ಆಸ್ಕರ್ ಫರ್ನಾಂಡೀಸ್ ಸ್ಥಿತಿ ಗಂಭೀರ: ಆರೋಗ್ಯ ವಿಚಾರಿಸಿದ ರಾಹುಲ್, ಸೋನಿಯಾ
ಮಂಗಳೂರು, ಜುಲೈ 21: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಯೋಗ ಮಾಡುವಾಗ ಕಾಲು ಜಾರಿ ಬಿದ್ದು, ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿಯನ್ನು ತಿಳಿಯಲು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಆಸ್ಕರ್ ಕುಟುಂಬಕ್ಕೆ ಕರೆ ಮಾಡಿ ವಿಚಾರಿಸಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವರೂ ಆದ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಕರ್ ಫರ್ನಾಂಡೀಸ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಆಸ್ಕರ್ ಆರೋಗ್ಯ ವಿಚಾರಿಸಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕರೆ ಮಾಡಿದ್ದಾರೆ. ಫರ್ನಾಂಡಿಸ್ ಕುಟುಂಬದವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಹುಲ್ ಹಾಗೂ ಸೋನಿಯಾ ಗಾಂಧಿ, ಆಸ್ಕರ್ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ.

ಭಾನುವಾರ ಬೆಳಿಗ್ಗೆ ಯೋಗ ಮಾಡುವ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡೀಸ್ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್ಗೆಂದು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸದ್ಯ ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications