ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾಡಿ ಘಾಟ್ ನಲ್ಲಿ ಸ್ಥಳೀಯರಿಂದ ಅಧಿಕಾರಿಗಳಿಗೆ ದಿಗ್ಬಂಧನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 11: ಶಿರಾಡಿ ಘಾಟ್ ನಲ್ಲಿ ಸರಕಾರಿ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ದಿಗ್ಬಂಧನ ಹಾಕಿದ ಘಟನೆ ನಡೆದಿದೆ.

ಶಿರಾಡಿ ಘಾಟ್ ನಲ್ಲಿ ಅಧಿಕಾರಿಗಳು ಮಾತ್ರ ಸಂಚಾರ ಮಾಡುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲಿ ಅಧಿಕಾರಿಗಳು ಸಂಚರಿಸುವುದಕ್ಕೆ ಯಾವುದೇ ಆಕ್ಷೇಪ ಇಲ್ಲ. ಆದರೆ ಜನಸಾಮಾನ್ಯರಿಗೆ ತೊಂದರೆ ಕೊಡಲಾಗುತ್ತಿದೆ ಎಂಬುದು ಸಿಟ್ಟಿಗೆ ಕಾರಣವಾಗಿದೆ.

ಶಿರಾಡಿ ಘಾಟಿ ರಸ್ತೆಯಲ್ಲಿ ಜನಪ್ರತಿನಿಧಿಗಳ ಕಾರಿಗೆ ತಡೆಯೊಡ್ಡಿದ ಮರ!ಶಿರಾಡಿ ಘಾಟಿ ರಸ್ತೆಯಲ್ಲಿ ಜನಪ್ರತಿನಿಧಿಗಳ ಕಾರಿಗೆ ತಡೆಯೊಡ್ಡಿದ ಮರ!

ಜುಲೈ 15ರವರೆಗೆ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಅನುಮತಿ ನೀಡದ ಹಿನ್ನೆಲೆಯಲ್ಲಿ ಸ್ಥಳೀಯರು ಸ್ವಲ್ಪ ಮಟ್ಟಿಗೆ ಅಸಮಾಧಾನಗೊಂಡಿದ್ದಾರೆ. ಆದರೆ ಜನ ಸಾಮಾನ್ಯರ ಸಂಚಾರಕ್ಕೆ ಅನುಮತಿ ನೀಡದೆ ಹೆದ್ದಾರಿ ಪ್ರಾಧಿಕಾರದ ಆಧಿಕಾರಿಗಳು ಅಕ್ರಮವಾಗಿ ಸಂಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Shiradi Ghat

ಈ ಹಿನ್ನೆಲೆಯಲ್ಲಿ ಜುಲೈ ಹನ್ನೆರಡರಿಂದ (ಗುರುವಾರದಿಂದ) ಸಾರ್ವಜನಿಕರಿಗೂ ಅನುಮತಿ ಸಂಚಾರಕ್ಕೆ ಅನುಮತಿ ನೀಡುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲ, ಅಧಿಕಾರಿಗಳ ವಾಹನಗಳಿಗೆ ಮುತ್ತಿಗೆ ಹಾಕಿ ಪಟ್ಟು ಹಿಡಿದಿದ್ದಾರೆ. ಈ ವೇಳೆ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ, ಸ್ಥಳೀಯರ ಮನವೊಲಿಸಲು ಪ್ರಯತ್ನ ಮಾಡಿದರು.

English summary
National Highway Authority of India officials stopped by local people in Shiradi Ghat. This road not opened for public. But officials traveling in this road. Because of that people angry about officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X