ಗೋವಾದಿಂದ ಆಗಮಿಸಿದ ಮಂಗಳೂರಿನ ವ್ಯಕ್ತಿಗೆ ಅಂಟಿದೆಯಾ ನಿಫಾ ವೈರಸ್?
ದಕ್ಷಿಣ ಕನ್ನಡ, ಸೆಪ್ಟೆಂಬರ್ 14: ನಿಫಾ ವೈರಸ್ ಸೋಂಕಿನಿಂದ ಕೇರಳದ ಕೋಯಿಕ್ಕಾಡ್ ಜಿಲ್ಲೆಯಲ್ಲಿ 12 ವರ್ಷದ ಬಾಲಕ ಮೃತಪಟ್ಟು ಒಂದೇ ವಾರದಲ್ಲೇ ಅದೇ ರೋಗದ ಲಕ್ಷಣಗಳು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ವ್ಯಕ್ತಿಯೊಬ್ಬರಲ್ಲಿ ಕಾಣಿಸಿಕೊಂಡಿರುವುದು ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯಾಧಿಕಾರಿ ಕೆ ವಿ ತ್ರಿಲೋಕ ಚಂದ್ರ ನೀಡಿರುವ ಮಾಹಿತಿ ಪ್ರಕಾರ, ಕಾರವಾರ ಮೂಲದ ಈ ವ್ಯಕ್ತಿ ಗೋವಾದಲ್ಲಿ ಆರ್ ಟಿ- ಪಿಸಿಆರ್ ಕಿಟ್ ತಯಾರಿಸುವ ಖಾಸಗಿ ಪ್ರಯೋಗಾಲಯ ವೊಂದರಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಎರಡು ದಿನಗಳ ಹಿಂದೆ ಜ್ವರ ಬಂದು ಗುಣಮುಖನಾಗಿದ್ದ ಈತ, ತನಗೆ ನಿಫಾ ವೈರಸ್ ತಗುಲಿರಬಹುದೆಂದು ಶಂಕೆ ಹಿನ್ನೆಲೆ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. "ನಾವು ಜಾಗರೂಕರಾಗಿರಬೇಕು ಆದರೆ ಭಯಪಡುವ ಅಗತ್ಯವಿಲ್ಲ. ವ್ಯಕ್ತಿಯು ಇಲ್ಲಿಯವರೆಗೆ ಯಾವುದೇ ತೀವ್ರವಾದ ರೋಗಲಕ್ಷಣಗಳನ್ನು ವರದಿ ಮಾಡಿಲ್ಲ, "ಎಂದು ಅವರು ಹೇಳಿದರು.
ಕಾರವಾರ ಮೂಲದ ಈ ವ್ಯಕ್ತಿಯ ಗಂಟಲು ದ್ರವವನ್ನು ಪಡೆದಿರುವ ಮಂಗಳೂರು ಆಸ್ಪತ್ರೆ ಸಿಬ್ಬಂದಿಯು ಅದನ್ನು ಪರೀಕ್ಷಿಸುವುದಕ್ಕೆ ಪುಣೆಯ ರಾಷ್ಟ್ರೀಯ ವೈರಾಣು ಪತ್ತೆ ಕೇಂದ್ರಕ್ಕೆ ರವಾನಿಸಿದ್ದಾರೆ. ನಾಳೆಯೊಳಗೆ ಈ ವ್ಯಕ್ತಿಯ ಮಾದರಿಯ ವರದಿ ಬರುವ ಸಾಧ್ಯತೆ ಇದ್ದು, ತದನಂತರವೇ ಈತನಿಗೆ ನಿಫಾ ತಗುಲಿದೆಯೋ, ಇಲ್ಲವೋ ಎನ್ನುವುದು ಖಚಿತವಾಗಲಿದೆ.

