ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎರಡು ವಾರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ

|
Google Oneindia Kannada News

ಬೆಂಗಳೂರು, ನ.5 : 'ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯವನ್ನು ಆರಂಭಿಸುತ್ತೇನೆ. ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಎರಡು ವಾರದಲ್ಲಿ ನಡೆಸಲಾಗುವುದು'ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಬುಧವಾರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿದ್ದ ಎಚ್.ಡಿ.ದೇವೇಗೌಡ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಅತ್ಯಂತ ಕಡಿಮೆ ಬಲವನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸಕ್ಕೆ ಚಾಲನೆ ನೀಡುವುದಾಗಿ ಅವರು ತಿಳಿಸಿದರು. [ಸೈಕಲ್ ಏರಲು ಧನಂಜಯ್ ಕುಮಾರ್ ತಯಾರಿ?]

H.D.Deve Gowda

ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಪಕ್ಷವನ್ನು ಪುನರ್ ಸಂಘಟಿಸುವ ಕಾರ್ಯವನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಪುನಃ ಸಂಘಟಿಸುತ್ತೇನೆ ಎಂದು ದೇವೇಗೌಡರು ಘೋಷಿಸಿದರು. [ಜೆಡಿಎಸ್ ಬಿಟ್ಟು ಹೋಗುವವರು ಸಂತೋಷದಿಂದ ಹೋಗಿ]

1972ರಿಂದಲೂ ತಮ್ಮ ಜತೆ ಪಕ್ಷದಲ್ಲಿ ಇರುವ ತಾಲೂಕು, ಜಿಲ್ಲಾ ಮಟ್ಟದ ನಾಯಕರ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ಪಕ್ಷವನ್ನು ಬಲಪಡಿಸಲಾಗುವುದು. ಯಾವ ನಾಯಕರು ಪಕ್ಷ ಬಿಟ್ಟು ಹೋದರು ತಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಕಳೆದ ಒಂದೂವರೆ ವರ್ಷದಲ್ಲಿ ಹಗಲು ಹೊತ್ತಿನಲ್ಲೇ ನಡೆದ ಕೊಲೆ ಪ್ರಕರಣಗಳನ್ನು ಲೆಕ್ಕ ಹಾಕಿದರೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಚೆನ್ನಾಗಿಲ್ಲ ಎಂಬುದು ಸ್ಪಷ್ಟವಾಗಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಅಂದಹಾಗೆ ಜೆಡಿಎಸ್‌ಗೆ ರಾಜೀನಾಮೆ ನೀಡಿದ್ದ ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಇಂದು ಸಂಜೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಜೀಂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡದರು. [ಚಿತ್ರ :ಐಸಾಕ್ ರಿರ್ಚಡ್, ಮಂಗಳೂರು]

English summary
'JDS state president will elect within two weeks' said, party supremo H.D.Deve Gowda. On November 5 he addressed press meet at Circuit House Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X