NHAI: ಸುರತ್ಕಲ್-ನಂತೂರು-ಬಿ.ಸಿರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಹೆಚ್‌ಎಐಗೆ ಹಸ್ತಾಂತರ
NHAI: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಲಿದೆ. ಈಗಾಗಲೇ ಹಲವು ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಇದೀಗ ಸುರತ್ಕಲ್-ನಂತೂರು-ಬಿ.ಸಿರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಹೆಚ್‌ಎಐಗೆ ಹಸ್ತಾಂತರದ ಬಗ್ಗೆ ಮಹತ್ವದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಹಲವು ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮಾರ್ಪಡು ಮಾಡಿರುವ ಉದಾಹರಣೆಗಳಿವೆ. ಇನ್ನೂ ಕೂಡ ಇಂತಹ ಪ್ರಕ್ರಿಯೆಗಳನ್ನು ನಡೆಯತ್ತಲಿವೆ. ದಕ್ಷಿಣ ಕನ್ನಡದ ಸುರತ್ಕಲ್-ನಂತೂರು-ಬಿ.ಸಿ. ರಸ್ತೆ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ಅನ್ನು ಸುಧಾರಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಕೊನೆಗೂ ಶಾಶ್ವತ ಪರಿಹಾರ ಸಿಕ್ಕಂತಾಗಿದೆ.

ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿರುವ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಜಾಲವನ್ನು ಸುಧಾರಣೆ ಮಾಡುವ ಬೇಡಿಕೆ ತುಂಬಾ ವರ್ಷಗಳಿಂದ ಕೇಳಿಬಂದಿತ್ತು. ಕೊನೆಗೂ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಈ ಮೂಲಕ ಕ್ಯಾ.ಚೌಟ ಅವರ ಪರಿಶ್ರಮಕ್ಕೆ ಫಲ ದೊರೆದಂತಾಗಿದೆ. ಹೆದ್ದಾರಿ ಪ್ರಾಧಿಕಾರದ ಈ ಮಹತ್ವದ ನಿರ್ಧಾರದಿಂದ ಮಂಗಳೂರಿನ ಪ್ರಮುಖ ರಸ್ತೆ ಕಾರಿಡಾರ್‌ಗಳಲ್ಲಿ ಒಂದಾದ ಸುರತ್ಕಲ್ - ನಂತೂರು - ಬಿಸಿ.ರೋಡ್ ಹೆದ್ದಾರಿಯ ಸಮರ್ಪಕ ನಿರ್ವಹಣೆ ಮತ್ತು ಸುಧಾರಣೆಗೆ ಅನೊಮೊದನೆ ದೊರೆತಿದೆ. ಈ ಮೂಲಕ ಇಷ್ಟು ದಿನ ಇದ್ದ ಸಮಸ್ಯೆಗೆ ಶಾಶ್ವತ ಪರಿಹಾರದ ಹಾದಿ ದೊರೆತಿದೆ.
ಈ ಬಂದರು ಸಂಪರ್ಕ ಹೆದ್ದಾರಿಯು ಹಳಾಗಿದ್ದು, ಪ್ರತಿನಿತ್ಯ ಸಂಚರಿಸುವ ವಾಹನಗಳ ಓಡಾಟಕ್ಕೆ ತುಂಬಾ ಸಮಸ್ಯೆ ಆಗಿತ್ತು. ಇದನ್ನರಿತ ಸಂಸದ ಕ್ಯಾ.ಚೌಟ ಅವರು ಸುರತ್ಕಲ್-ಮಂಗಳೂರು-ಬಿಸಿರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಎನ್‌ಎಚ್‌ಎಐ ವ್ಯಾಪ್ತಿಗೆ ಹಸ್ತಾಂತರ ಮಾಡಲು ತುಂಬಾ ದಿನಗಳಿಂದ ಶ್ರಮವಹಿಸಿದ್ದರು.
ಸುರತ್ಕಲ್- ನಂತೂರು-ಬಿಸಿ ರೋಡ್ ರಸ್ತೆಯು ಪ್ರಸ್ತುತ ವಿಶೇಷ ಉದ್ದೇಶದ ಘಟವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ ವ್ಯಾಪ್ತಿಗೆ ಬರುತ್ತದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಎಜೆನ್ಸಿ ಇಲ್ಲದಿರುವುದು, ಆರ್ಥಿಕ ಸಮಸ್ಯೆ ಮತ್ತು ಸರಿಯಾಗಿ ನಿರ್ವಹಣೆ ಮಾಡದಿರುವುದು ಈ ಹೆದ್ದಾರಿ ದುಸ್ಥಿತಿಗೆ ಪ್ರಮುಖ ಕಾರಣ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕ್ಯಾ.ಚೌಟ ಅವರು ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಪಣತೊಟ್ಟಿದ್ದರು.
