ನಾಥೂರಾಂ ಗೋಡ್ಸೆ ಭಾರತದ ಮೊಟ್ಟ ಮೊದಲ ಭಯೋತ್ಪಾದಕ - ಬಿ.ಕೆ.ಹರಿಪ್ರಸಾದ್
ಮಂಗಳೂರು, ಜನವರಿ 30: ನಾನು ಗಾಂಧಿಯವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಉಗ್ರಗಾಮಿ ಎಂದು ಹೇಳಲ್ಲ. ಆತ ಈ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ನಡೆದ ವಿಚಾರ ಸಂಕೀರ್ಣದಲ್ಲಿ ಮಾತನಾಡಿದ ಅವರು, ಭಾರತದಲ್ಲಿರುವ ಸಾವಿರಾರು ಭಾಷೆ, ಜಾತಿಗಳನ್ನು ಒಂದಾಗಿ ಕೊಂಡೊಯ್ಯಬೇಕಾದರೆ ಯಾವುದಾದರೂ ಒಂದು ದೊಡ್ಡ ತತ್ವ ಅಥವಾ ಸಿದ್ಧಾಂತ ಬೇಕು. ಅದನ್ನೇ ಮಹಾತ್ಮಾ ಗಾಂಧಿಯವರು ಸರ್ವಧರ್ಮ ಸಮಭಾವ ಎಂದು ಕರೆದರು. ಆ ಸಿದ್ಧಾಂತಕ್ಕೋಸ್ಕರ ಪ್ರಾಣವನ್ನು ಬಿಟ್ಟರು.

ನಾನು ಗಾಂಧಿಯವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಉಗ್ರಗಾಮಿ ಎಂದು ಹೇಳಲ್ಲ. ಆತ ಈ ದೇಶದ ಮೊಟ್ಟ ಮೊದಲ ಭಯೋತ್ಪಾದಕ. ಈ ದೇಶದಲ್ಲಿ ಭಯೋತ್ಪಾದನೆ ಆರಂಭವಾಗಿದ್ದೇ ಗೋಡ್ಸೆಯಿಂದ. ಹಿಂದೂ ಧರ್ಮದ ಮೇಲೆ ನಂಬಿಕೆಯಿಟ್ಟಿದ್ದ ಗಾಂಧಿಯನ್ನು ಕೊಂದ ಹಿಂದೂವನ್ನು ಏನೆಂದು ಕರೆಯಬೇಕು ಎಂದು ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಅಯೋಧ್ಯೆಯಲ್ಲಿ ಯಾವುದೇ ದೇವಾಲಯ ಇರಲಿಲ್ಲ. ಆದ್ರೆ ಬಾಬರಿ ಮಸೀದಿಯನ್ನು ಕೆಡವಲಾಗಿದೆ ಎಂದು ಪುರಾತತ್ವ ಇಲಾಖೆ ಸ್ಪಷ್ಟವಾಗಿ ಹೇಳಿದೆ. ಆದರೂ ಬಹುಜನ ವರ್ಗದ ಭಾವನೆಗಳನ್ನು ನಾವು ಒಪ್ಕೊಂಡಿದ್ದೇವೆ ಎಂದು ಹೇಳುತ್ತದೆ. ಇಂತಹ ವಿಚಾರವನ್ನು ಮಹಾತ್ಮಾ ಗಾಂಧಿಯವರು 1929ನಲ್ಲೊ ಹೇಳಿದ್ದಾರೆ. ಆದ್ದರಿಂದ ಮಹಾತ್ಮಾ ಗಾಂಧಿಯವರ ಚಿಂತನೆ ಕೇವಲ ಗತಕಾಲದ ಇತಿಹಾಸವಲ್ಲ ವರ್ತಮಾನದಲ್ಲಿ ಇರುವಂಥಹದ್ದೂ ಅಲ್ಲ ಭವಿಷ್ಯತ್ತಿನಲ್ಲೂ ಇರುವಂಥಹದ್ದು ಎಂದರು.
ದೇಶದಲ್ಲಿ ಇಂದು ಭಯದ, ಬೇಧ - ಭಾವದ ವಾತಾವರಣವನ್ನು ಸೃಷ್ಟಿ ಮಾಡಿರುವ ಪ್ರತಿಗಾಮಿ ಶಕ್ತಿಗಳು, ಉಗ್ರ ಬಲಪಂಥಿಯರನ್ನು ನಾವು ಎದುರಿಸಲು ಮಹಾತ್ಮಾಗಾಂಧಿ ಒಂದೇ ಮಂತ್ರ. ಗಾಂಧಿಯವರನ್ನು ಬಲಪಂಥೀಯ ಉಗ್ರಗಾಮಿಗಳು ಖಳನಾಯಕನಂತೆ ಮಾಡಲು ಹೊರಟಿದ್ದಾರೆ. 1991ರಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕದಿಂದ ಗುಜರಾತ್‌ನ ಪೋರಬಂದರ್ ಮಾಫಿಯಾದ ನಿಯಂತ್ರಣದಲ್ಲಿದೆ. ಇದು ಸದ್ಯ ದೇಶದಲ್ಲಿನ ಮಹಾತ್ಮಾ ಗಾಂಧಿಯವರ ಸ್ಥಿತಿಯನ್ನು ತೋರಿಸುತ್ತಿದೆ. ಇಲ್ಲಸಲ್ಲದ ಆರೋಪವನ್ನು ವಾಟ್ಸ್ಆ್ಯಪ್ ಯುನಿವರ್ಸಿಟಿ ಮೂಲಕ ಮಾಡುತ್ತಿದ್ದಾರೆ. ಗಾಂಧಿಚಿಂತನೆ ಎಂದಿಗೆ ಮುಗಿಯುತ್ತೆದೆಯೋ ಅಂದಿಗೆ ಈ ದೇಶವು ಮುಗಿಯುತ್ತದೆ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದರು.












Click it and Unblock the Notifications