ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ದೇವೇಗೌಡ

By Manjunatha
|
Google Oneindia Kannada News

Recommended Video

ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ ಎಚ್ ಡಿ ದೇವೇಗೌಡ | Oneindia Kannada

ಚಿಕ್ಕಮಗಳೂರು, ಸೆಪ್ಟೆಂಬರ್ 03: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಬಂದಿದ್ದು ಎಲ್ಲೆಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿರುತ್ತದೆಯೋ ಅಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.

ಚಿಕ್ಕಮಗಳೂರಿಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು, ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಎಲ್ಲೆಲ್ಲಿ ಅತಂತ್ರ ಇರುತ್ತದೆಯೋ ಅಲ್ಲೆಲ್ಲಾ ಕಾಂಗ್ರೆಸ್ ಜೊತೆಯೇ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆ : ಕಾಂಗ್ರೆಸ್‌ ದೊಡ್ಡ ಪಕ್ಷ, ಬಿಜೆಪಿಗೆ 2ನೇ ಸ್ಥಾನ!ಸ್ಥಳೀಯ ಸಂಸ್ಥೆ ಚುನಾವಣೆ : ಕಾಂಗ್ರೆಸ್‌ ದೊಡ್ಡ ಪಕ್ಷ, ಬಿಜೆಪಿಗೆ 2ನೇ ಸ್ಥಾನ!

ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲೆಂದೇ ನಾವು ಮೈತ್ರಿ ಮಾಡಿಕೊಂಡಿದ್ದೇವೆ ಹಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ.

No alliance with BJP in local elections also: Deve Gowda

ಮೈಸೂರು ಅತಂತ್ರ ಫಲಿತಾಂಶ: ಲೋಕಲ್ ಫೈಟ್ ನಲ್ಲೂ ಕೈ -ತೆನೆ ಮೈತ್ರಿ ಸಾಧ್ಯತೆಮೈಸೂರು ಅತಂತ್ರ ಫಲಿತಾಂಶ: ಲೋಕಲ್ ಫೈಟ್ ನಲ್ಲೂ ಕೈ -ತೆನೆ ಮೈತ್ರಿ ಸಾಧ್ಯತೆ

ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ. ಇದು ಕೆಲ ಜಿಲ್ಲೆಗಳಲ್ಲಿ ನಡೆದ ಚುನಾವಣೆ ಅಷ್ಟೆ ಎಂದು ಅವರು ಹೇಳಿದರು.

English summary
JDS will never make alliance with BJP said JDS president Deve Gowda. He says this election is not compose for Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X