ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದ ಋಣ ತೀರಿಸಲು ಕೊನೆಯುಸಿರು ಇರುವವರೆಗೂ ಪ್ರಯತ್ನಿಸುವೆ:ನಿಖಿಲ್ ಕುಮಾರಸ್ವಾಮಿ

|
Google Oneindia Kannada News

Recommended Video

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ | Oneindia Kannada

ಮಂಗಳೂರು, ಮಾರ್ಚ್ 04:ಮುಂಬರುವ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ.

ಮಂಡ್ಯದಿಂದ ಸ್ಪರ್ಧೆ: ಎಲ್ಲಾ ಸುದ್ದಿಗಳಿಗೆ ತೆರೆ ಎಳೆದ ನಿಖಿಲ್ ಕುಮಾರಸ್ವಾಮಿಮಂಡ್ಯದಿಂದ ಸ್ಪರ್ಧೆ: ಎಲ್ಲಾ ಸುದ್ದಿಗಳಿಗೆ ತೆರೆ ಎಳೆದ ನಿಖಿಲ್ ಕುಮಾರಸ್ವಾಮಿ

ತಾತ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಂದ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರಲು ಒಪ್ಪಿಗೆ ಸಿಕ್ಕಿದೆ.ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಇಂದು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

 ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ದೇವೇಗೌಡರ ಹಸಿರು ನಿಶಾನೆ? ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ದೇವೇಗೌಡರ ಹಸಿರು ನಿಶಾನೆ?

ಇಂದು ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ ನಿಖಿಲ್ ಕುಮಾರ ಸ್ವಾಮಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು.

Nikhil Kumaraswamy today visited Dharmasthala

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರು ಕೊಟ್ಟಿರುವ ಜವಾಬ್ದಾರಿ ಸಂಪೂರ್ಣವಾಗಿ ನಿರ್ವಹಿಸುತ್ತೇನೆ. ಅಧಿಕೃತವಾಗಿ ದೇವೇಗೌಡರು ಟಿಕೆಟ್ ಘೋಷಣೆ ಮಾಡಿದ್ದಾರೆ. ಮಂಡ್ಯದ ಋಣವನ್ನು ತೀರಿಸಲು ಕೊನೆ ಉಸಿರು ಇರುವವರೆಗೂ ಪ್ರಯತ್ನ ಪಡುತ್ತೇನೆ. ವರಿಷ್ಠರು ತೀರ್ಮಾನ ಮಾಡಿದ ಮೇಲೆ ನಾವು ಸ್ಪರ್ಧಿಸಬೇಕು ಎಂದು ಹೇಳಿದರು.

 ಮಂಡ್ಯದಲ್ಲಿ‌ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮುನ್ಸೂಚನೆ ನೀಡಿದ ಸಿಎಂ ಮಂಡ್ಯದಲ್ಲಿ‌ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮುನ್ಸೂಚನೆ ನೀಡಿದ ಸಿಎಂ

Nikhil Kumaraswamy today visited Dharmasthala

ನಿನ್ನೆ ಭಾನುವಾರ (ಫೆ.03) ಮಂಗಳೂರಿನಲ್ಲಿ ಮಾತನಾಡಿದ್ದ ಎಚ್ ಡಿ ದೇವೇಗೌಡ ಅವರು, ನಿಖಿಲ್ ಚುನಾವಣೆಗೆ ನಿಲ್ಲುತ್ತೇನೆ ಎಂದಿದ್ದರು. ತಾತನಿಗೆ ಪ್ರಜ್ವಲ್ ಬಗ್ಗೆ ಮಾತ್ರ ಆಸಕ್ತಿ ಇದೆ ಎಂದು ಜನರು ಹೇಳುವಂತಾಗಬಾರದು. ಅದಕ್ಕೆ ನಿಖಿಲ್ ಗೂ ಅವಕಾಶ ಕೊಡಲು ನಿರ್ಧಾರ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

English summary
Nikhil Kumaraswamy today visited Dharmasthala and performed special worship to God. After that he said, I handle the responsibility given by Deve Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X