ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡರಾತ್ರಿ ಗುಡುಗು ಸಹಿತ ಸುರಿದ ಮಳೆ

ಮಂಗಳೂರು, ಮೇ 08: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧೆಡೆ ಕಳೆದ ರಾತ್ರಿ ಉತ್ತಮ ಮಳೆಯಾಗಿದೆ. ಮಂಗಳವಾರ (ಏ.07) ಮಧ್ಯಾಹ್ನದ ಬಳಿಕ ಜಿಲ್ಲೆಯ ವಿವಿಧೆಡೆ ಮಳೆ ಬಂದಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆ ಕೋಟೆಕಾರು, ಬೀರಿ, ಕಿನ್ನಿಗೋಳಿ ಪರಿಸರದಲ್ಲಿ ಹನಿ ಮಳೆ ಸುರಿದಿದೆ.

ಮಂಗಳೂರಿನ ಕೆಲವೆಡೆ ತಡರಾತ್ರಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯ ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಬಂದಿದೆ. ಸಜಿಪದಲ್ಲಿ ತುಂತುರು ಮಳೆಯಾಗಿದೆ. ಪುಂಜಾಲಕಟ್ಟೆ, ಮೂಡಬಿದಿರೆ, ವೇಣೂರಿನಲ್ಲಿ ಹನಿ ಮಳೆಯಾದರೆ, ಬೆಳ್ತಂಗಡಿ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

Parts of Dakshina Kannada received light rainfall

ಮರೋಡಿ, ಹೊಸಮಾರು, ತೋಟತ್ತಾಡಿ, ಬೆಳ್ತಂಗಡಿ, ಮುಂಡಾಜೆ, ಗುರಿಪಳ್ಳ ಆಸುಪಾಸು ಸಾಧಾರಣ ಮಳೆಯಾಗಿದೆ. ಪುದುವಿನಲ್ಲಿ ಒಂದು ಗಂಟೆ ಕಾಲ ಉತ್ತಮ ಮಳೆ ಬಂದಿದ್ದು, ಪುತ್ತೂರಿನಲ್ಲಿ ಸಹ ಸುಮಾರು ಒಂದು ಗಂಟೆ ಕಾಲ ಮಳೆ ಸುರಿದಿದೆ.

Parts of Dakshina Kannada received light rainfall

ಕಾಪು, ಪಡುಬಿದ್ರಿ ಮೊದಲಾದೆಡೆ ತುಂತುರು ಮಳೆಯಾಗಿದೆ. ಇಂದು ಕೂಡ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಸಂಜೆ ಮಳೆಯಾಗುವ ಸಂಭವವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+