ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಬೇಡ: ಸಂಸದ ನಳಿನ್

ಕರ್ನಾಟಕದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಲೋಕಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮಾರ್ಚ್. 24 : ಕರ್ನಾಟಕದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಲೋಕಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

ಕರ್ನಾಟಕದ ಜನತೆ ವರದಿಯ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯನ್ನು ವಿರೋಧಿಸುತ್ತಿದ್ದಾರೆ. ರಾಜ್ಯ ಸರಕಾರವೂ ಕೂಡ ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿದೆ.[ಕಸ್ತೂರಿ ರಂಗನ್ ವರದಿ: ಕೇಂದ್ರದ ಅಧಿಸೂಚನೆಗೆ ಕರ್ನಾಟಕದ ವಿರೋಧ]

No need of Kasturirangan report says Naleen Kumar Kateel in Lokasabha

ಅಧಿಸೂಚನೆ ಪ್ರಕಾರ 10 ಜಿಲ್ಲೆಗಳ 1,576 ಗ್ರಾಮಗಳೂ ಸೇರಿದಂತೆ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಪ್ರದೇಶದ ವ್ಯಾಪ್ತಿ ಹೊಂದಿದೆ. ಈ ಅಧಿಸೂಚನೆ ಜಾರಿಗೊಳಿಸಿದರೆ, ಈ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕೈಕೊಳ್ಳುವಂತಿಲ್ಲ.

ಈ ವಲಯದ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಲೆ, ಆಸ್ಪತ್ರೆ ಮತ್ತು ರಸ್ತೆಗಳ ನಿರ್ಮಾಣ ನಿಷೇಧಿಸಲ್ಪಡುತ್ತದೆ. ಭೂ ಮಂಜೂರಾತಿ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಸುವಂತಿಲ್ಲ.

ಇದರಿಂದ ಸದ್ಯ ಅಸ್ತಿತ್ವದಲ್ಲಿರುವ ಸಸ್ಯಕಾಶಿ, ಕಾಫಿ ಮತ್ತು ಟೀ ತೋಟ ಸೇರಿದಂತೆ ಆರ್ಥಿಕ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಈ ವರದಿ ಜಾರಿಗೊಳಿಸದೆ ಹಿಂಪಡೆಯಬೇಕೆಂದು ಆಗ್ರಹಿಸಿದರು.

English summary
No need of Kasturirangan report to karnataka, said MP Naleen Kumar Kateel in Lokasabha. Naleen kumar has urged at Lokasabha that there is no need for kasturi rangan report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X