ಮಕ್ಕಳ ಕುಂಚಗಳಲ್ಲಿ ಅರಳಿದ 'ವಿಶ್ವ ಪರಿಸರ ದಿನಾಚರಣೆ'ಯ ಚಿತ್ರಗಳು
ಮಂಗಳೂರು,ಜೂನ್ 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ರೇಡಿಯೋ ವಾಹಿನಿಯೊಂದ 15 ವರ್ಷದ ಒಳಗಿನ ಮಕ್ಕಳಿಗೇೂಸ್ಕರ ನಗರದ ಭಾರತ್ ಮಾಲ್ ನಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ಸುಮಾರು 80ಕ್ಕಿಂತಲೂ ಹೆಚ್ಚಿನ ಮಕ್ಕಳು ಇದರಲ್ಲಿ ಭಾಗವಹಿಸಿದ್ದರು. ಮಕ್ಕಳ ಪರಿಸರ ಜಾಗೃತಿ ಮೂಡಿಸುವ ಚಿತ್ರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವುದನ್ನು ಕಂಡು ಕಿವಿ, ಕಣ್ಣು, ಬಾಯಿ ಮುಚ್ಚಿಕೊಂಡು ಕುಳಿತಿರುವ ಮಂಗಗಳು, ಪರಿಸರ ನಾಶ ಬರಗಾಲಕ್ಕೆ ಆಹ್ವಾನ ನಿರೂಪಿಸುವ ಚಿತ್ರ, ಮನುಷ್ಯನಿಂದ ಜೀವ ಭಿಕ್ಷೆ ಬೇಡುತ್ತಿರುವ ವೃಕ್ಷ ದೇವತೆ, ಸುಂದರ ಪರಿಸರದ ರಮಣೀಯ ಚಿತ್ರಗಳು ಮಕ್ಕಳ ಕುಂಚಗಳಲ್ಲಿ ಮೂಡಿ ಬಂತು.

ಇದಲ್ಲದೆ, ಮರಗಳ ನಾಶದಿಂದ ಮನುಷ್ಯ ಉಸಿರಾಟಕ್ಕೆ ತೊಂದರೆಯಾಗುವ ಮುನ್ನುಡಿ, ವಾಯುಮಾಲಿನ್ಯದಿಂದ ಮನುಷ್ಯ ಮತ್ತು ಅರಣ್ಯ, ವನ್ಯಜೀವಿಗಳಿಗೆ ಆಗುವ ತೊಂದರೆ, ಮಾಲಿನ್ಯದಿಂದ ತನ್ನ ಮೂಲ ಸೌಂದರ್ಯ ಕಳೆದುಕೊಳ್ಳುತ್ತಿರುವ ತಾಜ್ ಮಹಲ್, ಜಾಗತಿಕ ತಾಪಮಾನದಿಂದ ಕರಗುತ್ತಿರುವ ಭೂಮಿ, ಕೆರೆಗಳ ಜಾಗದಲ್ಲಿ ನಿರ್ಮಾಣವಾಗುತ್ತಿರುವ ನಗರ... ಹೀಗೆ ಪರಿಸರ ಸೌಂದರ್ಯ ಹೇಳುವ, ಮನುಷ್ಯನಿಂದ ಪ್ರಕೃತಿಗೆ ಹೇಗೆ ತೊಂದರೆಯಾಗಿದೆ ಎಂದು ತೋರುವ ಚಿತ್ರಗಳನ್ನು ಪುಟ್ಟ ಮಕ್ಕಳು ಬಿಡಿಸಿದರು.

ಮನುಷ್ಯ ಪರಿಸರವನ್ನು ವಿನಾಶ ಮಾಡುತ್ತಿದ್ದಾನೆ. ನಮ್ಮ ಅಭಿವೃದ್ಧಿ ಸಂಪತ್ತು, ಬೃಹತ್ ಕೈಗಾರಿಕೆಗಳು ಶಾಶ್ವತವಲ್ಲ. ಪ್ರಕೃತಿಯೇ ಅಜರಾಮರ. ಈ ನಿಟ್ಟಿನಲ್ಲಿ ಪರಿಸರ ಪೋಷಿಸುವ ಕೆಲಸ ಮಾಡಬೇಕಿದೆ ಎಂದು ಆರ್ ಜೆ ಎರೊಲ್ ಗೊನ್ಸಾಲ್ವೆಸ್ ಮಕ್ಕಳಿಗೆ ತಿಳಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications