ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು; ಕೋವಿಡ್ ಪರೀಕ್ಷೆಗೆ ಜಿಲ್ಲಾಡಳಿತದ ಹೊಸ ಆದೇಶ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 11; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗದ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಜಿಲ್ಲೆಯಾದ್ಯಂತ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಸೂಚನೆ ನೀಡಿದ್ದಾರೆ.

ಇನ್ನು ಮುಂದೆ ಜಿಲ್ಲೆಯಲ್ಲಿ ಪಾಸಿಟಿವ್ ಬಂದ ಸೋಂಕಿತರ ಮನೆ ಸಮೀಪದ 50 ಮನೆಗಳಲ್ಲಿ ಪರೀಕ್ಷೆ ಮಾಡಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ. ಪಾಸಿಟಿವ್ ರೋಗಿ ಇರೋ ಮನೆ ಪಕ್ಕದ ಎಲ್ಲಾ 50 ಮನೆಗಳಲ್ಲಿ ಇನ್ನು ಮುಂದೆ ಕೊರೊನಾ ಪರೀಕ್ಷೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ಮಂಗಳೂರು; ರಸ್ತೆಯಲ್ಲಿ ನರಳಾಡಿದರೂ ವೃದ್ಧೆಗೆ ಸಹಾಯ ಮಾಡದ ಜನ ಮಂಗಳೂರು; ರಸ್ತೆಯಲ್ಲಿ ನರಳಾಡಿದರೂ ವೃದ್ಧೆಗೆ ಸಹಾಯ ಮಾಡದ ಜನ

ಇದಲ್ಲದೆ ನಗರ ಭಾಗದಲ್ಲೂ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವ ಜನರಲ್ಲಿ ಪಾಸಿಟಿವ್ ಪತ್ತೆಯಾದರೂ ಮೂರು ಮಹಡಿಗಳ ನಿವಾಸಿಗಳ ಟೆಸ್ಟ್ ಮಾಡಲು ಸೂಚಿಸಲಾಗಿದೆ. ಸೋಂಕಿತ ವಾಸಿಸುವ ಮಹಡಿ, ಅದರ ಮೇಲಿನ ಮತ್ತು ಕೆಳಗಿನ ಮಹಡಿಗಳಲ್ಲಿ ವಾಸವಾಗಿರೋ ಎಲ್ಲರಿಗೂ ಟೆಸ್ಟ್ ಮಾಡಬೇಕು.

ಮಂಗಳೂರು; ಕೊರೊನಾಗೆ ಒಂದೇ ಕುಟುಂಬದ ಮೂವರು ಬಲಿ ಮಂಗಳೂರು; ಕೊರೊನಾಗೆ ಒಂದೇ ಕುಟುಂಬದ ಮೂವರು ಬಲಿ

New Rule In Dakshina Kannada For Covid Test

ಮನೆ ಮತ್ತು ಅಪಾರ್ಟ್‌ಮೆಂಟ್‌ಗಳ ಸುತ್ತ ಕಣ್ಗಾವಲು ಕ್ರಮಕ್ಕೆ ಜಿಲ್ಲಾಧಿಕಾರಿ ಗಳು ಸೂಚನೆ ನೀಡಿದ್ದಾರೆ..
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರು ಮೊಬೈಲ್ ಕೋವಿಡ್ ಟೆಸ್ಟಿಂಗ್ ತಂಡಗಳನ್ನು ರಚಿಸಲಾಗಿದೆ. ಒಂದರಲ್ಲಿ ಇಬ್ಬರು ಲ್ಯಾಬ್ ಟೆಕ್ನಿಶಿಯನ್‌ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.

ಮುಂಬೈ ಬಾರ್ಜ್ ದುರಂತ; ಅನುಭವ ಬಿಚ್ಚಿಟ್ಟ ಮಂಗಳೂರು ಯುವಕರುಮುಂಬೈ ಬಾರ್ಜ್ ದುರಂತ; ಅನುಭವ ಬಿಚ್ಚಿಟ್ಟ ಮಂಗಳೂರು ಯುವಕರು

ಮನೆ ಮತ್ತು ಖಾಸಗಿ ಕ್ಲಿನಿಕ್‌ಗಳಿಗೆ ತೆರಳಿ ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯ ಬೇರೆ ಬೇರೆ ಭಾಗಗಳಲ್ಲೂ ಮೊಬೈಲ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ತೆರೆಯಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಸದ್ಯ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 3,500 ಮಾದರಿಗಳ ಪರೀಕ್ಷೆ ಆಗುತ್ತಿದೆ.

ಇನ್ನು ಮುಂದೆ ನಿತ್ಯ 6 ಸಾವಿರ ಪರೀಕ್ಷೆಗಳನ್ನು ಮಾಡಲು ಸೂಚಿಸಲಾಗಿದೆ. ಅಲ್ಲದೆ ಎಲ್ಲಾ ಸೋಂಕಿತರ ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಮಾಡಿ ಪರೀಕ್ಷೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

English summary
Deputy Commissioner of Dakshina Kannada Dr. Rajendra K. V. directed officials to conduct more Covid test. If one person found positive his neighbour house people also tested.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X