ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ
ದಕ್ಷಿಣ ಕನ್ನಡ, ಜೂನ್, 18: ರಾಜ್ಯ ಸರ್ಕಾರ ಆಗಾಗ ಅಧಿಕಾರಿಗಳ ವರ್ಗಾವಣೆಯ ಸರ್ಜರಿ ಮಾಡುತ್ತಿರುತ್ತದೆ. ಹಾಗೆಯೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಆಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಹಾಗಾದ್ರೆ ಅವರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಲಾಗಿದೆ ಎಂದು ಇಲ್ಲಿ ತಿಳಿಯಿಎಇ.
ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇನ್ನು ದರ್ಶನ್ ಎಚ್‌ವಿ ಅವರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು. ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ: ಮತ್ತೊಂದೆಡೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಗವರ್ನೆನ್ಸ್ ನಿರ್ದೇಶಕರಾಗಿದ್ದ ಟಿ.ಕೆ.ಸ್ವರೂಪಾ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಿಂದಿನ ಡಿಸಿ ವಿದ್ಯಾಕುಮಾರಿ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.
ಹಾಸನ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ: ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಿ.ಸತ್ಯಭಾಮ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಓ ಆಗಿದ್ದ ಲತಾಕುಮಾರಿಯವರನ್ನು ನೇಮಕ ಮಾಡಲಾಗಿದೆ. ಬೆಂಗಳೂರಿನ ಸಮಗ್ರ ಶಿಕ್ಷಣ ರಾಜ್ಯ ಯೋಜನಾ ನಿರ್ದೇಶಕರಾಗಿ ಸಿ.ಸತ್ಯಭಾಮ ಅವರನ್ನು ವರ್ಗಾವಣೆ ಮಾಡಲಾಗಿದೆ.
ಬಾಗಲಕೋಟೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ: ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಕೆ.ಎಂ.ಜಾನಕಿ ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಇದೀಗ ಅವರನ್ನು ಬೆಂಗಳೂರಿನ ಕೆಪಿಎಸ್‌ಸಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಸಂಗಪ್ಪ ಅವರನ್ನು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
17 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಯಾವ ಹುದ್ದೆಗೆ?
* ಕೆ.ಎಂ.ಜಾನಕಿ: ಕೆಪಿಎಸ್‌ಸಿ ಕಾರ್ಯದರ್ಶಿ
* ಸಿ.ಸತ್ಯಭಾಮ: ಸಮಗ್ರ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರು
* ಕೆ.ಎಸ್.ಲತಾ ಕುಮಾರಿ: ಹಾಸನ ಜಿಲ್ಲಾಧಿಕಾರಿ
* ಟಿ.ಕೆ.ಸ್ವರೂಪಾ: ಉಡುಪಿ ಜಿಲ್ಲಾಧಿಕಾರಿ
* ಡಾ.ಅವಿನಾಶ್ ಮೆನನ್ ರಾಜೇಂದ್ರನ್: ಎನ್‌ಎಚ್‌ಎಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದ ಮಿಷನ್ ಡೈರೆಕ್ಟರ್
* ಎಂ.ಪಿ. ಮುಲೈ ಮುಗಿಲನ್: ನೋಂದಣಿ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು
* ನಳಿನಿ ಅತುಲ್: ಕೆಕೆಆರ್‌ಡಿಬಿ ಕಾರ್ಯದರ್ಶಿ
* ಎಚ್.ವಿ.ದರ್ಶನ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
* ಸಂಗಪ್ಪ: ಬಾಗಲಕೋಟೆ ಜಿಲ್ಲಾಧಿಕಾರಿ
* ಸುರೇಶ್ ಬಿ. ಇಟ್ನಾಳ್: ಕೊಪ್ಪಳ ಜಿಲ್ಲಾಧಿಕಾರಿ
* ಡಾ.ವೈ.ನವೀನ್ ಭಟ್: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಿಇಒ
* ಗರೀಮಾ ಪನ್ವಾರ್: ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು
* ರಾಹುಲ್ ರತ್ನಂ ಪಾಂಡೆ: ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಕಾರ್ಯಕಾರಿ ನಿರ್ದೇಶಕ
* ಪ್ರಕಾಶ್ ಜಿ.ಟಿ. ನೆಟ್ಟಾಲಿ: ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ
* ವರ್ನಿತ್ ನೇಗಿ: ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ
* ಗಿಟ್ಟೆ ಮಾಧವ್ ವಿಠ್ಠಲ್ ರಾವ್: ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ
* ಶಮ್ಲಾಇಕ್ಬಾಲ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ತೋಟಗಾರಿಕೆ, ರೇಷ್ಮೆ ಇಲಾಖೆ ಕಾರ್ಯದರ್ಶಿ












Click it and Unblock the Notifications