ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಯದಂಥ ಮಳೆಗೆ ಮಂಗಳೂರಿನ ರಸ್ತೆಗಳಲ್ಲಿ ನೀರೋ ನೀರು

By ಮಂಗಳೂರು ಪ್ರತಿನಿಧಿ
|
Google Oneindia Kannada News

Recommended Video

ಮೆಕುನು ಚಂಡಮಾರುತದಿಂದ ಮಂಗಳೂರಿಗೆ ಎಫೆಕ್ಟ್ | ಜನ ಜೀವನ ಅಸ್ತವ್ಯಸ್ತ| Oneindia Kannada

ಮಂಗಳೂರು ಮೇ 29 : ಒಂದೆಡೆ ಮುಂಗಾರು ಪ್ರವೇಶದ ಮುನ್ಸೂಚನೆ, ಇನ್ನೊಂದೆಡೆ ಮೆಕ್ನು ಚಂಡಮಾರುತದ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ. ಮಂಗಳವಾರ ಮುಂಜಾನೆಯಿಂದ ಮಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ರಸ್ತೆಯಿಡೀ ನೀರಿನಿಂದ ಆವೃತವಾಗಿದೆ. ನಗರದ ಎಂ.ಜಿ.ರಸ್ತೆ, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟಾ ಪ್ರದೇಶದಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಧಕ್ಕೆ ಉಂಟಾಗಿದೆ.

Normal life hit by rain in Mangaluru

ಆಕಾಶವೇ ತೂತಾದಂತೆ ಕರಾವಳಿಯಲ್ಲಿ ಮಳೆ, ಇಬ್ಬರು ಸಾವುಆಕಾಶವೇ ತೂತಾದಂತೆ ಕರಾವಳಿಯಲ್ಲಿ ಮಳೆ, ಇಬ್ಬರು ಸಾವು

ನಗರದ ತಗ್ಗು ಪ್ರದೇಶದ ಅಂಗಡಿ, ವ್ಯಾಪಾರ ಕೇಂದ್ರಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೂ ನೀರು ನುಗ್ಗಿದ್ದು, ಆರಂಭಿಕ ಮಳೆಯಲ್ಲೇ ಜನರ ಪರದಾಟ ಆರಂಭವಾಗಿದೆ. ನಗರದ ಕೊಟ್ಟಾರ, ಅತ್ತಾವರದಲ್ಲಿ ನೆರೆ ಪರಿಸ್ಥತಿ ಸೃಷ್ಠಿಯಾಗಿದ್ದು, ಎಲ್ಲೆಡೆ ನೀರು ಆವರಿಸಿರುವ ಪರಿಣಾಮ ಜನರು ಆತಂಕ ಎದುರಿಸುತ್ತಿದ್ದಾರೆ.

Normal life hit by rain in Mangaluru

ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸಂಚಾರ ಸ್ತಬ್ಧವಾಗಿದೆ. ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಮಳೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮುಂಜಾಗ್ರತೆ ವಹಿಸದೇ ಇರುವುದು ಜನರು ಕಷ್ಟ ಎದುರಿಸುವಂತಾಗಿದೆ.

English summary
Normal life hit by heavy rain in Mangaluru, Dakshina Kannada district on Monday and Tuesday. Water flowing on road, vehicle movement become very slow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X