ್ಮರಥ ಕೆತ್ತನೆಯ ಕಾರ್ಯ ಆರಂಭವಾಗಲಿದೆ. ಬ್ರಹ್ಮರಥವನ್ನ ರಾಷ್ಟ್ರ, ರಾಜ್ಯ, ಶಿಲ್ಪಕಲಾ ಅಕಾಡಮಿ ಪ್ರಶಸ್ತಿ ಪುರಸ್ಕೃತ, ರಾಷ್ಟ್ರೀಯ ಶಿಲ್ಪ ಗುರು ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವ ಖ್ಯಾತ ಶಿಲ್ಪಿ, ಕುಂದಾಪುರ ತಾಲೂಕಿನ ಕೋಟಾದ ಶಿಲ್ಪಿ ಲಕ್ಷ್ಮೀ ನಾರಾಯಣ ಆಚಾರ್ಯರ ಉಸ್ತುವಾರಿಯಲ್ಲಿ ತಯಾರಿಸಲಾಗುತ್ತೆ. ರಥದ ಕೆತ್ತನೆಗೆ ದಾಂಡೇಲಿ ಅರಣ್ಯದಿಂದ ದೊಡ್ಡ ಮರ ತರಲಾಗತ್ತೆ. ಬ್ರಹ್ಮರಥ 64.10 ಅಡಿ ಉದ್ದ, 18 ಅಡಿ ಅಗಲವಿರಲಿದೆ.

Muttappa Rai and aide donate Brahmarath to Kukke Temple

ಈ ಹಿಂದೆ ಮುತ್ತಪ್ಪ ರೈ ತಮ್ಮ ಗ್ರಾಮದ ದೇವರು ಪುತ್ತೂರು ಮಹಾಲಿಂಗೇಶ್ವರನಿಗೆ 1 ಕೋಟಿ ಮೌಲ್ಯದ ಬ್ರಹ್ಮರಥವನ್ನು ಕೊಟ್ಟು ಗಮನ ಸೆಳೆದಿದ್ದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಬ್ರಹ್ಮರಥ ಬೇಕೆಂಬ ಬೇಡಿಕೆ ಕಳೆದ 10 ವರ್ಷಗಳಿಂದಲೂ ಇತ್ತು. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಕೂಡ ಮನವಿ ಸಲ್ಲಿಸಿತ್ತು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಇದೀಗ ಮುತ್ತಪ್ಪ ರೈ ಮತ್ತು ಅಜಿತ್ ಶೆಟ್ಟಿ ಜಂಟಿಯಾಗಿ ಎರಡೂವರೆ ಕೋಟಿ ಮೌಲ್ಯದ ಬ್ರಹ್ಮರಥವನ್ನು ನೀಡಲು ಮುಂದಾಗಿದ್ದಾರೆ. ಮುತ್ತಪ್ಪ ರೈ ಈ ಹಿಂದೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1ಕೋಟಿ ರೂ ವೆಚ್ಚದ ಬ್ರಹ್ಮರಥವನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಿಸಿ ದೇವಸ್ಥಾನಕ್ಕೆ ನೀಡಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೀಡಲಿದ್ದಾರೆ.

English summary
Former don turned social worker Muttapa Rai and his business partner Ajith shetty have jointly donated Brahmarath to Kukke subrahmanya temple worth of Rs.2.5 crores.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X