ಕೇರಳದಲ್ಲಿ ನಿಫಾ ಅಬ್ಬರ: ದಕ್ಷಿಣ ಕನ್ನಡದಲ್ಲಿ ಅಲರ್ಟ್, ವಿಶೇಷ ಜ್ವರ ಸಮೀಕ್ಷೆ

ಮಂಗಳೂರು, ಸೆಪ್ಟೆಂಬರ್‌ 13: ಕೇರಳದಲ್ಲಿ ಇಬ್ಬರನ್ನು ಬಲಿ ಪಡೆದಿರುವ ನಿಫಾ ವೈರಸ್ ಬಗ್ಗೆ ದ.ಕ.ಜಿಲ್ಲೆಯ ಜನತೆಗೆ ಆತಂಕ ಬೇಡ. ಆದರೆ ಜಾಗ್ರತೆಯಿರಲಿ. ಜ್ವರ ಕಂಡು ಬಂದಲ್ಲಿ ನಿರ್ಲಕ್ಷ್ಯ ಬೇಡ. ತಕ್ಷಣ ವೈದ್ಯರನ್ನು ಕಾಣುವಂತೆ ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ‌.ಸುದರ್ಶನ್ ಸಲಹೆ ನೀಡಿದ್ದಾರೆ.

ದ.ಕ.ಜಿಲ್ಲಾ ಆರೋಗ್ಯಾಧಿಕಾರಿಯವರ ಕಚೇರಿಯಲ್ಲಿ ಮಾತನಾಡಿದ ಅವರು, ನಿಫಾ ವೈರಸ್ ಸೋಂಕು ದ.ಕ.ಜಿಲ್ಲೆಗೆ ಹರಡಿಲ್ಲ. ಆದರೆ ಮುನ್ನೆಚ್ಚರಿಕಾ ಹಿನ್ನೆಲೆಯಲ್ಲಿ ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಜ್ವರ ಸಮೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿ ದಾಸ್ತಾನು ಇರಿಸಲು ಸೂಚನೆ ನೀಡಲಾಗಿದೆ. ತಾಲೂಕು, ಆಸ್ಪತ್ರೆಗಳಲ್ಲಿ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ.

nipah-virus-alert-in-dakshina-kannada

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ವ್ಯವಸ್ಥೆಯನ್ನು ಮಾಡಲಾಗಿದೆ. ಸಾಮಾನ್ಯ ವೈರಲ್ ಜ್ವರದಂತೆ ನಿಫಾ ಲಕ್ಷಣವಿದ್ದರೂ, ಜ್ಞಾನ ತಪ್ಪುವುದು, ಮಾನಸಿಕ ಗೊಂದಲ ಮತ್ತು ಫಿಟ್ಸ್ ಲಕ್ಷಣವಿದ್ದಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಾಗಬೇಕು ಎಂದು ಸೂಚನೆ ನೀಡಿದರು.

ಶಂಕಿತ ನಿಫಾ ಸೋಂಕಿತರಿದ್ದಲ್ಲಿ ಅವರನ್ನು ಪ್ರತ್ಯೇಕವಾಗಿಡುವುದು, ಹಸ್ತಲಾಘವ ಮಾಡಬಾರದು, ರೋಗಿಗಳ ಉಪಚಾರದ ವೇಳೆ ಮಾಸ್ಕ್ , ಗ್ಲೌಸ್ ಧರಿಸುವುದು ಕಡ್ಡಾಯ. ನಿಫಾ ಹಂದಿ, ಕುದುರೆ, ನಾಯಿ, ಬೆಕ್ಕು ಮುಂತಾದ ಪ್ರಾಣಿಗಳಲ್ಲೂ ಕಂಡು ಬರುತ್ತದೆ. ಆದ್ದರಿಂದ ಪ್ರಾಣಿಗಳ ಜೊಲ್ಲು, ಮಲವನ್ನು ಸ್ಪರ್ಶಿಸಬಾರದು‌.

ಎಲ್ಲಾ ಹಣ್ಣು ಹಂಪಲುಗಳನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ಬೇಯಿಸಿ ತಿನ್ನಬೇಕು. ಬಾವಲಿಯಂತಹ ಪ್ರಾಣಿಗಳು ಕಚ್ಚಿರುವ ಆಹಾರ ಬಳಸಬಾರದು. ಸೋಂಕು ಹರಡಿದ ಪ್ರದೇಶದಲ್ಲಿ ಸೇಂದಿ ಅಥವಾ ನೀರಾವನ್ನೂ ಜನ ಸೇವಿಸಬಾರದೆಂದು ಆರೋಗ್ಯಾಧಿಕಾರಿ ಡಾ.ಸುದರ್ಶನ್ ಹೇಳಿದರು.

2018ರಲ್ಲಿ ಕೇರಳದಲ್ಲಿ ಕಾಣಿಸಿಕೊಂಡಿದ್ದ ನಿಫಾ ವೈರಸ್‌ನಿಂದ ಆಗ ಕೇರಳದಲ್ಲಿ17 ಮಂದಿ ಬಲಿಯಾಗಿದ್ದರು. ಕೇರಳದ ಪಕ್ಕದ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಆಸ್ಪತ್ರೆಗೆ ಕೇರಳದಿಂದ ಅತೀ ಹೆಚ್ಚಿನ ರೋಗಿಗಳು ಬರುತ್ತಾರೆ. ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲೂ ನಿಫಾ ವೈರಸ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ನಿಫಾ ಆತಂಕದ ನಡುವೆಯೇ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಜಾಸ್ತಿಯಾಗುತ್ತಿದೆ.ಕಳೆದ ಎಪ್ರಿಲ್ ನಿಂದ ಜಿಲ್ಲೆಯಲ್ಲಿ198 ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಕೇವಲ ಎರಡು ತಿಂಗಳಿನಲ್ಲೇ 60 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬಂದವರಲ್ಲೇ ಜಾಸ್ತಿ ಡೆಂಗ್ಯೂ ಪ್ರಕರಣ ಕಾಣಿಸಿದ್ದು, ಮಂಗಳವಾರ ಶಂಕಿತ ಡೆಂಗ್ಯೂ ದಿಂದ 25 ವರ್ಷದ ಯುವತಿಯೂ ಸಾವುಗೀಡಾಗಿದ್ದಾರೆ.

ದ.ಕ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಸೊಳ್ಳೆಗಳ ಉತ್ಪತ್ತಿಯೂ ಜಾಸ್ತಿಯಾಗುತ್ತಿದೆ. ಡೆಂಗ್ಯೂ ಜ್ವರದ ಬಗ್ಗೆಯೂ ಎಚ್ಚರದಿಂದ ಇರುವಂತೆ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ.ನವೀನ್ ಕುಮಾರ್ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+