ಸಹಸ್ರಲಿಂಗೇಶ್ವರದಲ್ಲಿ ನೇತ್ರಾವತಿ ಹಾಗು ಕುಮಾರಧಾರ ಸಂಗಮ: ಭಕ್ತರಿಂದ ಗಂಗಾಪೂಜೆ

Recommended Video

      ಸಹಸ್ರಲಿಂಗೇಶ್ವರದಲ್ಲಿ ನೇತ್ರಾವತಿ-ಕುಮಾರಧಾರ ಸಂಗಮ..! | Oneindia Kannada

      ಮಂಗಳೂರು, ಆಗಸ್ಟ್ 15: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಒಂದೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇನ್ನೊಂದೆಡೆ ಕೆಲ ಅಪರೂಪದ ವಿದ್ಯಮಾನಗಳಿಗೂ ಸಾಕ್ಷಿಯಾಗುತ್ತಿದೆ. ಸರಿಸುಮಾರು 5 ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂದೆ ಸಂಗಮಗೊಂಡಿದೆ.

      ಸತತವಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಿದ್ದರೂ, ಕುಮಾರಧಾರ ಮತ್ತು ನೇತ್ರಾವತಿ ನದಿಗಳು ಸಂಗಮ ಆಗಿರಲಿಲ್ಲ. ಆದರೆ ರಾತ್ರಿ ನೀರಿನ ಒಳಹರಿವು ಹೆಚ್ಚಾಗುತ್ತಿದ್ದಂತೆ ನಿನ್ನೆ ರಾತ್ರಿ ನದಿಗಳ ಸಂಗಮವಾಗಿದ್ದು, ಎರಡೂ ನದಿಗಳ ನೀರು ದೇವಸ್ಥಾನದ ಒಳಗೆ ನುಗ್ಗಿ ಗರ್ಭಗುಡಿ ಪ್ರವೇಶ ಮಾಡುವ ಅಪರೂಪದ ಸನ್ನಿವೇಶಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.

      Nethravathi and Kumaradhara Sangama in Sahasralingeswara

      ಇದೇ ಸಂದರ್ಭದಲ್ಲಿ ಸೇರಿದ್ದ ಅರ್ಚಕರು ಮತ್ತು ಭಕ್ತವೃಂದ ಗಂಗಾಪೂಜೆ ನಡೆಸಿದರು. ಈ ಹಿಂದೆ ಕೊನೆಯ ಬಾರಿಗೆ ಅಂದರೆ 2013ರ ಜುಲೈ 4ರಂದು ಹಾಗೂ ಅದಕ್ಕೂ ಹಿಂದೆ 2008ರ ಆಗಸ್ಟ್ 13ರಂದು ಉಭಯ ನದಿಗಳು ಸಂಗಮಗೊಂಡಿದ್ದವು.

      Nethravathi and Kumaradhara Sangama in Sahasralingeswara

      ನಿನ್ನೆ ಮುಂಜಾನೆಯಿಂದಲೇ ತಟದಲ್ಲಿ ನದಿಗಳ ಸಂಗಮಕ್ಕಾಗಿ ಭಕ್ತರು ಕಾದು ಕುಳಿತಿದ್ದರು. ಇದರಿಂದಾಗಿ ಉಪ್ಪಿನಂಗಡಿಯ ಹೆದ್ದಾರಿಯಲ್ಲಿ ಭಾರೀ ವಾಹನ ದಟ್ಟಣೆ ಆಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+