ಮಂಗಳೂರು : ಕೊಲೆಗೆ ಸಂಚು ರೂಪಿಸಿದ್ದ ಐವರ ಬಂಧನ
ಮಂಗಳೂರು, ಆಗಸ್ಟ್ 30 : ಕೊಲೆಗೆ ಸಂಚು ರೂಪಿಸಿದ್ದ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲದ ಮದನಿ ನಗರದ ತಸ್ಲೀಂ (23), ಪವಾಝ್ (22), ಕುರ್ಷಿದ್ (23), ರಮೀಝ್ (21) ಎಲ್ಯಾರ್ ಪದವಿನ ನೌಷಾದ್ (32) ಎಂದು ಗುರುತಿಸಲಾಗಿದೆ.

ಉಳ್ಳಾಲದ ಮದನಿ ನಗರದ ಗ್ಯಾರೇಜ್ ಯೊಂದರ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಮಚ್ಚು, ರಾಡು, ಮೆಣಸಿನ ಹುಡಿ, ಚೂರಿಯನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳು ಕೊಲೆ ನಡೆಸುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳು ಯಾರನ್ನು ಕೊಲೆ ಮಾಡುವ ಉದ್ದೇಶ ಹೊಂದಿದ್ದರು ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ .
ಹತ್ಯೆ ಮಾಡುವ ಉದ್ದೇಶ ಹೊಂದಿದ್ದ ತಂಡದ ಕುರಿತು ಮಾಹಿತಿ ಪಡೆದ ಪೊಲೀಸರ ತಂಡ, ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಎಸಿಪಿ ರಾಮರಾವ್ ಹಾಗೂ ಸಿಸಿಬಿ ಪೊಲೀಸರ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದೆ.












Click it and Unblock the Notifications