ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯ ಸಾಹಿತಿ ಡಾ. ಸಾರಾ ಅಬೂಬಕ್ಕರ್ ಗೆ ಲಷ್ಕರಿ ಪ್ರಶಸ್ತಿ

|
Google Oneindia Kannada News

ಮಂಗಳೂರು, ಆಗಸ್ಟ್ 30 : ಪುತ್ತೂರಿನ ಲೋಕ ವಿಕಾಸ ಪ್ರತಿಷ್ಠಾನ ಹಾಗೂ ಲಷ್ಕರಿ ಕೇಶವ ಭಟ್ ಟ್ರಸ್ಟ್ ಪ್ರತಿವರ್ಷ ನೀಡುವ ಲಷ್ಕರಿ ಪ್ರಶಸ್ತಿಗೆ ಈ ಬಾರಿ ಹಿರಿಯ ಸಾಹಿತಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಅವರನ್ನು ಆಯ್ಕೆ ಮಾಡಲಾಗಿದೆ.

ಮುಕ್ತ ವ್ಯಾಪ್ತಿಯನ್ನು ಹೊಂದಿರುವ ಈ ಪ್ರಶಸ್ತಿಗೆ ವಿಶಿಷ್ಟ ಸಾಧಕರನ್ನು ಪ್ರತಿ ವರ್ಷ ಆಯ್ಕೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಅದರಲ್ಲೂ ಮಹಿಳಾ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಸಾರಾ ಅಬೂಬಕ್ಕರ್ ಅವರನ್ನು 2017ನೇ ಸಾಲಿನ ಲಷ್ಕರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Novelist Dr Sara Abubakar selected for 2017 Lashkari award

ಸೆಪ್ಟೆಂಬರ್ 3ರಂದು ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.

ಈ ಸಂದರ್ಭದಲ್ಲಿ ಲೋಕ ವಿಕಾಸ್ ಪ್ರತಿಷ್ಠಾನದ ಅಧ್ಯಕ್ಷ ಎಸ್ .ಜಿ ಕೃಷ್ಣರವರು ರಚಿಸಿದ ಸಮಾನ ನಾಗರಿಕ ಸಂಹಿತೆ ಒಂದು ವಿವೇಚನೆ ಎಂಬ ಕೃತಿ ಕೂಡ ಅನಾವರಣಗೊಳ್ಳಲಿದೆ .

ಕಾರ್ಯಕ್ರಮದ ಅಂಗವಾಗಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ,ಅಶಕ್ತರಿಗೆ ವೈದ್ಯಕೀಯ ಚಿಕಿತ್ಸೆ ನೆರವು ಸೇರಿದಂತೆ ವಿದ್ಯಾಸಂಸ್ಥೆಗಳಿಗೆ ಪ್ರತಿಷ್ಠಾನದ ವತಿಯಿಂದ ಕೊಡುಗೆಗಳ ವಿತರಣೆ ನಡೆಯಲಿದೆ.

English summary
Popular Kannada novelist Dr.Sara Abubakar selected this time for Lashkari award 2017 which will be given every year by Puttur Loka vikas and lashkari keshav bhat trust.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X