ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಎರಡನೇ ಡೆಡ್ ಲೈನ್ ನೀಡಿದ ಎನ್ಐಎ

ಮಂಗಳೂರು, ಜುಲೈ 16: ರಾಜ್ಯವನ್ನೇ ತಲ್ಲಣಗೊಳಿಸಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆ ಚುರುಕುಕೊಳಿಸಿದೆ. ಪ್ರಕರಣದ ಪ್ರಮುಖ ಐವರು ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಆರೋಪಿಗಳಿಗೆ ಶರಣಾಗುವಂತೆ ಎರಡನೇ ಬಾರಿ ಡೆಡ್ ಲೈನ್ ನೀಡಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಆಗಸ್ಟ್ 18ರ ಒಳಗಾಗಿ ಶರಣಾಗುವಂತೆ ಎನ್ಐಎ ಡೆಡ್ ಲೈನ್ ವಿಧಿಸಿದೆ. ಎನ್ಐಎ ನ್ಯಾಯಾಲಯದ ಆದೇಶದಂತೆ ಎಚ್ಚರಿಕೆಯ ಸಂದೇಶ ನೀಡಿದ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆಗೆ ತೆರಳಿ ನೋಟಿಸ್ ಅಂಟಿಸಿದ್ದಾರೆ.

NIA Gives Second Dead Line To Praveen Nettaru Murder Accused

ಈ ಹಿಂದೆ ಜೂನ್ 30ರಂದು ಶರಣಾಗುವಂತೆ ಎನ್ಐಎ ಎಚ್ಚರಿಕೆ ನೀಡಿತ್ತು. ಆದರೆ ಎಚ್ಚರಿಕೆ ನೀಡಿದರೂ ಆರೋಪಿಗಳು ಮಾತ್ರ ಶರಣಾಗದೆ ತಲೆ ಮರೆಸಿಕೊಂಡಿದ್ದಾರೆ. ಎರಡನೇ ಡೆಡ್ ಲೈನ್ ಕುರಿತು ಸುಳ್ಯ ಹಾಗೂ ಕೊಡಗು ಭಾಗದಲ್ಲಿ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಧ್ವನಿವರ್ಧಕ ಮೂಲಕ ಅಧಿಕಾರಿಗಳು ಘೋಷಣೆ ಹೊರಡಿಸಿದ್ದಾರೆ. ಆರೋಪಿಗಳು ಆಗಸ್ಟ್‌ 18ರೊಳಗೆ ಶರಣಾಗುವಂತೆ ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಲಾಗಿದೆ.

ಈ ಬಾರಿಯೂ ಆರೋಪಿಗಳು ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಎಚ್ಚರಿಕೆ ಎನ್ಐಎ ಅಧಿಕಾರಿಗಳು ನೀಡಿದ್ದಾರೆ. ಅಲ್ಲದೇ ಸಾರ್ವಜನಿಕರು ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಹ ಘೋಷಣೆ ಮಾಡಿದ್ದಾರೆ.

ಸದ್ಯ ತಲೆ ಮರೆಸಿಕೊಂಡಿರುವ ಆರೋಪಿಗಳ ಮನೆಗೆ‌ ಎನ್ಐಎ ನ್ಯಾಯಾಲಯದ‌ ಆದೇಶ ಪ್ರತಿಯನ್ನು‌ ಅಧಿಕಾರಿಗಳು ಅಂಟಿಸಿದ್ದಾರೆ. ಆರೋಪಿಗಳ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿರುವ ಅಧಿಕಾರಿಗಳು, ಆರೋಪಿಗಳು ಹಾಜರಾಗುವಂತೆ ತಿಳಿಸಿ ಎಂದು ಮನೆಯವರ ಬಳಿ ಸೂಚನೆ ‌ನೀಡಿದ್ದಾರೆ.

NIA Gives Second Dead Line To Praveen Nettaru Murder Accused

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ, ನಿಷೇಧಿತ ಪಿಎಫ್ಐ ಕಾರ್ಯಕರ್ತರಾದ ಮುಸ್ತಫಾ ಪೈಚಾರ್ , ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್ , ತುಫೇಲ್, ಹಾಗೂ ಮಸೂದ್ ಅಗ್ನಾಡಿ ಸೇರಿಂದತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಎನ್ಐಎ ಶೋಧ ಕಾರ್ಯ ಮಾಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+