ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡದ ಇಬ್ಬರು ರಾಜ್ಯಕ್ಕೆ ಪ್ರಥಮ

ಮಂಗಳೂರು, ಏಪ್ರಿಲ್ 15:ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ಅವರು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದು, ಫಲಿತಾಂಶದ ಪ್ರಕಾರ ಕರಾವಳಿ ಜಿಲ್ಲೆಗಳಾದ ಉಡುಪಿಗೆ ಪ್ರಥಮ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ (596) ಹಾಗೂ ವಿಟ್ಲದ ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ಪಿಯು ಕಾಲೇಜಿನ ಶ್ರೀಕೃಷ್ಣ ಶರ್ಮ ಕೆ. ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

Olvita Ancil DSouza and Srikrishna Sharma Topper in Commerce

ಅಂತೆಯೇ ವಾಣಿಜ್ಯ ವಿಭಾಗದ ಮಂಗಳೂರಿನ ಕೊಡಿಯಾಲ್ ಬೈಲಿನ ಕೆನರಾ ಕಾಲೇಜಿನ ಶ್ರೀಯಾ ಶೆಣೈ 595 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಇದೀಗ ಒಲ್ವಿಟಾ ಆಯನ್ಸಿಲ್ಲಾ ಡಿಸೋಜಾ ಅವರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಮೋಹನ್ ಆಳ್ವಾ ಅಭಿನಂದಿಸಿದ್ದಾರೆ.

ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದು ಮುಂದೆ ಸಿಎ ಓದುವುದಾಗಿ ತಿಳಿಸಿದ್ದಾರೆ. ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ ಎಂದು ಹೇಳಿದ ಒಲ್ವಿಟಾ ಡಿಸೋಜಾ, ಪರೀಕ್ಷೆಗಾಗಿ ತುಂಬಾ ಕಷ್ಟಪಟ್ಟು ಓದುವ ಬದಲು ಪ್ಲಾನ್ ಮಾಡಿ ಯೋಜನೆ ಪ್ರಕಾರವಾಗಿ ಓದಿರುವುದು ಫಲ ನೀಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+