ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು; ಸಿನಿಮಾ ಶೈಲಿಯಲ್ಲಿ ಮೈಸೂರಿನ ಫೋಟೋಗ್ರಾಫರ್ ಕೊಲೆ!

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್ 2; ಆತ ವೃತ್ತಿಯಲ್ಲಿ ಫೋಟೋಗ್ರಾಫರ್. ಮೈಸೂರಿನಲ್ಲಿ ಮನೆಯಿದ್ದರೂ ತನ್ನದೇ ಸಂಬಂಧಿಕರಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕೃಷಿ ಭೂಮಿ ಖರೀದಿಸಿದ್ದ. ಪುತ್ತೂರಿಗೆ ಬಂದು ಕೃಷಿ ಭೂಮಿ ನೋಡಿಕೊಂಡು ಹೋಗುತ್ತಿದ್ದ. ಆದರೆ ಈ ಬಾರಿ ಪುತ್ತೂರಿಗೆ ಬಂದವನು ಮತ್ತೆ ಮೈಸೂರಿಗೆ ಹೋಗಿಲ್ಲ. ಸಂಬಂಧಿಕರಿಂದಲೇ ಭೀಕರವಾಗಿ ಹತ್ಯೆಗೀಡಾಗಿದ್ದಾನೆ.

ಆಸ್ತಿಯಾಸೆಗೆ ಸಂಬಂಧಿಕರಿಂದಲೇ ಹತ್ಯೆಯಾದ ವ್ಯಕ್ತಿಯ ಹೆಸರು ಜಗದೀಶ್. ಮೈಸೂರಿನ ಸುಬ್ರಹ್ಮಣ್ಯ ನಗರದ ನಿವಾಸಿ. ಮೈಸೂರಿನಲ್ಲಿ ಫೋಟೋಗ್ರಾಫರ್ ಆಗಿರುವ ಈತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಜೂರುಪಂಜದಲ್ಲಿ ತನ್ನ ಸಂಬಂಧಿ ಬಾಲಕೃಷ್ಣ ರೈ ಜೊತೆ ಸೇರಿ ಎರಡು ಎಕರೆ ಕೃಷಿ ಭೂಮಿ ಖರೀದಿಸಿದ್ದರು.

ಮಂಗಳೂರು; ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಮಂಗಳೂರು; ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ

ಇದನ್ನು ನೋಡಿಕೊಳ್ಳುವುದಕ್ಕೆ ಬಾಲಕೃಷ್ಣರವರಿಗೆ ಜವಾಬ್ದಾರಿ ನೀಡಿ ತಾನು ಮೈಸೂರಿನಿಂದ ಆಗಾಗ ಬಂದು ನೋಡಿಕೊಂಡು ಹೋಗುತ್ತಿದ್ದರು. ಅದರಂತೆ ನವೆಂಬರ್ 17ರಂದು ಮೈಸೂರಿನಿಂದ ಪುತ್ತೂರಿಗೆ ಬಂದಿದ್ದ ಜಗದೀಶ್ ಆ ಬಳಿಕ ವಾಪಾಸು ಮೈಸೂರಿಗೆ ತೆರಳದೇ ನಾಪತ್ತೆಯಾಗಿದ್ದರು.

Mysuru Based Photographer Murdered In Puttur

ಈ ಬಗ್ಗೆ ಜಗದೀಶ್ ಕುಟುಂಬಸ್ಥರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಆದರೆ ಈ ನಾಪತ್ತೆ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಜಗದೀಶ್ ತನ್ನ ಸಂಬಂಧಿ ಬಾಲಕೃಷ್ಣ ರೈಯಿಂದಲೇ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

 ಕೇರಳ: ಪತ್ನಿಯ ಎದುರೇ ಆರ್‌ಎಸ್‌ಎಸ್‌ ಕಾರ್ಯಕರ್ತನ ಬರ್ಬರ ಹತ್ಯೆ ಕೇರಳ: ಪತ್ನಿಯ ಎದುರೇ ಆರ್‌ಎಸ್‌ಎಸ್‌ ಕಾರ್ಯಕರ್ತನ ಬರ್ಬರ ಹತ್ಯೆ

