ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತರಗತಿ ಆರಂಭ; ವಿದ್ಯಾರ್ಥಿಗಳಿಗೆ 2 ಆಯ್ಕೆ ನೀಡಿದ ಮಂಗಳೂರು ವಿವಿ

|
Google Oneindia Kannada News

ಮಂಗಳೂರು, ಅಕ್ಟೋಬರ್ 27 : ಕರ್ನಾಟಕ ಸರ್ಕಾರ ನವೆಂಬರ್‌ 17ರಿಂದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭ ಮಾಡುವುದಾಗಿ ಘೋಷಣೆ ಮಾಡಿದೆ. ಮಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಆನ್‌ಲೈನ್, ಆಫ್ ಲೈನ್ ಕ್ಲಾಸ್ ಎಂಬ ಎರಡು ಆಯ್ಕೆಗಳನ್ನು ನೀಡಲಿದೆ.

ಸರ್ಕಾರ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನು ನವೆಂಬರ್ 17ರಿಂದ ಆರಂಭ ಮಾಡುವುದಾಗಿ ಘೋಷಣೆ ಮಾಡಿದೆ. ಕೋವಿಡ್ ಲಾಕ್ ಡೌನ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕಾಲೇಜುಗಳನ್ನು ತೆರೆಯಲಾಗುತ್ತಿದೆ.

ಕಾಲೇಜು ಮತ್ತೆ ಆರಂಭ: ತರಗತಿಗಳು ಹೇಗೆ ನಡೆಯಲಿವೆ? ಇಲ್ಲಿದೆ ವಿವರಕಾಲೇಜು ಮತ್ತೆ ಆರಂಭ: ತರಗತಿಗಳು ಹೇಗೆ ನಡೆಯಲಿವೆ? ಇಲ್ಲಿದೆ ವಿವರ

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಈ ಕುರಿತು ಮಾಹಿತಿ ನೀಡಿದ್ದಾರೆ. "ಸ್ಥಳೀಯ ಕೋವಿಡ್ ಪರಿಸ್ಥಿತಿ, ಸರ್ಕಾರದ ಮಾರ್ಗಸೂಚಿಗಳನ್ನು ಪರಿಶೀಲನೆ ಮಾಡಿದ ಬಳಿಕ ಕಾಲೇಜುಗಳನ್ನು ತೆರೆಯುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.

ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

Online Or Offline Class Mangalore University Option For Students

"ಹಾಜರಾತಿಯನ್ನು ಗಂಭೀರವಾಗಿ ಪರಿಗಣನೆ ಮಾಡುವುದಿಲ್ಲ. ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆನ್ ಲೈನ್ ಮತ್ತು ಆಫ್ ಲೈನ್ ಎಂಬ ಎರಡು ಆಯ್ಕೆಗಳನ್ನು ನೀಡಲಾಗುತ್ತದೆ" ಎಂದು ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದಾರೆ.

ಕರ್ನಾಟಕ: ನವೆಂಬರ್ 12 ಹೊತ್ತಿಗೆ 10 ಲಕ್ಷ ಕೊರೊನಾ ಸೋಂಕಿತರು ಕರ್ನಾಟಕ: ನವೆಂಬರ್ 12 ಹೊತ್ತಿಗೆ 10 ಲಕ್ಷ ಕೊರೊನಾ ಸೋಂಕಿತರು

ಕಾಲೇಜುಗಳನ್ನು ಆರಂಭಿಸುವುದಾದದರೆ ಕೋವಿಡ್ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು. ತರಗತಿಯಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬೇಕು, ಸಾಮಾಜಿಕ ಅಂತರ ಕಾಪಾಡುವುದು ಹೇಗೆ? ಮುಂತಾದ ನಿಯಮ ರೂಪಿಸಬೇಕು. ತರಗತಿ ನಡೆಸುವ ಆಯ್ಕೆಯನ್ನು ಮಂಗಳೂರು ವಿವಿ ಕಾಲೇಜುಗಳಿಗೆ ಬಿಡುತ್ತಿದೆ.

ವಿಶ್ವವಿದ್ಯಾಲಯದ ಶೇ 50ರಷ್ಟು ವಿದ್ಯಾರ್ಥಿಗಳು ಆನ್‌ಲೈನ್ ಕ್ಲಾಸ್‌ ಪರವಾಗಿದ್ದಾರೆ. ತರಗತಿಗಳನ್ನು ಮಾಡಿದ ಬಳಿಕ ಅದರ ವಿಡಿಯೋವನ್ನು ವಿಶ್ವವಿದ್ಯಾಲಯ ವೆಬ್ ಸೈಟ್‌ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ. ತರಗತಿಗೆ ಹಾಜರಾಗದ ವಿದ್ಯಾರ್ಥಿಗಳು ಅದನ್ನು ವೀಕ್ಷಿಸಬಹುದಾಗಿದೆ.

ಮಂಗಳೂರು ವಿಶ್ವವಿದ್ಯಾಲಯ ಅಂತಿಮ ವರ್ಷದ ಪದವಿ ಪರೀಕ್ಷೆಗಳ ಫಲಿತಾಂಶವನ್ನು ನವೆಂಬರ್ 15ರೊಳಗೆ ಮತ್ತು ಸ್ನಾತಕೋತ್ತರ ಪರೀಕ್ಷೆ ಫಲಿತಾಂಶವನ್ನು ಡಿಸೆಂಬರ್ 1ರೊಳಗೆ ನೀಡಲು ಸಿದ್ಧತೆಯನ್ನು ನಡೆಸುತ್ತಿದೆ.

Recommended Video

Surya Kumar Yadav ರನ್ನು Australia ತಂಡಕ್ಕೆ ಈಗಲೂ ಆಯ್ಕೆ ಮಾಡಿಲ್ಲ | Oneindia Kannada

ಅಕ್ಟೋಬರ್ 26ರ ಮಾಹಿತಿಯಂತೆ ದಕ್ಷಿಣ ಕನ್ನಡದಲ್ಲಿ 153 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 29693. ಸಕ್ರಿಯ ಪ್ರಕರಣಗಳು 2427.

English summary
Mangalore University will decide on dates for the commencement of colleges. It has left to the discretion of the students to opt for online or offline classes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X