ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕಾಂಗ್ರೆಸ್ ಮುಖಂಡರು ಮರಳು ಮಾಫಿಯಾ ಜೊತೆ ಸೇರಿ ಹಣ ಮಾಡಿದ್ದಾರೆ'

|
Google Oneindia Kannada News

ಮಂಗಳೂರು, ಅಕ್ಟೋಬರ್. 26: ಕಾಂಗ್ರೆಸ್ ಮುಖಂಡರು ಮರಳು ಮಾಫಿಯಾದವರೊಂದಿಗೆ ಸೇರಿ ಹಣ ಮಾಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

'15 ಕೋಟಿ ರೂ.ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿರುವುದು ದುರಂತ''15 ಕೋಟಿ ರೂ.ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿರುವುದು ದುರಂತ'

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮರಳು ಕ್ಷಾಮ ಸೃಷ್ಟಿಯ ಹಿಂದೆ ಮರಳು ಮಾಫಿಯಾ ಕೈವಾಡವಿದೆ. ಈ ಜಿಲ್ಲೆಯಲ್ಲಿ ಮರಳು ನೀತಿಯ ಬಗ್ಗೆ ಸ್ಪಷ್ಟತೆ ಇಲ್ಲ. ಮರಳು ಮಫಿಯಾ ದಕ್ಷಿಣಕನ್ನಡ ಜಿಲ್ಲಾಡಳಿತವನ್ನು ನಿಯಂತ್ರಿಸುತ್ತಿದೆ.

 ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವ್ಯಂಗ್ಯವಾಡಿದ ರಮಾನಾಥ್ ರೈ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವ್ಯಂಗ್ಯವಾಡಿದ ರಮಾನಾಥ್ ರೈ

ಮರಳು ಅಭಾವದ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತಲೆಕೆಡಿಸಿಕೊಂಡಿಲ್ಲ. ಕರಾವಳಿಯಾದ್ಯಂತ ಮರಳು ಕ್ಷಾಮ ತಲೆದೋರಿದ್ದು, ಜನಸಾಮಾನ್ಯರ ಮನೆ ನಿರ್ಮಾಣ ಕಾಮಗಾರಿಗಳು ಅರ್ಧಕ್ಕೆ ಮೊಟಕುಗೊಂಡಿವೆ. ಅದಲ್ಲದೇ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ.ರಾಜ್ಯ ಸರ್ಕಾರ ತಕ್ಷಣ ಮರಳು ಅಭಾವಕ್ಕೆ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ನಳಿನ ಕುಮಾರ್ ಕಟೀಲ್ ಒತ್ತಾಯಿಸಿದರು.

Nalin Kumar Kateel says sand mafia controlling DK administration

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿಯೂ ಭ್ರಷ್ಟಾಚಾರದ ನಡೆದಿದೆ ಎಂದು ಆರೋಪಿಸಿರುವ ನಳಿನ್ ಕುಮಾರ್ ಕಟೀಲ್, ಸಭೆ ನಡೆಸದೆ ತರಾತುರಿಯಲ್ಲಿ ಯೋಜನೆಗಳ ಪ್ರಕಟ ಮಾಡಲಾಗಿದ್ದು, ಮೂರು ಯೋಜನೆಗಳಿಗೆ ತರಾತುರಿಯಲ್ಲಿ ಅನುಮೋದನೆ ನೀಡಲಾಗಿದೆ.

 ರಮಾನಾಥ್ ರೈ ಎಲ್ಲಾ ವಿಚಾರ ಕರಗತ ಮಾಡಿಕೊಂಡಿರುವ ಸರ್ವಜ್ಞ: ನಳಿನ್ ವ್ಯಂಗ್ಯ ರಮಾನಾಥ್ ರೈ ಎಲ್ಲಾ ವಿಚಾರ ಕರಗತ ಮಾಡಿಕೊಂಡಿರುವ ಸರ್ವಜ್ಞ: ನಳಿನ್ ವ್ಯಂಗ್ಯ

ಎ ಬಿ ಶೆಟ್ಟಿ ಸರ್ಕಲ್ ನಿಂದ ನೆಹರೂ ಮೈದಾನದ ರಸ್ತೆ , ಕ್ಲಾಕ್ ಟವರ್ ನಿರ್ಮಾಣ , ಬಸ್ ಸ್ಟ್ಯಾಂಡ್ ನಿರ್ಮಾಣ ಯೋಜನೆಯಲ್ಲಿ ಅವ್ಯವಹಾರ ನಡೆಸಲಾಗಿದೆ. ಸಭೆಯಲ್ಲಿ ಈ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡದೆ ಕೋಟಿ ಕೋಟಿ ರೂ.ಅನುದಾನ ಒದಗಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಿದ್ಧತೆ ನಡೆಸಿರುವುದಾಗಿ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

English summary
Speaking to media persons in Mangalore MP Nalin Kumar Kateel alleged that sand Mafia controlling DK administration. Congress leaders supporting illegal sand activity.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X