ನಿಫಾ ಸೋಂಕು ಶಂಕಿತ ವ್ಯಕ್ತಿಗೆ ಕೇರಳದ ನಂಟು ಇಲ್ಲ
ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆ ಜೊತೆಗೆ ನಂಟು ಹೊಂದಿರುವುದನ್ನು ಅಧಿಕಾರಿಯೊಬ್ಬರು ಪತ್ತೆ ಮಾಡಿದ್ದಾರೆ. ನಿಫಾ ವೈರಸ್ ಸೋಂಕಿನ ಪರೀಕ್ಷೆಗೊಳಗಾದ ವ್ಯಕ್ತಿಯು ಇತ್ತೀಚಿಗೆ ಕೇರಳಕ್ಕೆ ಪ್ರಯಾಣಿಸಿದ ಇತಿಹಾಸವಿಲ್ಲ, ಅಥವಾ ಕೇರಳದಿಂದ ಆಗಮಿಸಿದ ಯಾವುದೇ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಗೊತ್ತಾಗಿದೆ. ಆದರೆ ಈ ವ್ಯಕ್ತಿಯು ಗೋವಾಗೆ ಭೇಟಿ ನೀಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಗಡಿ ಜಿಲ್ಲೆಗಳ ಮೇಲೆ ಕಣ್ಗಾವಲು ಇರಿಸಿದ ಆರೋಗ್ಯ ಇಲಾಖೆ
ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಬಹುಪಾಲು ಗಡಿ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯು ಹೆಚ್ಚಿನ ಕಣ್ಗಾವಲು ಇರಿಸಿತ್ತು. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಲಕ್ಷ್ಯ ವಹಿಸಲಾಗಿತ್ತು.

ನಿಫಾ ವೈರಸ್ ರೋಗದ ಲಕ್ಷಣಗಳನ್ನು ಇಲ್ಲಿ ಗುರುತಿಸಿ
ಕೇರಳದಿಂದ ಆಗಮಿಸುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ನಿಫಾ ವೈರಸ್ ರೋಗದ ಲಕ್ಷಣಗಳನ್ನು ಈ ಕೆಳಗಿನಂತೆ ಪಟ್ಟಿ ಮಾಡಲಾಗಿದೆ.
* ಜ್ವರ
* ಬದಲಾದ ಮಾನಸಿಕ ಸ್ಥಿತಿ
* ತೀವ್ರ ದೌರ್ಬಲ್ಯ
* ತಲೆನೋವು
* ಉಸಿರಾಟದ ತೊಂದರೆ
* ಕೆಮ್ಮು
* ವಾಂತಿ
* ಸ್ನಾಯು ನೋವು
* ಸ್ನಾಯು ಸೆಳೆತ
* ಅತಿಸಾರ

ಹೇಗೆ ಹರಡುತ್ತೆ ನಿಫಾ ವೈರಸ್ ಸೋಂಕು?
ಸಾಮಾನ್ಯವಾಗಿ ಈ ನಿಫಾ ರೋಗಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್ ಬ್ಯಾಟ್ಸ್) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ. ಅಂತೆಯೇ ಪ್ರಾಣಿ ಇಲ್ಲವೇ ಪಕ್ಷಿಗಳಿಂದಲೂ ಇದು ಹರಡುವ ಸಾಧ್ಯತೆ ಇದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ಈ ನಿಫಾ ವೈರಾಣು ಮೂಲಸ್ಥಾನ ಪ್ಟೆರೋಪೋಡಿಡೇ ಬಾವಲಿ ಕುಟುಂಬ ಎನ್ನಲಾಗಿದೆ. ಈ ಜಾತಿಯ ಬಾವಲಿಗಳ ಮುಖಾಂತರ ಈ ಮಾರಕ ವೈರಾಣು ಹರಡುತ್ತಿದೆ. ಈ ಜಾತಿಯ ಬಾವಲಿಗಳು ತಿಂದು ಬಿಸಾಡಿದ ಅಥವಾ ಈ ಬಾವಲಿಗಳ ಜೊಲ್ಲು, ಮೂತ್ರ ಬಿದ್ದ ವಸ್ತುಗಳ ಸ್ಪರ್ಶವಾದರೆ ಈ ಸೋಂಕು ಹರಡುವ ಸಾಧ್ಯತೆ ಇದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications