ಫ್ಯಾಕ್ಟ್ ಚೆಕ್: ಕಾಸರಗೋಡು ಗ್ರಾಮಗಳ ಹೆಸರು ಬದಲಾಯಿಸುವ ಯೋಚನೆ ಇಲ್ಲ
ಕಾಸರಗೋಡು, ಜೂನ್ 29: ಕಳೆದ ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ವಿಪರೀತ ಚರ್ಚೆಯಲ್ಲಿರುವುದೆಂದರೆ ಕೇರಳ ಸರ್ಕಾರವು ಕಾಸರಗೋಡು ಜಿಲ್ಲೆಯ ಗಡಿ ಗ್ರಾಮಗಳ ಹೆಸರನ್ನು ಕನ್ನಡದಿಂದ 'ಮಲಯಾಳಂ'ಗೆ ಬದಲಾಯಿಸಲು ಯೋಚಿಸುತ್ತಿದೆ ಎಂದು ವರದಿಯಾಗಿತ್ತು.
ಆದರೆ, ಕಾಸರಗೋಡು ಸ್ಥಳೀಯ ಸಂಸ್ಥೆಗಳ ವಿವಿಧ ಅಧಿಕಾರಿಗಳು ಖಾಸಗಿ ಸುದ್ದಿ ಪತ್ರಿಕೆಗೆ ಮಾಹಿತಿ ನೀಡಿದ್ದು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಮೊದಲು ಪ್ರಾರಂಭಿಸಿದ ನಕಲಿ ಸುದ್ದಿಯಾಗಿದೆ ಕಾಸರಗೋಡು ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಎಂದು ಹೇಳಿದ್ದಾರೆ.
"ನಮ್ಮೊಂದಿಗೆ ಕಾಸರಗೋಡಿನ ಗಡಿ ಗ್ರಾಮ ಹಳ್ಳಿಗಳ ಹೆಸರನ್ನು 'ಮಲಯಾಳಂ'ಗೆ ಬದಲಾಯಿಸುವ ಬಗ್ಗೆ ಫೈಲ್ ಅಥವಾ ಯಾವ ಅರ್ಜಿಯೂ ಇಲ್ಲ,'' ಎಂದು ತಿಳಿಸಿದ್ದಾರೆ.

ಜೂನ್ 25 ರಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮಟ್ಟಿಹಳ್ಳಿ, ಕೇರಳ ಸರ್ಕಾರವು ಕಾಸರಗೋಡು ಜಿಲ್ಲೆಯ ಗಡಿ ಗ್ರಾಮಗಳ ಹೆಸರನ್ನು ಕನ್ನಡದಿಂದ ಮಲಯಾಳಂಗೆ ಬದಲಾಯಿಸಿದೆ ಎಂಬ ವಿಷಯದ ಮೂಲಕ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿತು. ಮೂರು ಪ್ಯಾರಾಗ್ರಾಫ್ ಟಿಪ್ಪಣಿಯ ಎರಡನೇ ಪ್ಯಾರಾಗ್ರಾಫ್‌ನಲ್ಲಿ ಕೇರಳ ಸರ್ಕಾರವು ಗ್ರಾಮದ ಹೆಸರುಗಳನ್ನು ಬದಲಾಯಿಸಲು "ಪ್ರಕ್ರಿಯೆಯನ್ನು ಪ್ರಾರಂಭಿಸಿದೆ" ಎಂದು ಹೇಳಲಾಗಿತ್ತು.
ಪತ್ರಿಕಾ ಟಿಪ್ಪಣಿ ಬೆಂಗಳೂರಿನಲ್ಲಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಸುದ್ದಿ ಮಾಧ್ಯಮಗಳು ಈ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ್ದವು. ಕೇರಳ ಸರ್ಕಾರ ಕಾಸರಗೋಡು ಜಿಲ್ಲೆಯ ಮಧೂರು ಎಂಬ ಗ್ರಾಮವನ್ನು ಮಧುರಂ, ಕಾರಡ್ಕವನ್ನು ಕಡಗಮ್, ಪಿಳಿಕುಂಜೆಯನ್ನು ಪಿಳಿಕುನ್ನು, ಮಂಜೇಶ್ವರವನ್ನು ಮಂಜೇಶ್ವರಂ, ಕುಂಬಳವನ್ನು ಕುಂಬ್ಳಾ, ನೆಲ್ಲಿಕುಂಜವನ್ನು ನೆಲ್ಲಿಕುನ್ನಿ, ಮಲ್ಲಅನ್ನು ಮಲ್ಲಂ, ಬೇದಡ್ಕವನ್ನು ಬೇಡಗಮ್, ಆನೆಬಾಗಿಲುವನ್ನು ಆನೆವಾಗಿಲ್, ಹೊಸದುರ್ಗವನ್ನು ಪುದಿಯಕೋಟ, ಸಸಹಿತ್ಲುವನ್ನು ಶೈವಲಖ್ ಎಂದು ಬದಲಾಯಿಸಲು ತೀರ್ಮಾನ ಮಾಡಿದೆ ಎಂದು ಹೇಳಲಾಗಿತ್ತು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ, "ಕೆಲವು ಸ್ಥಳೀಯ ಸಂಸ್ಥೆಗಳು ಅಲ್ಲಿನ ಜನರೊಂದಿಗೆ ಯಾವುದೇ ಸಮಾಲೋಚನೆ ಮಾಡದೆ ಕಾಸರಗೋಡಿನ ಕನ್ನಡ ಮಾತನಾಡುವ ಗ್ರಾಮಗಳ ಹೆಸರನ್ನು ಬದಲಾಯಿಸಲು ಪ್ರಯತ್ನಿಸುತ್ತಿವೆ. ಇದು ಇಲ್ಲಿ ದೀರ್ಘಕಾಲದಿಂದ ಇರುವ ಕನ್ನಡ ಮತ್ತು ತುಳು ಸಂಸ್ಕೃತಿಯನ್ನು ನಾಶಪಡಿಸುತ್ತದೆ,'' ಎಂದು ಹೇಳಿದ್ದರು.
ಕಾಸರಗೋಡು ಜಿಲ್ಲಾಡಳಿತ ಅಥವಾ ಸ್ಥಳೀಯ ಸಂಸ್ಥೆಗಳೊಂದಿಗೆ ಯಾವುದೇ ಪರಿಶೀಲನೆ ನಡೆಸದೆ ಕೆಲವು ಮಾಧ್ಯಮಗಳು ಪತ್ರಿಕಾ ವರದಿ ಮಾಡಿವೆ.
ಈ ವಿಷಯವನ್ನು ಜೀವಂತವಾಗಿಡಲು ಸೋಮಶೇಖರ, ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ, ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದರು. ನಂತರ ಸಿಎಂ ಯಡಿಯೂರಪ್ಪ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್‌ರಿಗೆ ಪತ್ರದ ಮೂಲಕ ಗ್ರಾಮಗಳ ಹೆಸರು ಬದಲಾಯಿಸದಂತೆ ಮನವಿ ಮಾಡಿದ್ದರು.
"ಕರ್ನಾಟಕ ರಾಜ್ಯದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಆಧಾರ ರಹಿತ ಪತ್ರಿಕಾ ಹೇಳಿಕೆಯಿಂದ ಕರ್ನಾಟಕ ಮಾಧ್ಯಮಗಳು ಮತ್ತು ರಾಜಕಾರಣಿಗಳು ಗೊಂದಲ ಮೂಡಿಸುತ್ತಿದ್ದಾರೆ. ಗ್ರಾಮಗಳ ಹೆಸರನ್ನು ಬದಲಾಯಿಸುವ ಬಗ್ಗೆ ಯಾವುದೇ ಫೈಲ್ ಅಥವಾ ಅರ್ಜಿಯೂ ಇಲ್ಲ,'' ಎಂದು ಕಾಸರಗೋಡು ಜಿಲ್ಲಾಡಳಿತ ಹೇಳಿದೆ. ಇಲ್ಲಿಗೆ ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರನ್ನು ಬದಲಾಯಿಸುವ ಗೊಂದಕ್ಕೆ ತೆರೆ ಬಿದ್ದಂತಾಗಿದೆ.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications