ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು : ಆಸ್ತಿ ತೆರಿಗೆ ಆನ್‌ಲೈನ್ ಪಾವತಿಗೆ ಅವಕಾಶ?

|
Google Oneindia Kannada News

ಮಂಗಳೂರು, ಜ. 2 : ಆಸ್ತಿ ತೆರಿಗೆಯನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡುವ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾದ ಹೆಫ್‌ಸಿಬಾ ರಾಣಿ ಕೊರ್ಲಾಪತಿ ಹೇಳಿದ್ದಾರೆ.

ಗುರುವಾರ ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಹೆಫ್‌ಸಿಬಾ ರಾಣಿ ಕೊರ್ಲಾಪತಿ ಅವರು ಅಧಿಕಾರ ಸ್ವೀಕರಿಸಿದರು. ಆಂಧ್ರಪ್ರದೇಶ ಮೂಲದ ಇವರು ಬೀದರ್ ಜಿಲ್ಲೆ ಬಸವಕಲ್ಯಾಣ ಉಪ ವಿಭಾಗದಲ್ಲಿ ಸಹಾಯಕ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಡಿ.31ರಂದು ಅವರನ್ನು ಮಂಗಳೂರು ಪಾಲಿಕೆ ಆಯುಕ್ತರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

Hephsiba Rani Korlapati

ಹೆಫ್‌ಸಿಬಾ ರಾಣಿ ಕೊರ್ಲಾಪತಿ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪ್ರಭಾರ ಆಯುಕ್ತ ಗೋಕುಲ್‌ದಾಸ್ ನಾಯಕ್, ಅಧೀಕ್ಷಕ ಎಂಜಿನಿಯರ್ ಕಾಂತರಾಜ್, ಉಪ ಆಯುಕ್ತೆ ಪ್ರಮೀಳಾ ಮುಂತಾದವರು ಉಪಸ್ಥಿತರಿದ್ದರು. [ಮಂಗಳೂರು ಪಾಲಿಕೆಗೆ ಕೊನೆಗೂ ಆಯುಕ್ತರ ನೇಮಕ]

ಸುಮಾರು ಆರು ತಿಂಗಳಿನಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸ್ಥಾನ ಖಾಲಿ ಇತ್ತು. ಹೆಫ್‌ಸಿಬಾ ರಾಣಿ ಕೊರ್ಲಾಪತಿ ಅವರು ಅಧಿಕಾರ ಸ್ವೀಕರಿಸಿದ್ದರಿಂದ ಮಹಾನಗರಪಾಲಿಕೆಯ ಆಯುಕ್ತರ ಸ್ಥಾನ ಭರ್ತಿಯಾಗಿದೆ. [ಆನ್ ಲೈನ್ ನಲ್ಲಿ ತೆರಿಗೆ ಪಾವತಿ ಹೇಗೆ?]

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಹೆಫ್‌ಸಿಬಾ ರಾಣಿ ಕೊರ್ಲಾಪತಿ ಅವರು, ಆಸ್ತಿ ತೆರಿಗೆಯನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡುವ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ. [ಚಿತ್ರ : ಐಸಾಕ್ ರಿಚರ್ಡ್, ಮಂಗಳೂರು]

English summary
Newly-appointed Mangalore City Corporation (MCC) commissioner Hephsiba Rani Korlapati took charge of her office here on Thursday January 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X