ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಗೆ ಐವನ್ ಡಿಸೋಜಾ ಕಿಡಿ

ಮಂಗಳೂರು, ಮಾರ್ಚ್ 13: ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಚುನಾವನಾ ಆಯೋಗ ಈ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದ್ದರೂ ನಳಿನ್ ಕುಮಾರ್ ಕಟೀಲ್ ಮಾರ್ಚ್ 11 ರಂದು ತಮ್ಮ ಟ್ವಿಟರ್ ನಲ್ಲಿ 'ರಾತ್ರಿ 3 ಗಂಟೆಗೆ ಶತ್ರು ದೇಶಕ್ಕೆ ನುಗ್ಗಿ ಹೊಡೆಯುವಂತೆ ಆದೇಶ ನೀಡುವವರಿಗೆ ಮತ ಹಾಕಬೇಕೆ ಹೊರತು, ರಾತ್ರಿ 3 ಗಂಟೆಗೆ ಉಗ್ರರಿಗಾಗಿ ಸುಪ್ರೀಂ ಕೋರ್ಟ್‌ನ ಬಾಗಿಲು ತೆರೆಸುವವರಿಗಲ್ಲಾ. ಮೋದಿ -ಮತ್ತೊಮ್ಮೆ ಎಂದು ಪೋಸ್ಟ್ ಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಚುನಾವಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕು ಎಂದು ಐವನ್ ಡಿಸೋಜಾ ಆಗ್ರಹಿಸಿದರು.

Nalin Kumar Kateel has violated the model code of conduct:Ivan dsouza

ನಳಿನ್ ಕುಮಾರ್ ಕಟೀಲ್ , ದೇಶದ ರಕ್ಷಣೆಗಾಗಿ ಹೋರಾಡಿದ ವೀರ ಸೈನಿಕರ ಸಾಹಸವನ್ನು ಮತ ಪರಿವರ್ತನೆಗಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಡಿಸೋಜಾ, ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚುನಾವಣೆಯಲ್ಲಿ ಮತ ಗಳಿಕೆಗಾಗಿ ಬಿಜೆಪಿಯು ಇಂತಹ ಕೀಳುಮಟ್ಟಕ್ಕೆ ಇಳಿದಿರುವುದು ಖಂಡನೀಯ. ಸೈನಿಕರ ಕುಟುಂಬವನ್ನು ಬೀದಿಗೆ ತಳ್ಳಿದ ಕೀರ್ತಿಯು ಮೋದಿಗೆ ಸಲ್ಲುತ್ತದೆ. ಲೋಕ ಸಭಾ ಚುನಾವಣೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಿಜೆಪಿಯನ್ನು ಕಿತ್ತೊಗೆಯಲು ಕಾಂಗ್ರೆಸ್ ಪಣ ತೊಟ್ಟಿದ್ದು, ದಕ್ಷಿಣ ಕನ್ನಡ , ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+