ದಕ್ಷಿಣ ಕನ್ನಡದಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಆರಂಭ

ದಕ್ಷಿಣ ಕನ್ನಡ, ಆಗಸ್ಟ್ 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 270 ಹೊಸ ಕೋವಿಡ್ ಪ್ರಕರಣಗಳು ಸೋಮವಾರ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 12,713ಕ್ಕೇ ಏರಿಕೆಯಾಗಿದೆ.

Recommended Video

      Darshan Reaction on Sandalwood Drug Mafia | Oneindia Kannada

      ಜಿಲ್ಲೆಯ ವೆಲ್ ಲಾಕ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಪ್ಲಾಸ್ಮಾ ಥೆರಪಿಯನ್ನು ಆರಂಭಿಸಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,556.

      ಪ್ಲಾಸ್ಮಾ ಥೆರಪಿ ಆರಂಭಿಸುವ ಕುರಿತು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ. ಮಾಹಿತಿ ನೀಡಿದ್ದಾರೆ. "ಪ್ಲಾಸ್ಮಾ ಥೆರಪಿ ಆರಂಭಿಸಲು ಈಗಾಗಲೇ ಕಟ್ಟಡವನ್ನು ಗುರುತಿಸಲಾಗಿದೆ. ಇದಕ್ಕಾಗಿ ಯಂತ್ರವನ್ನು ಖರೀದಿ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.

      Plasma Therapy At Wenlock Hospital Shortly

      "ಪ್ಲಾಸ್ಮಾ ಥೆರಪಿಗೆ ಒಪ್ಪಿಗೆ ನೀಡುವಂತೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಯಂತ್ರಗಳನ್ನು ಖರೀದಿ ಮಾಡಿ ಜೋಡಣೆ ಮಾಡಲಾಗುತ್ತದೆ. ಬಳಿಕ ಲೈಸೆನ್ಸ್ ನೀಡುವ ಮೊದಲು ಅವುಗಳನ್ನು ಪರಿಶೀಲನೆ ಮಾಡಲಾಗುತ್ತದೆ" ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಜನರು ಆತಂಕಗೊಳ್ಳುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲಾಗಿದೆ. ಪ್ರತಿದಿನ 2000 ಮಾದರಿಗಳ ಪರೀಕ್ಷೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

      ಮಂಗಳೂರು ಮತ್ತು ಬಂಟ್ವಾಳ ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. 51 ಮೊಬೈಲ್ ಆಂಟಿಜೆನ್ ಟೆಸ್ಟ್‌ಗಳನ್ನು ಮಾಡುವ ತಂಡಗಳನ್ನು ಜಿಲ್ಲೆಯಲ್ಲಿ ರಚನೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

      ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. 366 ಕೋವಿಡ್ ಸೋಂಕಿತರು ಇದುವರೆಗೂ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+