ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಸ್ಕರ್ ಫರ್ನಾಂಡೀಸ್ ಸ್ಥಿತಿ ಗಂಭೀರ: ಆರೋಗ್ಯ ವಿಚಾರಿಸಿದ ರಾಹುಲ್, ಸೋನಿಯಾ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 21: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಯೋಗ ಮಾಡುವಾಗ ಕಾಲು ಜಾರಿ ಬಿದ್ದು, ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿಯನ್ನು ತಿಳಿಯಲು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಆಸ್ಕರ್ ಕುಟುಂಬಕ್ಕೆ ಕರೆ ಮಾಡಿ ವಿಚಾರಿಸಿದ್ದಾರೆ.

ಮಾಜಿ‌ ಸಚಿವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲುಮಾಜಿ‌ ಸಚಿವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವರೂ ಆದ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಕರ್ ಫರ್ನಾಂಡೀಸ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Mangaluru: Oscar Fernandes Hospitalized; Rahul Gandhi And Sonia Gandhi Talks To His Family Members

ಆಸ್ಕರ್ ಆರೋಗ್ಯ ವಿಚಾರಿಸಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕರೆ ಮಾಡಿದ್ದಾರೆ. ಫರ್ನಾಂಡಿಸ್ ಕುಟುಂಬದವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಹುಲ್ ಹಾಗೂ ಸೋನಿಯಾ ಗಾಂಧಿ, ಆಸ್ಕರ್ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ.

Mangaluru: Oscar Fernandes Hospitalized; Rahul Gandhi And Sonia Gandhi Talks To His Family Members

ಭಾನುವಾರ ಬೆಳಿಗ್ಗೆ ಯೋಗ ಮಾಡುವ ಸಂದರ್ಭ‌ದಲ್ಲಿ ಆಸ್ಕರ್ ಫರ್ನಾಂಡೀಸ್ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸದ್ಯ ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Recommended Video

ಗುಜರಾತ್ ಮಾದರಿಯಲ್ಲೇ ಸಿಎಂ ಪಟ್ಟದಿಂದ ಯಡಿಯೂರಪ್ಪ ಔಟ್ ?? | Oneindia Kannada

English summary
Congress leaders Rahul Gandhi and Sonia Gandhi have called the Oscar family to inquire about Oscar Fernandes's health.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X