ಆಸ್ತಿಗಾಗಿ ಕೊಲೆ; ಕೃಷಿ ಭೂಮಿಯನ್ನು ಕೊಲೆಯಾದ ಜಗದೀಶ್ ಮುಗುಳಿ ನಿವಾಸಿ ವಿಲಿಯರ್ಸ್ ಸುಬ್ಬಯ್ಯ ಅಲಿಯಾಸ್ ಬಾಲಕೃಷ್ಣ ರೈ ಎಂಬವರ ಜೊತೆ ಸೇರಿ ಖರೀದಿಸಿದ್ದರು. ಈ ಜಾಗದ ಖರೀದಿಯ ಬಳಿಕ ಜಾಗವನ್ನು ನೋಂದಣಿ ಮಾಡಲು ಜಗದೀಶ್ ಸಂಬಂಧಿ ಬಾಲಕೃಷ್ಣ ರೈ ಹಿಂದೇಟು ಹಾಕಿದ್ದರು. ಪುತ್ತೂರಿನ ಆರ್ಯಾಪು ಗ್ರಾಮದ ಕುಂಜೂರು ಪಂಜದಲ್ಲಿ ಜಮೀನನ್ನು ಖರೀದಿಸಿರುವ ಜಗದೀಶ್ ಆ ಜಾಗದಲ್ಲಿ ಮನೆ ನಿರ್ಮಿಸಿ ಪುತ್ತೂರಿನಲ್ಲೇ ಸೆಟಲ್ ಆಗಲು ತೀರ್ಮಾನಿಸಿದ್ದರು.

ಇಂಜೆಕ್ಷನ್ ಕೊಟ್ಟು ವೈದ್ಯನಿಂದ ಪತ್ನಿ ಹತ್ಯೆ; ಪೊಲೀಸರ ಸ್ಪಷ್ಟನೆ ಇಂಜೆಕ್ಷನ್ ಕೊಟ್ಟು ವೈದ್ಯನಿಂದ ಪತ್ನಿ ಹತ್ಯೆ; ಪೊಲೀಸರ ಸ್ಪಷ್ಟನೆ

ಈ ನಡುವೆ ಈ ಜಾಗವನ್ನು ಜಗದೀಶ್ ರೈ ಗಮನಕ್ಕೆ ತಾರದೆ ಬಾಲಕೃಷ್ಣ ರೈ ತಮ್ಮ ಹೆಸರಿಗೆ ಮಾಡಿಕೊಂಡು ಮಾರಾಟ ಮಾಡಲು ತೀರ್ಮಾನಿಸಿದ್ದರು. ಈ ವಿಚಾರದ ಬಗ್ಗೆ ಮಾತುಕತೆ ನಡೆಸಲು ಜಗದೀಶ್ ನವಂಬರ್ 17ರಂದು ಮೈಸೂರಿನಿಂದ ಪುತ್ತೂರಿಗೆ ಬಂದಿದ್ದರು.

ಪುತ್ತೂರಿಗೆ ಬಂದ ಬಳಿಕ ಜಗದೀಶ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅನುಮಾನಗೊಂಡ ಜಗದೀಶ್ ಮನೆಯವರು ಮೈಸೂರಿನಲ್ಲಿ ಈ ಸಂಬಂಧ ಪೋಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಈ ನಡುವೆ ಜಗದೀಶ್ ನಾಪತ್ತೆಯ ವಿಚಾರವಾಗಿ ಪೋಲೀಸರು ಬಾಲಕೃಷ್ಣ ರೈ ಅವರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ಆರೋಪಿ ಬಾಲಕೃಷ್ಣ ರೈ ಪೋಲೀಸರಿಗೆ ಜಗದೀಶ್ ನವಂಬರ್ 18ರಂದೇ ಮೈಸೂರಿಗೆ ವಾಪಾಸು ಹೋಗಿದ್ದಾರೆ ಹಾಗೂ ಅವರನ್ನು ಮಾರುತಿ ಒಮ್ನಿ ಕಾರಿನಲ್ಲೇ ತಾನೇ ಸುಳ್ಯಕ್ಕೆ ಕಳುಹಿಸಿರುವುದಾಗಿ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಪೋಲೀಸರು ಜಗದೀಶ್ ಪತ್ತೆಗಾಗಿ ಶೋಧ ನಡೆಸಿದ್ದರು.

ಈ ನಡುವೆ ಆರೋಪಿ ಬಾಲಕೃಷ್ಣ ರೈ ನೀಡಿದ ಮಾಹಿತಿಯನ್ನು ಪರಿಶೀಲಿಸಿದ ಪೋಲೀಸರಿಗೆ ಆರೋಪಿಯು ಜಗದೀಶ್ ಅವರನ್ನು ಮಾರುತಿ ಒಮ್ನಿ ಕಾರಿನಲ್ಲಿ ಸುಳ್ಯಕ್ಕೆ ಕಳುಹಿಸಿದ ಕುರಿತ ಯಾವುದೇ ಕುರುಹು ದೊರೆತಿಲ್ಲ. ಪುತ್ತೂರಿನ ಕಾವು ಎಂಬಲ್ಲಿ ಕಾರು ನಿಲ್ಲಿಸಿ ಸುಳ್ಯಕ್ಕೆ ಕಳುಹಿಸಿರುವುದಾಗಿ ಹೇಳಿಕೆ ನೀಡಿರುವುದನ್ನು ಪರಿಶೀಲಿಸಿದ ಸ್ಥಳೀಯ ಪೋಲೀಸರು ಕಾವಿನ ಮಸೀದಿಯೊಂದರ ಸಿಸಿ ಕ್ಯಾಮಾರಾವನ್ನು ಪರಿಶೀಲಿಸಿದ ಸಂದರ್ಭದಲ್ಲಿ ಆರೋಪಿ ಹೇಳಿದ ಸಮಯದಲ್ಲಿ ಇಂಥಹ ಯಾವುದೇ ಘಟನೆ ನಡೆದಿರುವುದು ಪೊಲೀಸರ ಗಮನಕ್ಕೆ ಬಂದಿದೆ.

dead body

ಈ ಅನುಮಾನದ ಹಿನ್ನಲೆಯಲ್ಲಿ ಆರೋಪಿ ಬಾಲಕೃಷ್ಣ ರೈಯನ್ನು ಸೂಕ್ತ ತನಿಖೆ ನಡೆಸಿದ ಸಂದರ್ಭದಲ್ಲಿ ಆರೋಪಿಯ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತನ್ನ ಮಗ ಹಾಗೂ ಇನ್ನೊಬ್ಬ ಯುವಕನ ಜೊತೆ ಸೇರಿಕೊಂಡು ಜಗದೀಶ್ ಅವರನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಈ ಹಿನ್ನಲೆಯಲ್ಲಿ ಪೋಲೀಸರು ಬಾಲಕೃಷ್ಣ ರೈ, ಆತನ ಮಗ ಪ್ರಶಾಂತ್ ರೈ ಹಾಗೂ ಜೀವನ್ ಗೌಡ ಎನ್ನುವ ಮೂವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಆರೋಪಿಗಳು ಸುತ್ತಿಗೆಯಿಂದ ಜಗದೀಶ್ ತಲೆಗೆ ಹೊಡೆದು ಕೊಲೆ ನಡೆಸಿರುವ ಸಾಧ್ಯತೆಯಿದ್ದು, ಈ ಸಂಬಂಧ ಪೊಲೀಸರು ಕೊಲೆಗೆ ಬಳಸಿದ ಮಾರಕಾಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ನಡೆಸಿದ ಬಳಿಕ ಆರೋಪಿಗಳು ಜಗದೀಶ್ ಶವವನ್ನು ಮುಗುಳಿ ರಕ್ಷಿತಾರಣ್ಯದಲ್ಲಿ ಮಣ್ಣಿನಲ್ಲಿ ಹೂತಿದ್ದು, ಯಾರಿಗೂ ಸಂಶಯ ಬಾರದ ರೀತಿಯಲ್ಲಿ ರಾತ್ರೋರಾತ್ರಿ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.

ಮೊಬೈಲ್ ಮೈಸೂರಲ್ಲಿ ಪತ್ತೆ; ಜಗದೀಶ್ ಅವರನ್ನು ಕೊಲೆ ನಡೆಸಿದ ಬಳಿಕ ಆರೋಪಿಗಳು ಕೊಲೆಯ ಬಗ್ಗೆ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಜಗದೀಶ್ ಅವರ ಮೊಬೈಲ್ ಪೋನನ್ನು ನವಂಬರ್ 18ರಂದೇ ಜಗದೀಶ್ ಮನೆಯ ಪಕ್ಕದಲ್ಲೇ ಎಸೆದು ಹೋಗಿದ್ದು, ಪೊಲೀಸರು ಮೊಬೈಲ್‌ನ ಲೊಕೇಶನ್ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಗದೀಶ್ ಮೊಬೈಲ್ ಮೈಸೂರಿನಲ್ಲೇ ಇರುವುದು ಬೆಳಕಿಗೆ ಬಂದಿದೆ. ಇದರಿಂದಾಗಿ ಆರೋಪಿಗಳ ಬಗ್ಗೆ ಪೋಲೀಸರಿಗೆ ಮೊದಲಿಗೆ ಯಾವುದೇ ಸಂದೇಹವೂ ಬಂದಿರಲಿಲ್ಲ.

ಪ್ರಮುಖ ಆರೋಪಿಯಾಗಿರುವ ಬಾಲಕೃಷ್ಣ ರೈ ಕೊಲೆಯಾದ ಜಗದೀಶ್ ಅವರ ದೂರದ ಸಂಬಂಧಿಯಾಗಿದ್ದು, ಜಗದೀಶ್ ಅವರಿಂದ ನಿರಂತರ ಹಣವನ್ನು ಪಡೆದುಕೊಂಡು ವಂಚನೆ ನಡೆಸುತ್ತಿದ್ದ ಎನ್ನುವ ಮಾಹಿತಿಯೂ ಇದೀಗ ಬೆಳಕಿಗೆ ಬಂದಿದೆ. ಅಲ್ಲದೆ ಆರೋಪಿ ಬಾಲಕೃಷ್ಣ ರೈ ಈ ಹಿಂದೆ ಊರಿನ ಕೃಷಿ ತೋಟದಿಂದ ಕೃಷಿ ಪಂಪ್ ಗಳನ್ನು ಕದ್ದು ಮಾರಾಟ ಮಾಡುತ್ತಿದ್ದು, ಈ ಕಾರಣಕ್ಕಾಗಿ ಆತನಿಗೆ ಊರಿನಲ್ಲಿ ವಿಲಿಯರ್ಸ್ ಸುಬ್ಬಯ್ಯ ಎನ್ನುವ ಅಡ್ಡ ಹೆಸರಲ್ಲೂ ಗುರುತಿಸಿಕೊಂಡಿದ್ದರು.

ಪ್ರಾರಂಭದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕೃತ್ಯ ಬೆಳಕಿಗೆ ಬಂದ ಬಳಿಕ ಕೊಲೆ ಪ್ರಕರಣವಾಗಿ ದಾಖಲು ಮಾಡಿದ್ದಾರೆ. ಒಟ್ಟಿನಲ್ಲಿ ವಿಶ್ವಾಸ ದ್ರೋಹ ಮಾಡಿ ಕೊಲೆ ಕೃತ್ಯ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಜಗದೀಶ್ ಸಂಬಂಧಿಕರ ಒತ್ತಾಯವಾಗಿದೆ.

English summary
Jagadeesh Rai Mysuru based photographer found murder in Puttur, Dakshina Kannada. Relatives killed him for the asset.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X