ಮದುವೆಯಾಗುವ ಛಾಯಾಗ್ರಾಹಕ ಸ್ಮಶಾನ ಸೇರಿದ
ಮೂಡುಬಿದಿರೆ, ಅಕ್ಟೋಬರ್, 16 : ನಗರದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಬಳಿ ಕಾರಿಗೆ ಬಸ್ಸು ಢಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಛಾಯಾಗ್ರಾಕನೊಬ್ಬ ಸಾವನ್ನಪ್ಪಿದ ಘಟನೆ ಅಕ್ಟೋಬರ್ 14ರ ಬುಧವಾರ ಸಂಜೆ ನಡೆದಿದೆ.
ಶಿರ್ತಾಡಿ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಧರ ಆಚಾರ್ಯ ಅವರ ತೃತೀಯ ಪುತ್ರ ಹರೀಶ್ ಆಚಾರ್ಯ(29) ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾನೆ. ಹರೀಶ್ ಮೂಡುಬಿದಿರೆಯಲ್ಲಿ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದು, ಅ.25ರ ಭಾನುವಾರದಂದು ಶ್ರೀ ಮಹಾವೀರ ಭವನದಲ್ಲಿ ಮದುವೆ ನಿಗಧಿಯಾಗಿತ್ತು.[ಬೆಂಗಳೂರು: ಟ್ಯಾಂಕರ್ ಹರಿದು ಸೆಂಟ್ ಕ್ಯಾಥರಿನ್ ಶಾಲೆ ಶಿಕ್ಷಕಿ ಸಾವು]

ಹರೀಶ್ ಅವರು ಕಾರಿನಲ್ಲಿ ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಬಳಿ ಬರುತ್ತಿದ್ದಾಗ ಕಾರಿಗೆ ಬಸ್ಸು ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ಹಿಂದಕ್ಕೆ ತಿರುಗಿದ್ದು, ಹಿಂಬದಿಯಲ್ಲಿ ಬರುತ್ತಿದ್ದ ಟೆನ್ವೀಲರ್ ಕಾರಿನ ಎದುರು ಭಾಗಕ್ಕೆ ಢಿಕ್ಕಿಯಾಗಿದ್ದು, ಹರೀಶ್ ತೀವ್ರವಾಗಿ ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡ ಹರೀಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications