• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರಿನಲ್ಲಿ ಇನ್ನು ಪಿಜಿ, ಹಾಸ್ಟೆಲ್ ನಡೆಸಲು ಅನುಮತಿ ಕಡ್ಡಾಯ

|

ಮಂಗಳೂರು, ಜುಲೈ13: ಮಂಗಳೂರು ನಗರದಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದೊಂದಿಗೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಇದರಿಂದಾಗಿ ನಗರದಲ್ಲಿ ಪಿಜಿ, ಹಾಸ್ಟೆಲ್ ಗಳು ಹಾಗೂ ಇತರ ಸರ್ವೀಸ್ ಅಪಾರ್ಟ್ ಮೆಂಟ್‌ಗಳಿಗೆ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದೆ.

ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಹಾಸ್ಟೆಲ್, ಪಿಜಿ, ಸರ್ವೀಸ್ ಅಪಾರ್ಟ್ ‌ಮೆಂಟ್‌ಗಳು ಹಾಗೂ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲೀಕರು, ಪಾಲುದಾರರು, ಆಡಳಿತ ಮಂಡಳಿ ಕಡ್ಡಾಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಬೇಕೆಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ರವರು ಆದೇಶದಲ್ಲಿ ತಿಳಿಸಿದ್ದಾರೆ.

ಕುಖ್ಯಾತ ದನಗಳ್ಳನನ್ನು ಬಂಧಿಸಿದ ಮಂಗಳೂರು ಪೊಲೀಸರು

ಆಯುಕ್ತರ ಆದೇಶದಂತೆ, ಈ ಸಂಸ್ಥೆಗಳ ಮಾಲೀಕರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ವ್ಯಾಪ್ತಿಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು. ವಾಸ್ತವ್ಯವಿರುವ ವಿದ್ಯಾರ್ಥಿಗಳ ಹೆಸರು, ದೂರವಾಣಿ ಸಂಖ್ಯೆ ಹಾಗೂ ಗುರುತಿನ ಚೀಟಿಯನ್ನು ಠಾಣೆಗೆ ನೀಡಬೇಕು. ವಿದೇಶಿ ವಿದ್ಯಾರ್ಥಿಗಳು ಈ ಸಂಸ್ಥೆಗಳಲ್ಲಿ ವಾಸ್ತವ್ಯವಿದ್ದಲ್ಲಿ ಅವರು ವಾಸ್ತವ್ಯಕ್ಕೆ ಬಂದ 15 ದಿನಗಳ ಒಳಗೆ ಅವರ ಪೂರ್ಣ ಮಾಹಿತಿಯೊಂದಿಗೆ ಪಾಸ್‌ಪೋರ್ಟ್ ಹಾಗೂ ಅವರ ವೀಸಾ ವಿವರವನ್ನು ಠಾಣೆಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ವಾಸ್ತವ್ಯ ತೆರವುಗೊಳಿಸಿದಾಗಲೂ ವಿವರಗಳನ್ನು ಠಾಣಾಧಿಕಾರಿಗೆ ಸಲ್ಲಿಸಬೇಕು. ಸಿಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸುವುದು, ಸಿಸಿ ಟಿ.ವಿಗಳ ಫುಟೇಜ್ ಗಳು ಕನಿಷ್ಠ 30 ದಿನಗಳ ಅವಧಿಗೆ ವೀಕ್ಷಣೆಗೆ ಲಭ್ಯವಿರುವಂತೆ ಡಿವಿಆರ್ ‌ಗಳಿಗೆ ದಾಸ್ತಾನು ಮಾಡಿಕೊಳ್ಳಬೇಕಾಗಿ ತಿಳಿಸಿದ್ದಾರೆ.

English summary
Mangaluru plice commissioner Sandeep Patil issued an order that to run PG ,hostel service apartments in Mangaluru, permission should be must.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X