ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮೋದಿ ಅಲೆಯಿದೆ ಎಂದ ಜನಾರ್ದನ ಪೂಜಾರಿ
ಮಂಗಳೂರು, ಮಾರ್ಚ್ 24: ನಳಿನ್ ಕಮಾರ್ ಕಟೀಲ್ ಟೆಂಪಲ್ ರನ್ ಆರಂಭಿಸಿದ್ದಾರೆ. ಇಂದು ಭಾನುವಾರ ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು, ನಂತರ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ನಳಿನ್ ಕುಮಾರ್ ಕಟೀಲ್ , ಜನಾರ್ಧನ ಪೂಜಾರಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು. ನಂತರ ಪೂಜಾರಿ ಅವರ ಜೊತೆ ನಳಿನ್ ಕುಮಾರ್ ಕಟೀಲ್ ಕೆಲ ಹೊತ್ತು ಮಾತುಕತೆ ನಡೆಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜನಾರ್ಧನ ಪೂಜಾರಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಅಲೆಯಿದೆ. ಇಲ್ಲಿ ಮೋದಿ ಅಲೆಯಿಂದಾಗಿ ಕಾಂಗ್ರೆಸ್ ಪರಿಸ್ಥಿತಿ ಚೆನ್ನಾಗಿಲ್ಲ. ಆದರೆ ನಮ್ಮ ಕಾಂಗ್ರೆಸ್ ನ ಮಿಥುನ್ ರೈ ಉತ್ತಮ ಅಭ್ಯರ್ಥಿ ಎಂದು ಪ್ರಶಂಸಿಸಿದರು.

ಹೈಕಮಾಂಡ್ ಹೇಳಿದ್ರೆ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗ್ತೇನೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಅಂತ ಮಿಥುನ್ ಗೆ ಕೊಟ್ಟಿದ್ದಾರೆ. ಆದ್ರೆ ಮೋದಿಯವರಿಗೆ ಅವರ ಅಭಿವೃದ್ಧಿಯೇ ಪ್ಲಸ್ ಪಾಯಿಂಟ್ ಎಂದರು.
ಮಂಡ್ಯದಲ್ಲಿ ಸುಮಲತಾ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಗೆಲ್ಲಲಿದ್ದಾರೆ. ಜೆಡಿಎಸ್ ನಿಂದ ಕುಟುಂಬ ರಾಜಕಾರಣ ಸರಿಯಲ್ಲ. ನಿಖಿಲ್ ಸೋಲುತ್ತಾರೆ ಎಂದು ಜನಾರ್ದನ ಪೂಜಾರಿ ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, 2009ರ ಚುನಾವಣೆಯಲ್ಲಿ ಹಿರಿಯರಾದ ಪೂಜಾರಿ ಅವರ ವಿರುದ್ಧ ಸ್ಪರ್ಧಿಸಿದ್ದೆ. ಅಂದು ಅವರು ಅಭ್ಯರ್ಥಿಯಾಗಿದ್ದರೂ ನನಗೆ ಒಳ್ಳೆದಾಗಲಿ ಎಂದು ಆಶೀರ್ವಾದ ಮಾಡಿದ್ದರು. ಎರಡು ಬಾರಿ ಅವರ ಆಶೀರ್ವಾದದಿಂದ ಗೆದ್ದಿದ್ದೇನೆ, ಮೂರನೇ ಬಾರಿ ಅವರ ಆಶೀರ್ವಾದದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications