ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಲೇಜು ವಿದ್ಯಾರ್ಥಿಗಳಿಗೆ ಕೊಕೇನ್ ಮಾರುತ್ತಿದ್ದ ವ್ಯಕ್ತಿ ಬಂಧನ

|
Google Oneindia Kannada News

ಮಂಗಳೂರು ಜೂನ್ 20: ಮಂಗಳೂರು ಪೊಲೀಸರು ಮಾದಕ ವಸ್ತುಗಳ ಮಾರಾಟ ಜಾಲ ಭೇದಿಸುವಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಕೊಕೇನ್ ಸರಬರಾಜು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

 ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿ ಬಂಧನ ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿ ಬಂಧನ

ಕೊಕೇನ್ ಸರಬರಾಜು ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ಕೊಕೇನ್ ಸಮೇತ ಮೋನಿಶ್ ಎಂಬಾತನನ್ನು ಬಂಧಿಸಿದ್ದಾರೆ. ನಗರದ ಸುಲ್ತಾನ್ ಬತ್ತೇರಿ ಬಳಿ ಆರೋಪಿ ಮೋನಿಶ್ ನನ್ನು ಬಂಧಿಸಲಾಗಿದೆ.

person arrested for selling cocaine in Mangaluru

ಬಂಧಿತ ಆರೋಪಿಯಿಂದ 16 ಗ್ರಾಂ ತೂಕದ 1,60,000 ಮೌಲ್ಯದ ಕೊಕೇನ್, ಎರಡು ಮೊಬೈಲ್ ಫೋನ್, ಡಿಜಿಟಲ್ ತೂಕದ ಸ್ಕೇಲ್ ಹಾಗೂ ಒಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 2,81,500 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈತ ಮುಂಬೈನಿಂದ ಮಾದಕ ವಸ್ತುವನ್ನು ತಂದು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ.

ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಇಬ್ಬರ ಬಂಧನಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಇಬ್ಬರ ಬಂಧನ

ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

English summary
Mangaluru CCB police arrested youth for trying to sell cocaine to college students in mangaluru. Arrested identified as Monish.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X