ಅದರಂತೆಯೇ 2024ರ ಜುಲೈ 23ರಂದು ಹೆದ್ದಾರಿ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿನಯ್ ಕುಮಾರ್ ಅವರನ್ನು ಭೇಟಿ ಮಾಡಿ, ಸುರತ್ಕಲ್-ಬಿ.ಸಿ. ರೋಡ್ ರಸ್ತೆಯಲ್ಲಿ ಭಾರೀ ಸರಕು ಸಾಗಾಟ, ಸರ್ವಿಸ್ ರಸ್ತೆಯ ಕೊರತೆ, ಅಪಘಾತ ವಲಯಗಳು, ಅಸಮರ್ಪಕ ಆಗಿರುವ ಒಳಚರಂಡಿ ಇತ್ಯಾದಿ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದು ಮನವಿಯನ್ನ ಸಹ ಸಲ್ಲಿಕೆ ಮಾಡಿದ್ದರು. ಆದ್ದರಿಂದ ಈ ಮಾರ್ಗದ ಸುಧಾರಣೆಗಾಗಿ 28.58 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿಸುವಲ್ಲಿ ಯಶಸ್ವಿ ಆಗಿತ್ತು.
ಬಳಿಕ ಕ್ಯಾ.ಚೌಟ ಅವರು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಹ ಹಲವು ಬಾರಿ ಭೇಟಿ ಮಾಡಿದ್ದರು. ಈ ವೇಳೆ ಬಂದರು ವ್ಯಾಪ್ತಿಯ ಈ ಹೆದ್ದಾರಿಯನ್ನು ಎನ್‌ಹೆಚ್‌ಎಐಗೆ ಹಸ್ತಾಂತರ ಮಾಡುವುದಕ್ಕೆ ಮನವಿ ಮಾಡಿದ್ದರು. ಕಳೆದ ಜೂನ್ 26ರಂದು ಸಚಿವರಿಗೆ ಈ ಬಗ್ಗೆ ಮನವಿ ಪತ್ರ ಸಲ್ಲಿಕೆ ಮಾಡಿದ್ದರು. ನಂತರ ಕಳೆದ ಮುಂಗಾರು ಅಧಿವೇಶನದಲ್ಲಿ ಮತ್ತೊಮ್ಮೆ ಸಚಿವ ನಿತಿನ್ ಗಡ್ಕರಿ ಅವರನ್ನು ಖುದ್ದು ಭೇಟಿಯಾಗಿ ಈ ಬಗ್ಗೆ ಮಾತನಾಡಿದ್ದರು. ಇದನ್ನು ಎನ್‌ಎಚ್‌ಎಐಗೆ ಸೇರಿಸಿದರೆ, ಈ ಭಾಗದ ಜನರಿಗೆ ತುಂಬಾ ಅನುಕೂಲ ಆಗಲಿದ ಎಂದು ಮನವರಿ ಮಾಡಿಕೊಟ್ಟಿದ್ದರು.
ಇದೀಗ ಕೊನೆಗೂ ಹೆದ್ದಾರಿ ಸಚಿವಾಲಯವು ಸುರತ್ಕಲ್‌ನಿಂದ ಬಿಸಿ ರೋಡ್‌ವರೆಗಿನ ಬಂದರು ಸಂಪರ್ಕ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಹಸ್ತಾಂತರಿಸಲು ಅನುಮೋದನೆ ನೀಡಿದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿರುವ ಸಚಿವಾಲಯವು, ಆದಷ್ಟು ಬೇಗ ಸುರತ್ಕಲ್-ಬಿಸಿರೋಡ್ ಹೆದ್ದಾರಿ ಸುಧಾರಣೆ ಹಾಗೂ ರಸ್ತೆ ಸುರಕ್ಷತೆ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಪಿಆರ್ ತಯಾರಿಸುವಂತೆ ಸೂಚನೆ ನೀಡಿದೆ.
ಜೊತೆಗೆ ಕಳೆದ ಹಲವು ವರ್ಷಗಳಿಂದ ಹಳ್ಳ ಹಿಡಿದಿರುವ ಈ ಕಾರಿಡಾರ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆತಡೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವ ಮೂಲಕ ಶಾಶ್ವತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಈ ಬಗ್ಗೆ ಸಂಸದ ಕ್ಯಾ. ಚೌಟ ಅವರು ಪ್ರತಿಕ್ರಿಯಿಸಿದ್ದು, ಸುರತ್ಕಲ್-ನಂತೂರು-ಬಿಸಿ ರೋಡ್ ಹೆದ್ದಾರಿಯನ್ನು ಎನ್‌ಹೆಚ್‌ಎಲ್‌ಎಂಎಲ್‌ನಿಂದ ಎನ್‌ಎಚ್‌ಎಐಗೆ ಹಸ್ತಾಂತರಿಸಿ ಆದೇಶ ಹೊರಡಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರ್ ಅವರಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ದಕ್ಷಿಣ ಕನ್ನಡದಲ್ಲಿ ಸರಕು ಸುಧಾರಣೆ ಹಾಗೂ ಜಿಲ್ಲೆಯ ಆರ್ಥಿಕ ಚಟುವಟಿಕೆ ಅಭಿವೃದ್ಧಿಗೆ ಇದು ಮಹತ್ವದ ನಿರ್ಧಾರ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು.












Click it and Unblock the Notifications