• search
 • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕದ ಮೊದಲ ವಿಸ್ಟಾಡಾಮ್‌ ಕೋಚ್‌ ರೈಲು ಸಂಚಾರ ಆರಂಭ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 11; ಕರ್ನಾಟಕದ ಮೊದಲ ವಿಸ್ಟಾಡಾಮ್ ಕೋಚ್‌ ರೈಲಿಗೆ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದೆ. ಪ್ರವಾಸೋದ್ಯಮವನ್ನು ಆಕರ್ಷಕವಾಗಿಸಲು ಈ ವಿನೂತನ ಯೋಜನೆಯನ್ನು ಆರಂಭಿಸಲಾಗಿದೆ. ಮಂಗಳೂರಿನಿಂದ ಹೊರಟ ರೈಲು ಬೆಂಗಳೂರಿನ ಯಶವಂತಪುರ ತಲುಪಲಿದೆ.

ಮಂಗಳೂರು-ಬೆಂಗಳೂರು ನಡುವಿನ ಹಗಲು ರೈಲಿಗೆ ಎರಡು ವಿಸ್ಟಾಡಾಮ್ ಕೋಚ್ ಅವಳವಡಿಕೆ ಮಾಡಲಾಗಿದೆ. ಭಾನುವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಈ ರೈಲಿಗೆ ಚಾಲನೆ ನೀಡಿದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಈ ಸೇವೆ ಆರಂಭವಾಗಿದೆ.

ಕರ್ನಾಟಕದ ಮೊದಲ ವಿಸ್ಟಾಡಾಮ್ ಕೋಚ್ ರೈಲು; ದರ ಪಟ್ಟಿಕರ್ನಾಟಕದ ಮೊದಲ ವಿಸ್ಟಾಡಾಮ್ ಕೋಚ್ ರೈಲು; ದರ ಪಟ್ಟಿ

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ವಿಸ್ಟಾಡಾಮ್ ಕೋಚ್ ಅಳವಡಿಕೆ ಮಾಡಿರುವ ರೈಲು ಸಂಚಾರ ಆರಂಭಿಸಿತು. ಮಂಗಳೂರು-ಯಶವಂತಪುರ ನಡುವಿ ಹಗಲು ರೈಲು (06540/06539) ವಿಸ್ಟಾಡಾಮ್ ಕೋಚ್ ಹೊಂದಿದೆ.

ವಿಸ್ಟಾಡಾಮ್ ಕೋಚ್ ಇರುವ ಕರ್ನಾಟಕದ ರೈಲುಗಳ ಪಟ್ಟಿವಿಸ್ಟಾಡಾಮ್ ಕೋಚ್ ಇರುವ ಕರ್ನಾಟಕದ ರೈಲುಗಳ ಪಟ್ಟಿ

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯವಿದೆ. ಈ ಬೋಗಿಗಳು ಗಾಜಿನ ಮೇಲ್ಛಾವಣಿಯನ್ನು ಹೊಂದಿದ್ದು, ಸೀಟುಗಳು 180 ಡಿಗ್ರಿ ತಿರುಗಲಿವೆ. ರೈಲಿನಲ್ಲಿಯೇ ಕುಳಿತು ಜನರು ಪ್ರಕೃತಿ ಸೌಂದರ್ಯ ಸವಿಯಬಹುದಾಗಿದೆ.

ವಿಸ್ಟಾಡಾಮ್ ಕೋಚ್ ರೈಲಿನಲ್ಲಿ ಸಾಗುತ್ತಾ ಪಶ್ಚಿಮ ಘಟ್ಟದ ಸೌಂದರ್ಯ ಸವಿಯಿರಿವಿಸ್ಟಾಡಾಮ್ ಕೋಚ್ ರೈಲಿನಲ್ಲಿ ಸಾಗುತ್ತಾ ಪಶ್ಚಿಮ ಘಟ್ಟದ ಸೌಂದರ್ಯ ಸವಿಯಿರಿ

ಪ್ರಕೃತಿ ಸೌಂದರ್ಯವನ್ನು ಸವಿಯಿರಿ

ಪ್ರಕೃತಿ ಸೌಂದರ್ಯವನ್ನು ಸವಿಯಿರಿ

ಅಗಲವಾದ ದೊಡ್ಡ ಕಿಟಕಿಗಳು, ಗಾಜಿನ ಮೇಲ್ಛಾವಣಿ ಹೊಂದಿರುವ ವಿಸ್ಟಾಡಾಮ್ ಕೋಚ್ ರೈಲು ಬೋಗಿ ಪ್ರಯಾಣಿಕರಿಗೆ ಪ್ರಕೃತಿ ಸೌಂದರ್ಯದ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್‌ಎಚ್‌ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್‌ಫಾರ್ಮ್ /ತಂತ್ರಜ್ಞಾನ)ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ.

ಬೋಗಿಯ ವಿಶೇಷತೆಗಳು

ಬೋಗಿಯ ವಿಶೇಷತೆಗಳು

ವಿಸ್ಟಾಡಾಮ್ ಕೋಚ್‌ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್‌ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್ ಇವೆ. ಇದಲ್ಲದೆ, ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.

ವಿಸ್ಟಾಡಾಮ್ ಕೋಚ್ ದರ ಎಷ್ಟು?

ವಿಸ್ಟಾಡಾಮ್ ಕೋಚ್ ದರ ಎಷ್ಟು?

ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ ಹಗಲು ರೈಲಿನಲ್ಲಿ ವಿಸ್ಟಾಡಾಮ್ ಕೋಚ್ ಅಳವಡಿಸಲಾಗಿದ್ದು, ಮೊದಲ ಪಯಣದಲ್ಲಿ 84 ಆಸನಗಳ ಪೈಕಿ 73 ಆಸನಗಳು ಭರ್ತಿಯಾಗಿವೆ. ಒಬ್ಬರಿಗೆ 1,600 ರೂ. ದರ ನಿಗದಿಪಡಿಸಲಾಗಿದೆ. ಸುಬ್ರಹ್ಮಣ್ಯ, ಸಕಲೇಶಪುರದ ಪಶ್ಚಿಮ ಘಟ್ಟ ಪ್ರದೇಶಗಳ ಅದ್ಭುತ ಸೌಂದರ್ಯ ನೋಡಲು ವಿಸ್ಟಾಡಾಮ್ ಕೋಚ್‌ನಲ್ಲಿ ಸಂಚಾರ ನಡೆಸಬೇಕು.

  2 ಸಾವಿರ ರಸ್ತೆ ಗುಂಡಿ ಮುಚ್ಚಿದ ವೃದ್ಧ ದಂಪತಿಗೆ ಸೆಲ್ಯೂಟ್ | Oneindia Kannada
  ಯಾವ-ಯಾವ ರೈಲುಗಳು

  ಯಾವ-ಯಾವ ರೈಲುಗಳು

  ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ಹಗಲು ರೈಲು ಮತ್ತು ವಾರಕ್ಕೆ ಮೂರು ಬಾರಿ ಸಂಚಾರ ನಡೆಸುವ ಯಶವಂತಪುರ-ಕಾರವಾರ (06211/ 06212) ರೈಲಿಗೆ ಸಹ ವಿಸ್ಟಾಡಾಮ್ ಕೋಚ್ ಅಳವಡಿಕೆ ಮಾಡಲಾಗಿದೆ.

  English summary
  Dakshina Kannada MP Nalin Kumar Kateel flagged off for Karnataka's first Vistadome coach train. Yeshwantpur-Mangaluru Junction-Yeshwantpur day train attached two Vistadome coaches.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X