ಕಾನೂನು ಕೈಗೆತ್ತಿಕೊಳ್ಳುವ ಸಂಘಟನೆಗಳನ್ನು ಮಟ್ಟ ಹಾಕ್ತೇವೆ - ಮಂಗಳೂರಿನಲ್ಲಿ ಸಿಎಂ
ಮಂಗಳೂರು, ಜುಲೈ 7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡಿಸಲು ಯತ್ನಿಸುವ ಸಂಘಟನೆಗಳನ್ನು ಮಟ್ಟ ಹಾಕ್ತೀವಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಅಡ್ಯಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಎಂ , 'ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಕೆಲವರು ಯತ್ನಿಸುತ್ತಿದ್ದಾರೆ. ಯಾವುದೇ ಸಂಘಟನೆಗಳಿಗೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಅಂತಹ ಸಂಘಟನೆಗಳನ್ನು ಮಟ್ಟ ಹಾಕ್ತೇವೆ," ಎಂದು ಹೇಳಿದ್ದಾರೆ.

ಈ ಬಗ್ಗೆ ಈಗಾಗಲೇ ಕಾನೂನು ಕೈಗೆತ್ತುಕೊಳ್ಳುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೆ ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲೇ ಮಾಡುವುದಾಗಿಯೂ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಜತೆಗೆ ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ಚರ್, ಇಂಧನ ಸಚಿವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಸೇರಿದಂತೆ ಹಲವರು ಸಾಥ್ ನೀಡಿದರು.

ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಸಚಿವ ರೋಷನ್ ಬೇಗ್
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತರಾದ ಬಳಿಕ ಶೃಂಗೇರಿಗೆ ಭೇಟಿ ನೀಡಿದ ಸಚಿವ ರೋಷನ್ ಬೇಗ್, ಶಾರದಾಂಬೆಯ ದರ್ಶನ ಪಡೆದು ಆರತಿ ಪ್ರಸಾದ ಸ್ವೀಕರಿಸಿದರು. ಬಳಿಕ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.












Click it and Unblock the Notifications